ರಾಜ್ಯದ ಕರಾವಳಿ ಭಾಗದಲ್ಲಿ ಮಳೆಯ ಆರ್ಭಟ ತೀವ್ರಗೊಂಡಿದ್ದು, ಶನಿವಾರ ಕರಾವಳಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಯಿತು. ಮುಂದನ ಜೈ 5 ರಿಂದ 9ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಈ ಭಾಗದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಐದೂ ದಿನಗಳು ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ. ಗಂಟೆಗೆ 45ರಿಂದ 55 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿರುವುದರಿಂದ ಮೀನುಗಾರರು ಕಡಲಿಗೆ ಇಳಿಯದಂತೆ ಇಲಾಖೆ ಎಚ್ಚರಿಸಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ ಪ್ರಮಾಣ ತಗ್ಗಿದ್ದು, ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.ಶಿವಮೊಗ್ಗ, ಧಾರವಾಡ, ಬಳ್ಳಾರಿ, ಚಿತ್ರದುರ್ಗ, ರಾಯಚೂರು, ಯಾದಗಿರಿ, ಬೀದರ್, ಕಲಬುರಗಿ, ವಿಜಯಪುರ, ಕೊಪ್ಪಳ ಸೇರಿದಂತೆ ಇತರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.