News

ಕೊಳವೆ ಬಾವಿ ಕೊರೆದರೆ ಬೀಳುತ್ತೆ ಕ್ರಿಮಿನಲ್ ಕೇಸ್ !

24 October, 2020 4:10 PM IST By:

ರಾಜ್ಯದಲ್ಲಿ ಅಂತರ್ಜಲ ಪ್ರಮಾಣ ತೀವ್ರವಾಗಿ ಕುಸಿಯುತ್ತಿರುವ  ಹಿನ್ನೆಲೆಯಲ್ಲಿ ಅಧಿಸೂಚಿತ ಪ್ರದೇಶಗಳಲ್ಲಿ  ಹೊಸ ಕೊಳವೆಬಾವಿ ಕೊರೆಯದಂತೆ ಕರ್ನಾಟಕ ಅಂತರ್ಜಲ ಪ್ರಾಧಿಕಾರ ಅಧಿಸೂಚನೆ ಹೊರಡಿಸಿದೆ. ಈ ನಿಯಮ ಉಲ್ಲಂಘಿಸಿದ್ದೇ ಆದರೆ ಕ್ರಿಮಿನಲ್‌ ಮೊಕದ್ದಮೆ ಸಹಿತ ಕಠಿಣ ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಲಾಗಿದೆ.

ಸಣ್ಣ ನೀರಾವರಿ ಇಲಾಖೆ ಅಧೀನದ ಕರ್ನಾಟಕ ಅಂತರ್ಜಲ ಪ್ರಮಾಣ ದೊಡ್ಡ ಮಟ್ಟದಲ್ಲಿ ಕುಸಿದಿದೆ. ಹೀಗಾಗಿ ರಾಜ್ಯದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಾಗಲಕೋಟೆ, ಬೆಳಗಾವಿ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಗದಗ, ಹಾಸನ, ಕೋಲಾರ, ರಾಮನಗರ, ತುಮಕೂರು ಜಿಲ್ಲೆಗಳ ಒಟ್ಟು 45 ತಾಲೂಕುಗಳಲ್ಲಿ ಹೊಸದಾಗಿ ಕೊಳವೆ ಬಾವಿಗಳನ್ನು ಕೊರೆಯದಂತೆ ನಿರ್ದೇಶಿಸಲಾಗಿದೆ. ಒಂದುವೇಳೆ ಅತ್ಯಂತ ಅನಿವಾರ್ಯ ಸಂದರ್ಭಗಳಲ್ಲಿ ಮಾತ್ರವೇ ಜಿಲ್ಲಾ ಮಟ್ಟದ ಸಮಿತಿಯ ಅನುಮತಿ ಪಡೆದು ಕೊರೆಸಬಹುದು ಎಂದು ಸೂಚನೆ ನೀಡಿದ್ದಾರೆ.

ರಾಜ್ಯದಲ್ಲಿ 15 ಜಿಲ್ಲೆಗಳ 45 ತಾಲೂಕುಗಳನ್ನು ಅಧಿಸೂಚಿತ ಪ್ರದೇಶಗಳೆಂದು ಗುರುತಿಸಲಾಗಿದೆ. ಅಂತರ್ಜಲ ಬಳಕೆದಾರರು ಕಡ್ಡಾಯವಾಗಿ ಪ್ರಾಧಿಕಾರದಲ್ಲಿ ನೋಂದಣಿ ಮಾಡಿಕೊಳ್ಳಬೇಕು. ಇಲ್ಲವಾದಲ್ಲಿ ಅಂತಹ ಕೊಳವೆ ಬಾವಿಗೆ ವಿದ್ಯುತ್‌ ಸಂಪರ್ಕ ಮತ್ತು ಸಹಾಯಧನ ನೀಡಲಾಗುವುದಿಲ್ಲ ಎಂದು ತಿಳಿಸಿದ್ದಾರೆ. ಜೊತೆಗೆ ಅಧಿಸೂಚಿತ ಪ್ರದೇಶಗಳಲ್ಲಿ ಅನುಮತಿ ಇಲ್ಲದೆ ಕೊಳವೆಬಾವಿ ಕೊರೆದರೆ, ಸೆಕ್ಷನ್‌ ೩೨ ರ ಅನ್ವಯ ಶಿಕ್ಷಾರ್ಹ ಅಪರಾಧವಾಗಿದೆ. ಕೊಳವೆ ಬಾವಿ ಕೊರೆಸುವ ಭೂಮಾಲೀಕರು ಮತ್ತು ಕೊಳವೆಬಾವಿ ಕೊರೆಯುವ ಯಂತ್ರದ ಮಾಲೀಕರಿಬ್ಬರನ್ನೂ ಅಪರಾಧಿಗಳು ಎಂದು ಪರಿಗಣಿಸಿ, ಅಂತಹವರ ವಿರುದ್ಧ ಕ್ರಿಮಿನಲ್‌ ಕೇಸ್‌ ದಾಖಲಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಎಲ್ಲೆಲ್ಲಿ ಕೊಳವೆ ಬಾವಿ ಕೊರೆಯಲು ನಿಷೇಧ

ಜಿಲ್ಲೆ

ತಾಲೂಕು

ಬೆಂಗಳೂರು ನಗರ

ಆನೇಕಲ್‌, ಬೆಂಗಳೂರು ಪೂರ್ವ, ಬೆಂಗಳೂರು ದಕ್ಷಿಣ

ಬೆಂಗಳೂರು ಗ್ರಾಮಾಂತರ

ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ, ನೆಲಮಂಗಲ

ಬಾಗಲಕೋಟೆ

ಬಾಗಲಕೋಟೆ, ಬಾದಾಮಿ

ಬೆಳಗಾವಿ

ಅಥಣಿ, ರಾಮದುರ್ಗ, ಸವದತ್ತಿ

ಬಳ್ಳಾರಿ  

ಹಗರಿಬೊಮ್ಮನಹಳ್ಳಿ, ಹರಪ್ಪನಹಳ್ಳಿ

ಚಾಮರಾಜನಗರ

ಗುಂಡ್ಲುಪೇಟೆ

ಚಿಕ್ಕಬಳ್ಳಾಪುರ

ಚಿಕ್ಕಬಳ್ಳಾಪುರ, ಚಿಂತಾಮಣಿ, ಗುಡಿಬಂಡೆ, ಶಿಡ್ಲಘಟ್ಟ, ಬಾಗೇಪಲ್ಲಿ, ಗೌರಿಬಿದನೂರು

ಚಿಕ್ಕಮಗಳೂರು

ಕಡೂರು

ಚಿತ್ರದುರ್ಗ

ಚಿತ್ರದುರ್ಗ, ಹೊಸದುರ್ಗ, ಹೊಳಲ್ಕೆರೆ, ಹಿರಿಯೂರು, ಚಳ್ಳಕೆರೆ ದಾವಣಗೆರೆ  ಚನ್ನಗಿರಿ, ಜಗಳೂರು

ಗದಗ

ಗದಗ-ರೋಣ

ಹಾಸನ

ಅರಸಿಕೆರೆ

ಕೋಲಾರ

ಕೋಲಾರ, ಬಂಗಾರಪೇಟೆ, ಮಾಲೂರು, ಮುಳಬಾಗಿಲು,    ಶ್ರೀನಿವಾಸಪುರ

ರಾಮನಗರ

ಕನಕಪುರ

ತುಮಕೂರು

ತುಮಕೂರು, ಕೊರಟಗೆರೆ, ಚಿಕ್ಕನಾಯಕನಹಳ್ಳಿ, ಮಧುಗಿರಿ, ತಿಪಟೂರು