1. ಸುದ್ದಿಗಳು

ಕಾಡಾ ಪ್ರಾಧಿಕಾರಕ್ಕೆ ಅನುದಾನ ನೀಡಲು ಶಾಸಕರಿಗೆ ಪವಿತ್ರಾ ರಾಮಯ್ಯ ಮನವಿ

Basavaraja KG
Basavaraja KG

ಭದ್ರಾ ಅಚ್ಚುಕಟ್ಟು ಪ್ರದೇಶದ ವ್ಯಾಪ್ತಿಗೆ  ಬರುವ ಶಾಸಕರು ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರಕ್ಕೆ ಅನುದಾನ ನೀಡಿದರೆ ಅದನ್ನು ಬಳಸಿ ಅಚ್ಚುಕಟ್ಟು ಪ್ರದೇಶದಲ್ಲಿ ರೈತರು ಎದುರಿಸುತ್ತಿರುವ ನೂರಾರು ಸಮಸ್ಯೆಗಳನ್ನು ಪರಿಹರಿಸಲು ಅನುಕೂಲವಾಗಲಿದೆ ಜೊತೆಗೆ, ಪ್ರಾಧಿಕಾರವನ್ನು ಮಾದರಿಯಾಗಿ ಅಭಿವೃದ್ಧಿ ಪಡಿಸಲು ಸಹಕಾರಿಯಾಗಲಿದೆ ಎಂದು ಎಂದು ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷೆ ಪವಿತ್ರಾ ರಾಮಯ್ಯ ಹೇಳಿದರು.

ಚನ್ನಗಿರಿ ತಾಲೂಕು ಕತ್ತಲಗೆರೆ ಗ್ರಾಮದಲ್ಲಿರುವ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯ ಮತ್ತು ಅಧ್ಯಯನ ಕೇಂದ್ರದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ರೈತರನ್ನು ಉದ್ದೇಶಿಸಿ ಮಾತನಾಡಿದ ಅವರು, ಭದ್ರಾ ಅಚ್ಚುಕಟ್ಟು ಪ್ರದೇಶವನ್ನು ಸುಮಾರು 30 ಮಂದಿ ವಿಧಾನಸಭಾ ಸದಸ್ಯರು ಪ್ರತಿನಿಧಿಸುತ್ತಾರೆ. ಅವರೆಲ್ಲರೂ ಪ್ರಾಧಿಕಾರಕ್ಕೆ ಪ್ರತಿ ವರ್ಷ 2 ಕೋಟಿ ರೂ. ಅನುದಾನ ಒದಗಿಸಿ ಕೊಟ್ಟರೂ ಸಾಕು. ಸುಮಾರು 60 ಕೋಟಿ ರೂಪಾಯಿ ಅನುದಾನ ಲಭ್ಯವಾಗುತ್ತದೆ. ಈ ಅನುದಾನ ಬಳಸಿ ರೈತರಿಗೆ ಸೌಲಭ್ಯಗಳನ್ನು ಕಲ್ಪಿಸಬಹುದು ಎಂದರು.

ಅಚ್ಚುಕಟ್ಟು ವ್ಯಾಪ್ತಿಯಲ್ಲಿ ಪ್ರತಿಯೊಂದು ಅಭಿವೃದ್ಧಿ ಕೆಲಸವನ್ನೂ ಪ್ರಾಧಿಕಾರದ ವತಿಯಿಂದ ಮಾಡಬೇಕು. ಈ ನಿಟ್ಟಿನಲ್ಲಿ ಪ್ರತಿಯೊಬ್ಬ ಶಾಸಕರು ಆಲೋಚನೆ ಮಾಡಿ ನಮ್ಮೊಂದಿಗೆ ಕೈಜೋಡಿಸಿದರೆ ರೈತರು ಎದುರಿಸುತ್ತಿರುವ ಸಾಕಷ್ಟು ಸಮಸ್ಯೆಗಳನ್ನು ಬಗೆ ಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಜೊತೆಗೆ ಆಯಾ ಶಾಸಕರು ಒದಗಿಸಿದ ಅನುದಾನವನ್ನು ಆಯಾ ಕ್ಷೇತ್ರದ ಅಚ್ಚುಕಟ್ಟು ಅಭಿವೃದ್ಧಿಗೆ ವಿನಿಯೋಗಿಸಲಾಗುವುದು ಎಂದು ಭರವಸೆ ನೀಡಿದರು.

ನರೇಗಾ ಹಣದಲ್ಲಿ ಕೊನೆಯ ಭಾಗಕ್ಕೆ ನೀರು

ನನ್ನ ದುರಾದೃಷ್ಟ ಎಂಬAತೆ ನಾನು ಭದ್ರಾ ಕಾಡಾ ಅಧ್ಯಕ್ಷಳಾಗಿ ನೇಮಕಗೊಂಡ ಸಮಯದಲ್ಲಿ ಕೊರೊನಾ ಸೋಂಕು ಲಗ್ಗೆಯಿಟ್ಟಿತು. ಈ ಸಾಂಕ್ರಾಮಿಕ ಸೋಂಕು ಒಬ್ಬರಿಂದ ಮತ್ತೊಬ್ಬರಿಗೆ ಹರಡದಂತೆ ತಡೆಯಲು ಲಾಕ್‌ಡೌನ್ ಮಾಡಬೇಕಾದ ಅನಿವಾರ್ಯತೆ ರಾಜ್ಯ ಸರ್ಕಾರಕ್ಕೆ ಎದುರಾಯಿತು. ಪರಿಣಾಮ ಎಲ್ಲಾ ರಂಗಗಳು ಕಾರ್ಯ ಸ್ಥಗಿತಗೊಳಿಸಿ, ರಾಜ್ಯದ ಬೊಕ್ಕಸಕ್ಕೆ ಕೊಡಲಿ ಪೆಟ್ಟು ಬಿದ್ದಿದೆ. ಪರಿಣಾಮ ಅಭಿವೃದ್ಧಿ ಕಾರ್ಯಗಳಿಗೆ ಅನುದಾನದ ಕೊರತೆ ಎದುರಾಗಿದೆ. ಕೇವಲ ಸರ್ಕಾರ ಕೊಡುವ ಗೌರವಧನ ಪಡೆಯಲು ಕಚೇರಿಗೆ ಪ್ರತಿ ದಿನ ಬಂದು ಕೂರಲು ಮನಸ್ಸು ಒಪ್ಪಲಿಲ್ಲ. ಇಂತಹ ಸಮಯದಲ್ಲಿ ಸರ್ಕಾರದೊಂದಿಗೆ ನಿಲ್ಲಬೇಕು. ಸರ್ಕಾರದ ಮೇಲೆ ಒತ್ತಡ ತರಬಾರದು ಎಂದು ನಿರ್ಧರಿಸಿ ಪರ್ಯಾಯ ಮಾರ್ಗದೆಡೆಗೆ ಆಲೋಚನೆ ಮಾಡಿದಾಗ ನರೇಗಾ ಅನುದಾನ ಬಳಸಿಕೊಳ್ಳವ ಆಲೋಚನೆ ಹೊಳೆಯಿತು. ಇದರಿಂದ ಕೊನೆಯ ಭಾಗಕ್ಕೆ ನೀರು ಕೊಡಲು ಅನುಕೂಲವಾಯಿತು ಎಂದು ಹೇಳಿದರು.

ಶಿವಮೊಗ್ಗದ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯದ ನಿರ್ದೇಶಕರಾದ ನಾಗರಾಜಪ್ಪ ಮಾತನಾಡಿ, ಪವಿತ್ರಾ ರಾಮಯ್ಯ ಅವರು ಮೂಲತಃ ರೈತ ಸಂಘದಿAದ ಬಂದವರು. ಅವರಿಗೆ ರೈತರ ಪ್ರತಿಯೊಂದು ಸಮಸ್ಯೆಗಳ ಬಗ್ಗೆ ಅರಿವಿದೆ. ಮುಂದಿನ ದಿನಗಳಲ್ಲಿ ಸರ್ಕಾರದಿಂದ ಬರುವ ಅನುದಾನ ಒದಗಿಸಲು ಕೈಜೋಡಿಸುತ್ತೇವೆ. ಒಬ್ಬ ಹೆಣ್ಣು ಮಗಳಾಗಿ ಮಾಡುತ್ತಿರುವ ಸಾಧನೆ ಎಲ್ಲರೂ ಮೆಚ್ಚುವಂತಹದ್ದು ಎಂದು ಹೇಳಿದರು. ಇದರೊಂದಿಗೆ ಈ ಸ್ಥಳದಲ್ಲಿ ಕೃಷಿ ಪದವಿ ಕಾಲೇಜು ಮಾಡಲು ಎಲ್ಲಾ ರೀತಿಯ ಅನುಕೂಲವಿದ್ದು, ಸ್ಥಳೀಯ ಜನಪ್ರತಿನಿಧಿಗಳೊಂದಿಗೆ ಮಾತನಾಡಿ ಅನುದಾನ ತರಲು ಪ್ರಾಮಾಣಿಕ ಪ್ರತ್ನ ಮಾಡುತ್ತೇನೆ ಎಂದು ಭರವಸೆ ನೀಡಿದರು.

;

ರೈತ ಮುಖಂಡ ತೇಜಸ್ವಿ ಪಟೇಲ್ ಮಾತನಾಡಿ, ರಾಜ್ಯ ಸರ್ಕಾರ ಅನುದಾನ ನೀಡಿದರೆ ಅಚ್ಚುಕಟ್ಟು ಅಭಿವೃದ್ಧಿಗೆ ಅಧ್ಯಕ್ಞರು ಹಗಲು ರಾತ್ರಿ ಶ್ರಮಿಸುತ್ತಾರೆ. ಯಾವುದೇ ಭ್ರಷ್ಟಾಚಾರಕ್ಕೆ ಅವಕಾಶ ಇಲ್ಲದಂತೆ ಆಡಳಿತ ನಡೆಸುವ ಮೂಲಕ ಗುಣಮಟ್ಟದ ಕಾಮಗಾರಿಗೆ ಆದ್ಯತೆ ನೀಡುತ್ತಾರೆ. ಯಾವುದೇ ಕೆಲಸವನ್ನಾದರೂ ಸಮರ್ಥವಾಗಿ ನಿಭಾಯಯಿಸುವ ಚಾಕಚಾಕ್ಯತೆ ಅವರಲ್ಲಿದೆ ಎಂದು ಅಭಿಪ್ರಾಯಪಟ್ಟರು.

ಈ ವೇಳೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಗ್ರಾಮದ ರೈತರು “ನಮ್ಮ ಗ್ರಾಮದಲ್ಲಿ ಬಟ್ಟೆ ತೊಳೆಯುವ ಸೋಪಾನ ಕಟ್ಟೆ ವ್ಯವಸ್ಥೆ ಇಲ್ಲ ಎಂದಾಗ, ನರೇಗಾ ಯೋಜನೆಯಡಿ ಅದನ್ನು ನಿರ್ಮಿಸಿಕೊಡಲು ಅವಕಾಶವಿದ್ದು, ಯೋಜನೆ ಬಳಸಿಕೊಳ್ಳುವಂತೆ ಕಾಡಾ ಅಧ್ಯಕ್ಷೆ ಕಿವಿ ಮಾತು ಹೇಳಿದರು. ಜೊತೆಗೆ ಪ್ರತಿಯೊಬ್ಬ ರೈತು ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ನರೇಗಾ ಯೋಜನೆಯಡಿ ದೊರುಕುವ ಯೋಜನೆಗಳ ಕುರಿತು ಅಧ್ಯಯನ ನಡೆಸುವಂತೆ ಸಲಹೆ ನೀಡಿದರು.

ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯ ಸಂಶೋಧನಾ ಕೇಂದ್ರದ ಪ್ರಾಂಶುಪಾಲರಾದ ಆನಂದ್ ಕುಮಾರ್, ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಧನಂಜಯ್ ಉಪಸ್ಥಿತರಿದ್ದರು.

Share your comments

Latest feeds

More News
Krishi Jagran Kannada Magazine Subscription Online Subscription
Krishi Jagran Kannada Subscription

CopyRight - 2021 Krishi Jagran Media Group. All Rights Reserved.