1. ಸುದ್ದಿಗಳು

ಮಹಿಳಾ ಮತದಾರರಲ್ಲಿ ಅರಿವು ಮೂಡಿಸಲು ಪಿಂಕಥಾನ್!

Hitesh
Hitesh
Pinkathon to create awareness among women voters!

ಕರ್ನಾಟಕ ಚುನಾವಣೆಗೆ ಇನ್ನು ಕೇವಲ ಎರಡು ದಿನ ಬಾಕಿ ಉಳಿದಿದೆ. ಬಿಬಿಎಂಪಿಯು ಈ ಬಾರಿ ವಿನೂತನವಾಗಿ ಮತದಾನ ಜಾಗೃತಿ ಮೂಡಿಸಿದೆ.

ಅದರಲ್ಲಿ ಮಹಿಳಾ ಮತದಾರರಲ್ಲಿ ಅರಿವು ಮೂಡಿಸುವ ಪಿಂಕಥಾನ್ ಸಹ ಒಂದಾಗಿದೆ.  

“ಮಹಿಳೆಯರು ಹೆಚ್ಚು ಸಂಖ್ಯೆಯಲ್ಲಿ ಬಂದು ನಮ್ಮ ಸಂವಿಧಾನ ನೀಡಿರುವಂತಹ ಮತದಾನದ ಅಧಿಕಾರವನ್ನು ಚಲಾಯಿಸುವುದರ ಜೊತೆಗೆ

ಎಲ್ಲರಲ್ಲೂ ಮತದಾನ ಮಾಡಲು ಪ್ರೇರೇಪಿಸೋಣ” ಎಂದು ಹೆಚ್ಚುವರಿ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ತಿಳಿಸಿದ್ದಾರೆ.   

ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಮತದಾನದ ಪ್ರಮಾಣ ಹೆಚ್ಚುವಂತೆ ಮಾಡುವ ಉದ್ದೇಶದಿಂದ ಮಹಿಳಾ ಮತದಾರರಲ್ಲಿ

ಅರಿವು ಮೂಡಿಸಲು ಪುರಭವನ(ಟೌನ್‌ಹಾಲ್)ದಲ್ಲಿ ಹಮ್ಮಿಕೊಂಡಿದ್ದ ಪಿಂಕಥಾನ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.  

ನಗರದಲ್ಲಿ ಎಲ್ಲಾ ಮಹಿಳೆಯರು ಮತಗಟ್ಟೆಗಳಿಗೆ ಬಂದು ತಪ್ಪದೆ ಮತದಾನ ಮಾಡುವ ಸಲುವಾಗಿ ಪಿಂಕ್ ಬೂತ್‌ಗಳ ವ್ಯವಸ್ಥೆ ಮಾಡಲಾಗಿದೆ.

ಎಲ್ಲರೂ ತಪ್ಪದೆ ಮತ ಚಲಾಯಿಸಬೇಕು ಎಂದು ಹೇಳಿದರು.

ಜಿಲ್ಲಾ ಚುನಾವಣಾಧಿಕಾರಿ ಮತ್ತು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಮಾತನಾಡಿ, ನಗರದಲ್ಲಿ

ಈಗಾಗಲೇ ಎಲ್ಲರಿಗೂ ಮತದಾರರ ಗುರುತಿನ ಚೀಟಿ ವಿತರಣೆ ಮಾಡಿದ್ದು, ಅದರಲ್ಲಿ ಎಲ್ಲಾ ಮಾಹಿತಿಯೂ ಲಭ್ಯವಿರಲಿದೆ.

ಇದರಿಂದ ಸುಲಭವಾಗಿ ಮತಗಟ್ಟೆಗೆ ತೆರಳಿ ಮತ ಚಲಾಯಿಸಬಹುದಾಗಿದ್ದು, ಎಲ್ಲರೂ ತಪ್ಪದೆ ಮತದಾನ  ಮಾಡಬೇಕು ಎಂದು ಮನವಿ ಮಾಡಿದರು. 

ಮತದಾನದ ದಿನ ವೇತನ ಸಹಿತ ರೆಜೆಯಿರಲಿದ್ದು, ಎಲ್ಲರೂ ತಪ್ಪದೆ ಮತದಾನ ಮಾಡಿ. ಮಹಿಳೆಯರಿಗಾಗಿ ಪ್ರತಿ ವಿಧಾನಸಭಾ

ಕ್ಷೇತ್ರಗಳಲ್ಲಿಯೂ 5 ಪಿಂಕ್ ಬೂತ್ ಗಳ ವ್ಯವಸ್ಥೆ ಮಾಡಲಾಗಿದ್ದು, ಎಲ್ಲಾ ಪಿಂಕ್ ಬೂತ್ ಗಳಲ್ಲಿ ಮಹಿಳಾ ಅಧಿಕಾರಿ/ಸಿಬ್ಬಂದಿ ಕಾರ್ಯನಿರ್ವಹಿಸಲಿದ್ದಾರೆ. 

ಜೊತೆಗೆ ಪಿಂಕ್ ಬಣ್ಣದಲ್ಲಿ ವಿವಿಧ ಚಿತ್ರಗಳನ್ನು ರಚಿಸುವುದು, ಮತಚಾಲಯಿಸಲು ಬರುವವರಿಗೆ ಸ್ವಾಗತ ಕೋರುವುದು, ಸ್ವಾಗತ ಕಮಾನು,

ಪಿಂಕ್ ಬಲೂನ್‌ಗಳ ಅಲಂಕಾರ ಸೇರಿದಂತೆ ಮಹಿಳೆಯರನ್ನು ಆಕರ್ಷಿಸಿಸುವ ರೀತಿ ಮತಗಟ್ಟೆಗಳನ್ನು ಸಿದ್ದಪಡಿಲಸಾಗುವುದು ಎಂದು ಹೇಳಿದರು.

ನಗರದಲ್ಲಿ ಪಿಂಕ್ ಮತಗಟ್ಟೆಗಳು ಮಾತ್ರವಲ್ಲದೆ ವಿವಿಧ ಥೀಮ್ ಬೇಸ್ಡ್ ಮತಗಟ್ಟೆಗಳನ್ನು ಮಾಡಲಾಗುತ್ತಿದ್ದು, ಅದರಂತೆ ಅಂಗವಿಕಲರ ಮತಗಟ್ಟೆ,

ತೃತೀಯ ಲಿಂಗಿ ಮತಗಟ್ಟೆ, ತಂತ್ರಜ್ಞಾನ ಮತಗಟ್ಟೆ, ಪರಿಸರ(ಹಸಿರು ಬಣ್ಣದ) ಮತಗಟ್ಟೆ, ಸೈನಿಕ ಮತಗಟ್ಟೆ, ಕ್ರೀಡಾ ಮತಗಟ್ಟೆ,

ಯುವ ಮತದಾರರ ಮತಗಟ್ಟೆ, ಸಂಸ್ಕೃತಿ ಮತಗಟ್ಟೆ, ಸೈನಿಕರ ವಿಶೇಷ ಮತಗಟ್ಟೆಗಳಿರಲಿವೆ ಎಂದರು.  

Pinkathon to create awareness among women voters!

ಮತದಾನದ ದಿನ ಮುಂಜಾಗ್ರತಾ ಕ್ರಮವಾಗಿ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಆಂಬುಲೆಲ್ಸ್‌ಗಳ ವ್ಯವಸ್ಥೆ ಮಾಡಲಾಗುತ್ತಿದೆ.

ಯಾವುದಾದರು ಮತಗಟ್ಟೆಗಳ ಬಳಿ ತುರ್ತು ಸಂಧರ್ಭ ಬಂದಲ್ಲಿ, ಆಂಬುಲೆನ್ಸ್ ಮೂಲಕ ವೈದ್ಯರ ಸೇವೆ ಒದಗಿಸಲಾಗುವುದು ಎಂದು ಹೇಳಿದರು.

ವಿವಿಧ ರಂಗದ ಪ್ರತಿನಿಧಿಗಳು ಭಾಗಿ:

ಪಿಂಕಥಾನ್ ಕಾರ್ಯಕ್ರಮದಲ್ಲಿ ವಿಶೇಷ ಚೇತನರು, ವೈದ್ಯರು, ಆಶಾಕಾರ್ಯಕರ್ತೆಯರು, ಪೌರಕಾರ್ಮಿಕರು, ಸ್ವಸಹಾಯ ಸಂಘದ ಗುಂಪುಗಳು,

ವಿದ್ಯಾರ್ಥಿಗಳು, ಕ್ರೀಡಾಪಟುಗಳು, ಬೀದಿ ಬದಿ ವ್ಯಾಪಾರಿಗಳು, ಅಂಗನವಾಡಿ ಕಾರ್ಯಕರ್ತೆಯರು, ಎನ್.ಎಸ್.ಎಸ್ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಪ್ರತಿಜ್ಞೆ ವಿಧಿ ಬೋಧನೆ:

ವಿವಿಧ ರಂಗಗಳ ಮಹಿಳಾ ಪ್ರತಿನಿಧಿಗಳು ಪಿಂಕಥಾನ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಡ್ಡಾಯವಾಗಿ ಮತದಾನ ಮಾಡುವ ಪ್ರತಿಜ್ಞೆ ವಿಧಿಯನ್ನು ಸ್ವೀಕರಿಸಿದರು.

ವೋಟ್-ಎ-ಥಾನ್(Vote-A-Thon) ವಿಜೇತರಿಗೆ ಪ್ರಶಸ್ತಿ ವಿತರಣೆ:

ಸಾರ್ವತ್ರಿಕ ವಿಧಾನಸಭೆ ಚುನಾವಣೆ-2023ರಲ್ಲಿ ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಅತಿ ಹೆಚ್ಚು ಪ್ರಮಾಣದಲ್ಲಿ ಮತದಾನವಾಗುವಂತೆ

ಮಾಡಲು ಆಯೋಜಿಸಿದ್ದ ವೋಟ್-ಎ-ಥಾನ್(Vote-A-Thon) ಸ್ಪರ್ಧೆಯಲ್ಲಿ ವಿಜೇತರಾದವರಿಗೆ ನಗದು ಬಹುಮಾನ ಹಾಗೂ ಸ್ಮರಣಿಕೆಯನ್ನು ವಿತರಿಸಲಾಯಿತು.

ಪೋಸ್ಟರ್, ರೀಲ್ಸ್, ಸ್ಲೋಗನ್ ನಲ್ಲಿ ಪ್ರಥಮ ಬಂದವರಿಗೆ 5 ಸಾವಿರ ರೂ. ನಗದು ಜೊತೆಗೆ ಸ್ಮರಣಿಕೆ,

ದ್ವಿತೀಯ ಬಂದವರಿಗೆ 3 ಸಾವಿರ ರೂ. ನಗದು ಬಹುಮಾನದ ಜೊತೆಗೆ ಸ್ಮರಣಿಕೆಯನ್ನು ವಿತರಿಸಲಾಯಿತು.  

Pinkathon to create awareness among women voters!

ವೋಟ್-ಎ-ಥಾನ್ ಸ್ಪರ್ಧೆಯ ವಿಜೇತರ ವಿವರ:

ಪೋಸ್ಟರ್ ಸ್ಪರ್ಧೆ:

  1. ನಾಮದೇವ ಕಾಗದಗಾರ - ಪ್ರಥಮ
  2. ವಿ.ಆರ್.ಸಿ ಶೇಖರ್ - ದ್ವಿತೀಯ

ರೀಲ್ಸ್ ಸ್ಪರ್ಧೆ:

  1. ಎಸ್.ಎನ್.ಕ್ರಿಯೇಷನ್ಸ್(ಎನ್. ಚಂದ್ರಶೇಖರ) :
    ಪ್ರಥಮ

ಸ್ಲೋಗನ್ ಸ್ಪರ್ಧೆ:

  1. ಪ್ರಶಾಂತ್ ಮೊಟಗಿ - ಪ್ರಥಮ
  2. ಶ್ರೀನಿವಾಸ್ - ದ್ವಿತೀಯ

ಕಾರ್ಯಕ್ರಮದಲ್ಲಿ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಸಂಗಪ್ಪ, ಸ್ವೀಪ್ ನೋಡಲ್ ಅಧಿಕಾರಿ ಸಿದ್ದೇಶ್ವರ್, ಬೂತ್ ಮಟ್ಟದ ಅಧಿಕಾರಿಗಳು ಇದ್ದರು.    

Published On: 08 May 2023, 05:49 PM English Summary: Pinkathon to create awareness among women voters!

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.