News

12ನೇ ದಿನವೂ ಏರಿತು ಪೆಟ್ರೋಲ್‌, ಡೀಸೆಲ್‌ ದರ

20 February, 2021 10:15 AM IST By:
Petrol

ಪೆಟ್ರೋಲ್‌, ಡೀಸೆಲ್ ದರ ಮತ್ತೆ ಹೆಚ್ಚಳವಾಗಿದೆ. ಈಗಾಗಲೇ ಕಳೆದ 11 ದಿನಗಳಿಂದ ಏರಿಕೆಯಾಗುತ್ತಿರುವ ಪೆಟ್ರೋಲ್ ಡೀಸೆಲ್ ಬೆಲೆ ಗ್ರಾಹಕರ ಜೇಬು ಖಾಲಿ ಮಾಡುತ್ತಿತ್ತು. ಮತ್ತೆ  12ನೇ ದಿನ (ಶುಕ್ರವಾರ) ಸಹ ತೈಲಬೆಲೆ ಏರಿಕೆಯಾಗಿದೆ. ಪೆಟ್ರೋಲ್‌ಗೆ 39 ಪೈಸೆ ಏರಿದರೆ, ಪ್ರತೀ ಒಂದು ಲೀಟರ್‌ ಡೀಸೆಲ್‌ ದರದಲ್ಲಿ 37 ಪೈಸೆ ಏರಿಕೆ ಕಂಡಿದೆ.

ಪೆಟ್ರೋಲ್ ಬೆಲೆಯು ದೆಹಲಿ ಯಲ್ಲಿ ಶುಕ್ರವಾರ ಲೀಟರ್‌ಗೆ  90ರ ಗಡಿದಾಟಿದೆ. ಸತತ ಹನ್ನೊಂದನೆಯ ದಿನವೂ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಆಗಿದೆ. ಇದರ ಪರಿಣಾಮವಾಗಿ ದೆಹಲಿಯಲ್ಲಿ ಪೆಟ್ರೋಲ್ ಬೆಲೆ  90.58 ಆಗಿದೆ. ಅಲ್ಲಿ ಡೀಸೆಲ್‌ ಬೆಲೆ ಲೀಟರ್‌ಗೆ  80.97 ಆಗಿದೆ. ಮುಂಬೈನಲ್ಲಿ ಪೆಟ್ರೋಲ್ ಬೆಲೆಯು 97.00ಕ್ಕೆ ಹೆಚ್ಚಳವಾಗಿದೆ.

ರಾಜ್ಯ ಹಾಗೂ ಕೇಂದ್ರಗಳು ಪೆಟ್ರೋಲ್‌, ಡೀಸೆಲ್‌ ಮೇಲೆ ವಿಧಿಸಿರುವ ಸುಂಕವನ್ನು ಕಡಿತಗೊಳಿಸುವಂತೆ ಪ್ರತಿಭಟನೆಗಳು ನಡೆಯುತ್ತಿದೆ. ಆದರೆ ಸುಂಕ ಕಡಿತಗೊಳಿಸುವುದಿಲ್ಲ ಎಂದು ಈಗಾಗಲೇ ಕೇಂದ್ರ ಸ್ಪಷ್ಟನೆ ನೀಡಿದೆ.

 ಕಳೆದ ಹನ್ನೊಂದು ದಿನಗಳ ಅವಧಿಯಲ್ಲಿ ಪೆಟ್ರೋಲ್ ಬೆಲೆಯಲ್ಲಿ  3.24ರಷ್ಟು ಹೆಚ್ಚಳ ಆಗಿದೆ. 2010ರಲ್ಲಿ ಪೆಟ್ರೋಲ್‌ ಬೆಲೆಯನ್ನು ನಿಯಂತ್ರಣಮುಕ್ತಗೊಳಿಸಿದ ನಂತರ ಆಗಿ ರುವ ದಾಖಲೆಯ ಹೆಚ್ಚಳ ಇದು. ಡೀಸೆಲ್ ಬೆಲೆ ಹನ್ನೊಂದು ದಿನಗಳಲ್ಲಿ  3.47ರಷ್ಟು ಹೆಚ್ಚಾಗಿದೆ. ಬೆಂಗಳೂರಿನಲ್ಲಿ ಪೆಟ್ರೋಲ್‌  93.21ಕ್ಕೆ, ಡೀಸೆಲ್‌  85.44ಕ್ಕೆ ಮಾರಾಟವಾಗಿದೆ.

ಇನ್ನು ಈಗಾಗಲೇ, ರಾಜಸ್ಥಾನ, ಮಧ್ಯಪ್ರದೇಶ ರಾಜ್ಯಗಳಲ್ಲಿ ಪೆಟ್ರೋಲ್ ದರ ನೂರರ ಗಡಿಯತ್ತ ದಾಟಿದೆ. ಇನ್ನು ಜನರ ಅತ್ಯವಶ್ಯಕ ವಸ್ತುವಾಗಿರುವ ಇಂಧನದ ದರ ಏರಿಕೆಯಿಂದ ಜನ ಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ.