1. ಸುದ್ದಿಗಳು

Saalumarada Thimmakka : ಕಾಲು ಜಾರಿ ಬಿದ್ದ ಸಾಲುಮರದ ತಿಮ್ಮಕ್ಕ; ಆಸ್ಪತ್ರೆಗೆ ದಾಖಲು!

Kalmesh T
Kalmesh T
Padmashree awardee saalumarada thimmakka admitted to hospital in bangalore

saalumarada thimmakka admitted to hospital : ಕಾಲು ಜಾರಿ ಬಿದ್ದ ಸಾಲುಮರದ ತಿಮ್ಮಕ್ಕ ಅವರನ್ನು ಬೆಂಗಳೂರಿನ ಜಯನಗರದ ಅಪೊಲೊ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಮರಗಳನ್ನೇ ಮಕ್ಕಳಂತೆ ಮಮಕಾರದಿಂದ ನೀರೆರೆದು ಪೋಷಿಸಿ ಮಾದರಿಯಾಗಿದ್ದ ಮಹಾತಾಯಿ ಪದ್ಮಶ್ರೀ ಪುರಸ್ಕೃತರಾದ ಸಾಲುಮರದ ತಿಮ್ಮಕ್ಕ ಅವರು ಜಾರಿಬಿದ್ದು ಗಾಯಗೊಂಡು ಬೆಂಗಳೂರಿನ ಜಯನಗರ ಅಪೊಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಾಲು ಜಾರಿ ಬಿದ್ದಿದ್ದರಿಂದ ಬೆನ್ನು ಮೂಳೆಗೆ ಪೆಟ್ಟಾಗಿದ್ದು, ಸದ್ಯ ತಿಮ್ಮಕ್ಕ ಅವರಿಗೆ ಜಯನಗರ ಅಪೋಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಪೋಲೊ ಆಸ್ಪತ್ರೆಯ ವೈದ್ಯರು ಮಾಹಿತಿ ನೀಡಿದ್ದಾರೆ.

ಭಾನುವಾರ ಸಂಜೆ ಬೆಂಗಳೂರಿನ ಜಯನಗರದ ನಿವಾಸದಲ್ಲಿ ಸಾಲುಮರದ ತಿಮ್ಮಕ್ಕ ಅವರು ಕಾಲು ಜಾರಿ ಬಿದ್ದಿದ್ದರು. ಹೀಗಾಗಿ ಅವರನ್ನ ಜಯನಗರ ಅಪೋಲೊ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಸದ್ಯ ಆಸ್ಪತ್ರೆಯಲ್ಲಿ ಸಾಲು ಮರದ ತಿಮ್ಮಕ್ಕನವರಿಗೆ ಎಂಆರ್‌ಐ ಸ್ಕ್ಯಾನಿಂಗ್ ಮಾಡಲಾಗುತ್ತಿದೆ. ಕಾಲು ಜಾರಿ ಬಿದ್ದ ಹಿನ್ನೆಲೆಯಲ್ಲಿ ಬೆನ್ನು ಮೂಳೆಯಲ್ಲಿ ನೋವು ಕಾಣಿಸಿಕೊಂಡಿದೆ.

ಆದ್ದರಿಂದ ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.

ಹಾಸನದಿಂದ ಬೆಂಗಳೂರಿಗೆ ಬಂದಿದ್ದ ಅವರು, ಗೃಹ ಸಚಿವ ಪರಮೇಶ್ವರ್ ಅವರ ಹುಟ್ಟುಹಬ್ಬಕ್ಕೆ ಶುಭಾಶಯ ತಿಳಿಸಲು ಬಂದಿದ್ದರು. ಈ ಸಮಯದಲ್ಲಿ ಅವರ ಮನೆಯಲ್ಲಿ ಇದ್ದಕ್ಕಿದ್ದಂತೆ ಕಾಲುಜಾರಿ ಬಿದ್ದಿದ್ದಾರೆ.

ಸದ್ಯ ಆಸ್ಪತ್ರೆಯಲ್ಲಿ ವೈದ್ಯರು ಸೂಕ್ತ ಚಿಕಿತ್ಸೆಯನ್ನ ನೀಡುತ್ತಿದ್ದಾರೆ. ಗೃಹ ಸಚಿವ ಪರಮೇಶ್ವರ್ ಅವರು ಕೂಡ ಸಾಲುಮರದ ತಿಮ್ಮಕ್ಕನವರ ಆರೋಗ್ಯದ ಬಗ್ಗೆ ಎಲ್ಲ ಕಾಳಜಿ ವಹಿಸಿದ್ದಾರೆ.

ಸರ್ಕಾರದಿಂದ ಚಿಕಿತ್ಸೆಗೆ ಬೇಕಾದ ಸಹಾಯ ಮಾಡಲಾಗುವುದು ಎಂದು ಕೂಡ ತಿಳಿಸಿದ್ದಾರೆ ಸಾಲು ಮರದ ತಿಮ್ಮಕ್ಕನವರ ಮಗ ಉಮೇಶ್ ತಿಳಿಸಿದ್ದಾರೆ.  

Breaking news: ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಹೃದಯಾಘಾತದಿಂದ ನಿಧನ!

Published On: 07 August 2023, 05:11 PM English Summary: Padmashree awardee saalumarada thimmakka admitted to hospital in bangalore

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.