1. ಸುದ್ದಿಗಳು

ಪಿ.ಎಂ ಜನೌಷಧಿ ಯೋಜನೆ: ಕರ್ನಾಟಕ ದೇಶದಲ್ಲೇ ದ್ವಿತೀಯ!

Hitesh
Hitesh
PM Janaushadhi Yojana: Second in Karnataka!

ಕರ್ನಾಟಕ ರಾಜ್ಯವು ಪ್ರಧಾನಮಂತ್ರಿ ಭಾರತೀಯ ಜನೌಷಧಿ ಯೋಜನೆಯಲ್ಲಿ ದೇಶದಲ್ಲೇ ಎರಡನೇ ಸ್ಥಾನ ಪಡೆದಿದೆ.

ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ 540 ಹೊಸ ಮಳಿಗೆಗಳನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ ಎಂದು ಆರೋಗ್ಯ ಸಚಿವ (Dr.k sudhakar) ಡಾ.ಕೆ. ಸುಧಾಕರ್‌ ಹೇಳಿದ್ದಾರೆ.  

Shah Rukh Khan: ಬಾಲಿವುಡ್‌ “ಬಾದ್‌ ಶಾ” ಶಾರುಕ್‌ಗೆ ದಂಡ!

ಪ್ರಧಾನಮಂತ್ರಿ ಭಾರತೀಯ ಜನೌಷಧಿ ಯೋಜನೆಯಲ್ಲಿ ಈಗಾಗಲೇ ರಾಜ್ಯವು ಎರಡನೇ ಸ್ಥಾನದಲ್ಲಿದ್ದು, ರಾಜ್ಯಾದ್ಯಂತ 500 ಹೊಸ ಮಳಿಗೆಗಳನ್ನು ಸ್ಥಾಪಿಸಲು ಸರ್ಕಾರ ಚಿಂತನೆ ನಡೆಸಿದೆ.

ಇದರಿಂದ ಇನ್ನಷ್ಟು ಜನರಿಗೆ ಅನುಕೂಲವಾಗಲಿದೆ ಎಂದು ಅವರು ತಿಳಿಸಿದ್ದಾರೆ.

 ರಾಜ್ಯದಲ್ಲಿ  ಬಡವರು, ಹಿಂದುಳಿದವರು ಹಾಗೂ ಮಧ್ಯಮವರ್ಗದವರಿಗೆ ರಿಯಾಯಿತಿ ದರದಲ್ಲಿ ಔಷಧಗಳು ಮತ್ತು ಶಸ್ತ್ರಚಿಕಿತ್ಸೆಯ ಪರಿಕರಗಳನ್ನು ಒದಗಿಸುವಲ್ಲಿ ಪ್ರಧಾನಮಂತ್ರಿ ಜನೌಷಧಿ ಎಂಬ ಯೋಜನೆಯನ್ನು ಪರಿಚಯಿಸಲಾಗಿದೆ.

ರಾಜ್ಯದಲ್ಲಿ ಉತ್ತಮವಾಗಿ ಕಾರ್ಯಕ್ರಮವನ್ನು ಜಾರಿ ಮಾಡಲಾಗಿದೆ. ಇಲ್ಲಿಯವರೆಗೆ 1,052 ಮಳಿಗೆಗಳನ್ನು ತೆರೆಯಲಾಗಿದೆ.

ಇಡೀ ದೇಶದಲ್ಲಿ ಉತ್ತರ ಪ್ರದೇಶದ ನಂತರ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಕೇರಳ ಮೂರನೇ ಸ್ಥಾನದಲ್ಲಿದೆ ಎಂದು ಹೇಳಿದರು.  

ಅಂತರರಾಷ್ಟ್ರೀಯ ಸಿರಿಧಾನ್ಯಗಳ ವರ್ಷ-2023: ಅದ್ಧೂರಿ ಆಚರಣೆಗೆ ಸಿದ್ಧತೆ!

ಜನೌಷಧಿ ಕೇಂದ್ರದಿಂದಾಗಿ ಸಾರ್ವಜನಿಕರು ಆರೋಗ್ಯಕ್ಕಾಗಿ ವ್ಯಯಿಸುವ ವೆಚ್ಚವು ಜನೌಷಧಿ ಮಳಿಗೆಗಳಿಂದ ಗಣನೀಯವಾಗಿ ಕಡಿಮೆಯಾಗುತ್ತಿದೆ.

ರಾಜ್ಯದಲ್ಲಿ ಹೊಸದಾಗಿ ಮತ್ತೆ 500 ಮಳಿಗೆಗಳನ್ನು ಪ್ರಾರಂಭಿಸಲು ನಿರ್ಧರಿಸಲಾಗಿದೆ.

ಸರ್ಕಾರಿ ಆಸ್ಪತ್ರೆಗಳಲ್ಲಿ ಸುಮಾರು 40 ಹೊಸ ಮಳಿಗೆಗಳಿಗೆ ಅನುಮತಿ ನೀಡುವಂತೆ ಪ್ರಸ್ತಾವನೆ ಸಲ್ಲಿಸಲಾಗಿದೆ.

ಚಿನ್ನದ ದರದಲ್ಲಿ ಮತ್ತೆ ಏರಿಕೆ, ಎಷ್ಟಿದೆ ಮಾರುಕಟ್ಟೆಯಲ್ಲಿ ಚಿನ್ನದ ದರ ? 

ಗ್ರಾಮೀಣ ಭಾಗದಲ್ಲಿ ಹೆಚ್ಚಿನ ಮಳಿಗೆಗಳನ್ನು ತೆರೆಯಲು ಸರ್ಕಾರ ಸಕ್ರಿಯವಾಗಿದೆ. ಫೆಬ್ರವರಿ ನಂತರ ಅಂದಾಜು 300 ಮಳಿಗೆಗಳನ್ನು  ಪ್ರಾರಂಭಿಸಲು ಉದ್ದೇಶಿಸಲಾಗಿದೆ.

ರಾಜ್ಯದಲ್ಲಿ ಜನೌಷಧಿಗಳಿಂದ ಮಾರುಕಟ್ಟೆಗಿಂತ ಶೇ.50 ರಿಂದ 80 ರಷ್ಟು ಅಗ್ಗದ ದರದಲ್ಲಿ ಬಡವರಿಗೆ ಔಷಧಿಗಳು ದೊರೆಯುತ್ತಿವೆ.

ಒಟ್ಟು 1451 ಔಷಧಗಳು ಮತ್ತು 240 ಶಸ್ತ್ರಚಿಕಿತ್ಸೆ ಪರಿಕರಗಳು, ದುಬಾರಿ ವೆಚ್ಚದ ಕ್ಯಾನ್ಸರ್‌ ಔಷಧಿಗಳು ಲಭ್ಯವಿವೆ ಎಂದು ವಿವರಿಸಿದರು.

Dr.k sudhakar

ಉತ್ತರ ಕರ್ನಾಟಕ, ಹಳೆ ಮೈಸೂರು ಭಾಗದಿಂದಲೂ ಜನೌಷಧಿ ಮಳಿಗೆಗಳನ್ನು ಪ್ರಾರಂಭಿಸಲು ಒತ್ತಾಯವಿದೆ. ಮಂಡ್ಯ ಜಿಲ್ಲೆಯ ಕೆ.ಎಂ.ದೊಡ್ಡಿ ಎಂಬ ಗ್ರಾಮದಲ್ಲೂ ಜನೌಷಧಿ ಮಳಿಗೆ ತೆರೆಯಲಾಗಿದೆ.

ಬೇಡಿಕೆಗೆ ಅನುಗುಣವಾಗಿ ಹೊಸ ಮಳಿಗೆಗಳಿಗೆ ಮಂಜೂರಾತಿ ನೀಡಲಾಗುತ್ತಿದೆ ಎಂದರು.

ನೇಪಾಳದಲ್ಲಿ ಒಂದೇ ವಾರದಲ್ಲಿ ಮೂರನೇ ಬಾರಿ ಭೂಕಂಪನ: ದೆಹಲಿ ಜನಕ್ಕೆ ಆತಂಕ!  

Published On: 13 November 2022, 02:34 PM English Summary: PM Janaushadhi Yojana: Second in Karnataka!

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.