ವಿದ್ಯುತ್ ಆಘಾತಕ್ಕೊಳಗಾದ ಆನೆಯನ್ನು ರಕ್ಷಿಸಿದ್ದಕ್ಕಾಗಿ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಸಿಬ್ಬಂದಿಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶ್ಲಾಘಿಸಿದ್ದಾರೆ.
150 ಅಪರೂಪದ ಸಿರಿಧಾನ್ಯಗಳ Seed Bank ನಿರ್ಮಿಸಿದ ಬುಡಕಟ್ಟು ಮಹಿಳೆ ಲಹರಿಬಾಯಿ
ಮತ್ತು ನಮ್ಮ ಜನರಲ್ಲಿ ಇಂತಹ ಸಹಾನುಭೂತಿ ಶ್ಲಾಘನೀಯ ಎಂದು ಹೇಳಿದರು.
ಕೇಂದ್ರ ಸಂಪುಟದ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆಯ ಮತ್ತು ಕಾರ್ಮಿಕ ಹಾಗೂ ಉದ್ಯೋಗ ಖಾತೆ ಸಚಿವ ಶ್ರೀ ಭೂಪೇಂದರ್ ಯಾದವ್ ಅವರ ಟ್ವೀಟ್ ಗೆ ಪ್ರತಿಕ್ರಿಯೆಯಾಗಿ ಪ್ರಧಾನಮಂತ್ರಿ ಹೀಗೆ ಹೇಳಿದ್ದಾರೆ;
"ಇದನ್ನು ನೋಡಿ ಸಂತೋಷವಾಯಿತು. ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಸಿಬ್ಬಂದಿಗೆ ಅಭಿನಂದನೆಗಳು. ನಮ್ಮ ಜನರಲ್ಲಿ ಇಂತಹ ಸಹಾನುಭೂತಿ ಶ್ಲಾಘನೀಯ.’’ ಎಂದು ಹೇಳಿದರು.