ಕೊರೋನಾ ಸೋಂಕಿನಿಂದ ಸಾವನ್ನಪ್ಪಿದ ರೈತರ ಒಂದು ಲಕ್ಷ ರೂಪಾಯಿಯವರೆಗಿನ ಸಾಲ ಮನ್ನಾ ಮಾಡಲಾಗುವುದು. ಈ ಕುರಿತು ಶೀಘ್ರ ತೀರ್ಮಾನ ನಡೆಸಿ ಅಧಿಕೃತವಾಗಿ ಪ್ರಕಟಿಸಲಾಗುವುದು ಎಂದು ಸಹಕಾರ ಸಚಿವ ಎಸ್ ಟಿ ಸೋಮಶೇಖರ್ ತಿಳಿಸಿದ್ದಾರೆ.
ಈ ಕುರಿತು ವಿಧಾನಸೌಧದಲ್ಲಿ ಮಾತನಾಡಿದ ಅವರು, ಸಹಕಾರ ಬ್ಯಾಂಕ್ ಗಳ ಮೂಲಕ ಸಾಲ ಪಡೆದ ರೈತರು ಕೋವಿಡ್ ಸೋಂಕಿನಿಂದ ಮೃತಪಟ್ಟರೆ ಅವರ 1 ಲಕ್ಷ ರೂಪಾಯಿ ಸಾಲಮನ್ನಾ ಮಾಡುವ ಚಿಂತನೆ ನಡೆದಿದೆ. ಶೀಘ್ರದಲ್ಲಿ ಈ ಕುರಿತು ಕ್ರಮಕೈಗೊಳ್ಳಲಾಗುವುದು. ಕೊರೋನಾದಿಂದ ಸಾವನ್ನಪ್ಪಿರುವ ರೈತರಿಗೆ ಸಹಾಯ ಮಾಡಬೇಕಾದ ಹೊಣೆಗಾರಿಗೆ ಸರ್ಕಾರದ ಮೇಲೆ ಇದೆ. ಅದಕ್ಕಾಗಿ ಅಪೆಕ್ಸ್ ಬ್ಯಾಂಕ್ ಮತ್ತು ಡಿಸಿಸಿ ಬ್ಯಾಂಕ್ ಮೂಲಕ ಸಾಲಮನ್ನಾ ಯೋಜನೆ ಜಾರಿ ಮಾಡಲಾಗುವುದುದು ಎಂದು ಸ್ಪಷ್ಟಪಡಿಸಿದರು.
.ಕೋವಿಡ್ ಸೋಂಕಿನಿಂದ ಮೃತಪಟ್ಟವರು ಡಿಸಿಸಿ ಬ್ಯಾಂಕುಗಳಲ್ಲಿ ಸಾಲ ಪಡೆದಿದ್ದರೆ ಅವರ ಪಟ್ಟಿ ಹಾಗೂ ಸಾಲ ವಿವರವನ್ನು ಸಲ್ಲಿಸಲು ಈಗಾಗಲೇ ಅಪೆಕ್ಸ್ ಬ್ಯಾಂಕ್, ಡಿಸಿಸಿ ಬ್ಯಾಂಕ್ ಗಳಇಗೆ ಸೂಚನೆ ನೀಡಲಾಗಿದೆ. ಶೀಘ್ರದಲ್ಲಿಯೇ ಎಲ್ಲಾ ವಿವರಗಳನ್ನು ಪಡೆದು ರೈತರ 1 ಲಕ್ಷ ರೂಪಾಯಿ ಸಾಲಮನ್ನಾ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಮೃತ ರೈತರ ಗರಿಷ್ಠ 1 ಲಕ್ಷ ರೂ ಸಾಲ ಮನ್ನಾಕ್ಕೆ ನಿರ್ಧರಿಸಲಾಗಿದೆ. ಈ ಕುರಿತು ಸಭೆಯಲ್ಲಿ ಚರ್ಚೆ ನಡೆಸಿ ತೀರ್ಮಾನ ನಡೆಸಲಾಗುವುದು. ಬಳಿಕ ಈ ಬಗ್ಗೆ ಸಿಎಂ ಘೋಷಿಸಲಿದ್ದಾರೆ. ಕೋವಿಡ್ ನಿಂದ ಸಾವನ್ನಪ್ಪಿದ ರೈತರ ಕುಟುಂಬದ ಸದಸ್ಯರು ಹತ್ತಿರದ ಡಿಸಿಸಿ ಬ್ಯಾಂಕ್ಗಳಲ್ಲಿ ಮಾಹಿತಿ ಪಡೆದು ಅರ್ಜಿ ಸಲ್ಲಿಸಬಹುದಾಗಿದೆ ಎಂದರು
ರೈತರ 1 ಲಕ್ಷ ರೂಪಾಯಿ ಸಾಲಮನ್ನಾ
ಕೋವಿಡ್ ನಿಂದ ಮೃತಪಟ್ಟ ರೈತರ ಒಂದು ಲಕ್ಷ ರೂಪಾಯಿ ಸಾಲಮನ್ನಾ ಮಾಡಲಾಗುವುದು ಎಂದು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಹಾಗೂ ಶಾಸಕ ಬೆಳ್ಳಿ ಪ್ರಕಾಶ ತಿಳಿಸಿದ್ದಾರೆ. ಈ ಕುರಿತು ಸುದ್ದಿಗಾರರರೊಂದಿಗೆ ಮಾತನಾಡಿದ ಅವರು, ರಾಜ್ಯದ 21 ಜಿಲ್ಲೆಯಲ್ಲಿರುವ ಸಹಕಾರ ಕೇಂದ್ರ (ಡಿಸಿಸಿ) ಬ್ಯಾಂಕುಗಳಲ್ಲಿ ಬೆಳೆ ಸಾಲ ಪಡೆದಿರುವ ರೈತರಿಗೆ ಈ ಸಾಲಮನ್ನಾ ಸೌಲಭ್ಯ ಸಿಗಲಿದೆ. ಈ ಕುರಿತು ಸಭೆಯಲ್ಲಿ ಚರ್ಚಿಸಲಾಗಿದೆ. ಇದಕ್ಕೆ ಅಪೆಕ್ಸ್ ಬ್ಯಾಂಕ್ ಉಪಾಧ್ಯಕ್ಷ ಜಿ.ಡಿ. ಹರೀಶಗೌಡರವರು ಸಹಮತ ವ್ಯಕ್ತಪಡಿಸಿದ್ದಾರೆ. ಎಷ್ಟು ಜನ ರೈತರು ಕೋವಿಡ್ ನಿಂದ ಮೃತರಾಗಿದ್ದಾರೆ ಎಂಬ ಬಗ್ಗೆ ಮಾಹಿತಿ ಕಲೆ ಹಾಕಿ, ಸಾಲ ಮನ್ನಾ ಮಾಡಲಾಗುವುದು ಎಂದು ತಿಳಿಸಿದ್ದಾರೆ.