News

Pension ಹಳೇ ಪಿಂಚಣೆ: ಸರ್ಕಾರಿ ನೌಕರರಿಗೆ ಮತ್ತೊಂದು ಗುಡ್‌ ನ್ಯೂಸ್‌ ನೀಡಿದ ಸರ್ಕಾರ!

02 March, 2023 10:57 AM IST By: Hitesh
Old Pension: The government gave another good news to the government employees!

ಸರ್ಕಾರಿ ನೌಕರರಿಗೆ ಮತ್ತೊಂದು ಗುಡ್‌ ನ್ಯೂಸ್‌ ನೀಡಲು ಸರ್ಕಾರ ಮುಂದಾಗಿದೆ.

ಸರ್ಕಾರಿ ನೌಕರರಿಗೆ ಶೇ 17ರಷ್ಟು ವೇತನ ಹೆಚ್ಚಳಕ್ಕೆ ಸಮ್ಮತಿ ನೀಡಿರುವ ಸರ್ಕಾರವು ಇದೀಗ ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆಯಾಗಿರುವ ಹಳೇ ಪಿಂಚಣೆ ಯೋಜನೆಯ ಅನುಷ್ಠಾನಕ್ಕೂ ಕಾರ್ಯಪ್ರವೃತ್ತವಾಗಿದೆ.  

Bank 5 ದಿನ ಮಾತ್ರ ಇನ್ಮುಂದೆ ಬ್ಯಾಂಕ್‌ ಉದ್ಯೋಗಿಗಳಿಗೆ ಕೆಲಸ ?

ರಾಜ್ಯದಲ್ಲಿ ಇದೀಗ ಜಾರಿಯಲ್ಲಿರುವ ರಾಷ್ಟ್ರೀಯ ಪಿಂಚಣಿ ಯೋಜನೆ (NPS)ಯ ಬದಲಿಗೆ ಈಗಾಗಲೇ ಅನುಷ್ಠಾನ ಮಾಡಲಾಗಿದ್ದ ಪಿಂಚಣಿ ಯೋಜನೆಯನ್ನು ಜಾರಿ ಮಾಡುವುದಕ್ಕೆ ಚಿಂತನೆ ನಡೆಸಿದೆ.

ಇನ್ನು ಕೆಲವೇ ದಿನಗಳಲ್ಲಿ ರಾಜ್ಯದಲ್ಲಿ ಚುನಾವಣೆಯೂ ಇರುವುದರಿಂದ ಸರ್ಕಾರ ಎಚ್ಚರಿಕೆಯ ಹೆಜ್ಜೆಯನ್ನು ಇರಿಸುತ್ತಿದೆ.

ಸರ್ಕಾರಿ ನೌಕರರು ಹಾಗೂ ಅವರ ಕುಟುಂಬ ವರ್ಗದವರು ಅತೀ ದೊಡ್ಡ ಮಟ್ಟದಲ್ಲಿದ್ದು, ಅವರ ಮತಗಳು ಕೈಜಾರದಂತೆ ಎಚ್ಚರಿಕೆ ವಹಿಸುತ್ತಿದೆ.

Gold Rate Today ಚಿನ್ನದ ಬೆಲೆಯಲ್ಲಿ ಮತ್ತೆ ಹೆಚ್ಚಳ!

ಪಿಂಚಣಿ ಯೋಜನೆಯನ್ನು ಜಾರಿ ಮಾಡುವುದಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು  ಬುಧವಾರ ಮುಖ್ಯ ಕಾರ್ಯದರ್ಶಿಗಳ ನೇತೃತ್ವದ ಸಮಿತಿಯನ್ನು ರಚಿಸಿ ಆದೇಶ ಹೊರಡಿಸಿದೆ.  

ಸರ್ಕಾರಿ ನೌಕರರು ಪ್ರತಿಭಟನೆ ನಡೆಸಿದ್ದ ಹಿನ್ನೆಲೆಯಲ್ಲಿ ಮಧ್ಯಂತರ ವರದಿಯ ಆಧಾರದ ಮೇಲೆ ಶೇ 17ರಷ್ಟು ವೇತನ ಹೆಚ್ಚಳವನ್ನು ಮಾಡಲಾಗಿದೆ.

ಎನ್‌ಪಿಎಸ್  ರದ್ದತಿ ಪರಿಶೀಲಿಸಿ ವರದಿ ಸಲ್ಲಿಸಲು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ಸಮಿತಿ ರಚಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಕೆಲಸದ ಅವಧಿ 9 ಗಂಟೆಯಿಂದ 12ಕ್ಕೆ: ಹೊಸ ಕಾಯ್ದೆಗೆ ರಾಜ್ಯ ಸರ್ಕಾರ ಅಸ್ತು!

Old Pension: The government gave another good news to the government employees!

ಸರ್ಕಾರದ ಆದೇಶದಲ್ಲಿ ಏನಿದೆ

ಕರ್ನಾಟಕ ಸರ್ಕಾರದ ನಡವಳಿಗಳು

ರಾಜ್ಯದಲ್ಲಿ ಜಾರಿಯಲ್ಲಿರುವ ರಾಷ್ಟ್ರೀಯ ಪಿಂಚಣಿ ಯೋಜನೆಯ ಬದಲಾಗಿ ಹಳೆಯ ಪಿಂಚಣಿ ಯೋಜನೆಯನ್ನು ಜಾರಿಮಾಡುವ ಸಾಧ್ಯತೆಗಳ ಕುರಿತು.

ಅಧ್ಯಕ್ಷರು, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಇವರ ಮನವಿ ದಿನಾಂಕ: 21.02.2023

ಪ್ರಸಾವನ:- ಕರ್ನಾಟಕ ರಾಜ್ಯದಲ್ಲಿ ದಿನಾಂಕ:01.04.2006 ರ ನಂತರ ಸರ್ಕಾರಿ ಸೇವೆಗೆ ಸೇರಿರುವ ನೌಕರರಿಗೆ

ರಾಷ್ಟ್ರೀಯ ಪಿಂಚಣಿ ಯೋಜನೆಯನ್ನು ಜಾರಿಗೆ ತರಲಾಗಿರುತ್ತದೆ. ಮೇಲೆ ಓದಲಾದ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು  

ದಿನಾಂಕ: 21.02.2023 ಮನವಿಯಲ್ಲಿ ಕರ್ನಾಟಕ ರಾಜ್ಯದಲ್ಲಿ ಪ್ರಸ್ತುತ ಜಾರಿಯಲಿರುವ ಸರ್ಕಾರಿ ನೌಕರರರಾಷ್ಟ್ರೀಯ

ಪಿಂಚಣಿ ಯೋಜನೆಗೆ ಸಂಬಂಧಿಸಿದಂತೆ ದೇಶದ ಹಲವು ರಾಜ್ಯಗಳು ರಾಷ್ಟ್ರೀಯ ಪಿಂಚಣಿ ಯೋಜನೆಯ

ಬದಲಾಗಿ ಈ ಹಿಂದೆ ಜಾರಿಯಲ್ಲಿದ್ದ ಹಳೆಯ ಪಿಂಚಣಿ ಯೋಜನೆಯನ್ನು ಅನುಷ್ಠಾನಗೊಳಿಸಿರುತ್ತವೆ,

ಅದೇ ರೀತಿ ಕರ್ನಾಟಕ ರಾಜ್ಯದಲ್ಲೂ ಸಹ ರಾಷ್ಟ್ರೀಯ ಪಿಂಚಣಿ ಯೋಜನೆಯ ಬದಲಾಗಿ ಹಳೆಯ ಪಿಂಚಣಿ ಯೋಜನೆಯನ್ನು ಜಾರಿಗೆ ತರುವಂತ ಸರ್ಕಾರವನ್ನು ಕೋರಿರುತ್ತಾರೆ.

ರಾಜ್ಯ ಸರ್ಕಾರಿ ನೌಕರರ ಸಂಘದ ಮನವಿಯನ್ನು ಪರಿಶೀಲಿಸಿದ ಸರ್ಕಾರವು ಈಗಾಗಲೇ ಹಳೆಯ ಪಿಂಚಣಿ ಯೋಜನೆ(Defined Pension Scheme)ಯನ್ನು

ಮರು ಜಾರಿ ಮಾಡಿರುವ ರಾಜ್ಯಗಳಲ್ಲಿ ಈ ಯೋಜನೆಯನ್ನು ಅನುಷ್ಠಾನಗೊಳಿಸಿರುವ ಕುರಿತು ಕೈಗೊಂಡಿರುವ ಕ್ರಮದ ಬಗ್ಗೆ ಅಧ್ಯಯನ ನಡೆಸಿ ವರದಿ ಸಲ್ಲಿಸಲು

ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲು ತೀರ್ಮಾನಿಸಿ ಈ ಕೆಳಕಂಡಂತೆ ಆದೇಶಿಸುತ್ತದೆ.

ಸರ್ಕಾರದ ಆದೇಶ ಸಂಖ್ಯೆ: ಆಇ-ಪಿಇಎನ್/ 89/ 2023 ಬೆಂಗಳೂರು, ದಿನಾಂಕ: 01 ಮಾರ್ಚ್ 2023

ಪ್ರಸ್ತಾವನೆಯನ್ನು ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ಕರ್ನಾಟಕ ರಾಜ್ಯದಲ್ಲಿ ಪ್ರಸ್ತುತ ಜಾರಿಯಲ್ಲಿರುವ ಸರ್ಕಾರಿ ನೌಕರರ ರಾಷ್ಟ್ರೀಯ ಪಿಂಚಣಿ ಯೋಜನೆಗೆ

ಸಂಬಂಧಿಸಿದಂತ ಈಗಾಗಲೇ ಹಳೆಯ ಪಿಂಚಣಿ ಯೋಜನೆ(Defined Pension Scheme)ಯನ್ನು ಮರು ಜಾರಿ ಮಾಡಿರುವ ರಾಜ್ಯಗಳಲ್ಲಿ

ಈ ಯೋಜನೆಯನ್ನು ಅನುಷ್ಠಾನಗೊಳಿಸಿರುವ ಕುರಿತು ಕೈಗೊಂಡಿರುವ ಕ್ರಮದ ಬಗ್ಗೆ ಅಧ್ಯಯನ ನಡೆಸಿ ವರದಿ ಸಲ್ಲಿಸಲು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ ಆದೇಶಿಸಿದೆ.

ಮುಂದುವರೆದು, ಸಮಿತಿಯು ರಾಷ್ಟ್ರೀಯ ಪಿಂಚಣಿ ಯೋಜನೆಯ ಸೌಲಭ್ಯವನ್ನು ಸ್ಥಗಿತಗೊಳಿಸಿ ಹಳೆಯ ಪಿಂಚಣಿ ಯೋಜನೆಯನ್ನು ಪನರ್ ಸ್ಥಾಪಿಸುವ ನಿರ್ಧಾರಗಳ ಕೊಂಡಿರುವ ರಾಜ್ಯಗಳಿಗೆ ಭೇಟಿ ನೀಡಿ ಸೂಕ್ತ

ಅಧ್ಯಯನ ನಡೆಸಿ ಎರಡು ತಿಂಗಳೊಳಗೆ ವರದಿಯನ್ನು ಸಲ್ಲಿಸತಕ್ಕದ್ದು. ಎಂದು ಆದೇಶದಲ್ಲಿ ತಿಳಿಸಲಾಗಿದೆ.