ಕೇಂದ್ರ ಸರ್ಕಾರದಿಂದ PM kisan 11ನೇ ಕಂತಿನ ಹಣವನ್ನು ಜಮೆ ಮಾಡುವುದಕ್ಕೂ ಪೂರ್ವದಲ್ಲಿ ಇ-ಕೆವೈಸಿ ಮಾಡುವುದನ್ನು ಸರ್ಕಾರ ಕಡ್ಡಾಯಗೊಳಿಸಿದೆ. ಮೊದಲು ಇ-ಕೆವೈಸಿಗೆ ಮಾರ್ಚ್ 31 ಕೊನೆಯ ದಿನಾಂಕವಾಗಿತ್ತು, ಆದರೆ ಈಗ ಅದನ್ನು ಮೇ 31ಕ್ಕೆ ವಿಸ್ತರಿಸಲಾಗಿದೆ.
ಇದನ್ನೂ ಓದಿರಿ: IMD: ರೈತಮಿತ್ರರಿಗೆ ಹವಾಮಾನ ಇಲಾಖೆಯಿಂದ ಶುಭ ಸುದ್ದಿ; ವಾಡಿಕೆಗಿಂತ ಮೊದಲೆ ರಾಜ್ಯದಲ್ಲಿ ಮುಂಗಾರು ಮಳೆ!
ರಾಜ್ಯ ಸರ್ಕಾರಿ ನೌಕರರಿಗೆ Good News: ವರ್ಷಾಂತ್ಯಕ್ಕೆ ದೊರೆಯಲಿದೆ ಕೇಂದ್ರ ಮಾದರಿ ವೇತನ! ಯಾವಾಗ ದೊರೆಯಲಿದೆ ಗೊತ್ತೆ?
ರೈತರಿಗೆ ಆರ್ಥಿಕ ಬೆಂಬಲ ನೀಡುವ ನಿಟ್ಟಿನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು PM Kisan ಯೋಜನೆಯಡಿ 2000 ರೂಪಾರಿ ನೀಡುವ ಯೋಜನೆ ಜಾರಿ ತಂದು ಬಹುಪಾಲು ರೈತರಿಗೆ ಅನುಕೂಲ ಮಾಡಿಕೊಟ್ಟಿದ್ದಾರೆ.
ದೇಶದ ಅರ್ಹ ರೈತರು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM-KISAN) ಯೋಜನೆಯಡಿ 2000 ರೂಪಾಯಿ ನೆರೆವು ಪಡೆಯುತ್ತಾರೆ. ದೇಶದಾದ್ಯಂತ 12.5 ಕೋಟಿ ರೈತರು ಪಿಎಂ ಕಿಸಾನ್ ನಿಧಿಗಾಗಿ ಹೆಸರು ನೋಂದಾಯಿಸಿಕೊಂಡಿದ್ದಾರೆ. ಹೀಗೆ ಹೆಸರು ನೋಂದಾಯಿಸಿಕೊಂಡಿರುವ ರೈತರ ಬ್ಯಾಂಕ್ ಖಾತೆಗೆ 11ನೇ ಕಂತು ಜಮೆ ಮಾಡಲಾಗುತ್ತದೆ.
ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ರೈತರ ಖಾತೆಗೆ ಇದೇ ತಿಂಗಳಿನಲ್ಲಿ ಸರ್ಕಾರ 2000 ರೂಪಾಯಿ ಹಣ ಜಮೆ ಮಾಡುವುದಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಕಪ್ಪು ಗೋಧಿಯ ಬಗ್ಗೆ ನಿಮಗೆ ಗೊತ್ತೆ? ಇಲ್ಲಿದೆ ರೈತರಿಗೆ ಲಾಭದಾಯಕ ಕೃಷಿಯ ಐಡಿಯಾ!
ಮೇ ತಿಂಗಳಲ್ಲಿ ಬಿತ್ತನೆ ಮಾಡಬೇಕಾದ ಬೆಳೆಗಳು! ಇದರಿಂದ ರೈತರಿಗಾಗಲಿದೆ ಹೆಚ್ಚಿನ ಲಾಭ
ಪಿಎಂ ಕಿಸಾನ್ ಸಮ್ಮಾನ್ ಯೋಜನೆ ಎಂದರೇನು?
ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯು ಕೇಂದ್ರ ಸರ್ಕಾರದ ಪ್ರಾಯೋಜಿತ ಯೋಜನೆಯಾಗಿದ್ದು, ದೇಶಾದ್ಯಂತ ಬಡತನದ ಅಂಚಿನಲ್ಲಿರುವ ಕೋಟ್ಯಂತರ ಬಡ ರೈತರಿಗೆ ಆರ್ಥಿಕ ನೆರವು ನೀಡಲಾಗುತ್ತಿದೆ.
ಈ ಯೋಜನೆಯ ಭಾಗವಾಗಿ ಅರ್ಹ ರೈತರು ತಮ್ಮ ಬ್ಯಾಂಕ್ ಖಾತೆಗೆ ನೇರವಾಗಿ ವರ್ಷದಲ್ಲಿ ಒಟ್ಟು 6000 ರೂಪಾಯಿ ಪಡೆದುಕೊಳ್ಳುತ್ತಾರೆ. ಪ್ರತಿ ನಾಲ್ಕು ತಿಂಗಳಗೆ ಒಂದು ಬಾರಿ ಕೇಂದ್ರ ಸರ್ಕಾರದಿಂದಲೇ ರೈತರ ಬ್ಯಾಂಕ್ ಖಾತೆಗೆ 2000 ರೂಪಾಯಿ ಹಣವನ್ನು ಜಮಾ ಮಾಡಲಾಗುತ್ತದೆ.
2019 ರಲ್ಲಿ ಪ್ರಧಾನಿ ನರೇಂದ್ರ ಮೋದಿ ಈ ಯೋಜನೆಯನ್ನು ಪ್ರಾರಂಭಿಸಿದ್ದು, ದೇಶಾದ್ಯಂತ ಕೆಲವು ವಿನಾಯಿತಿಗಳಡಿ ಕೃಷಿಯೋಗ್ಯ ಭೂಮಿಯೊಂದಿಗೆ ಎಲ್ಲಾ ಭೂಮಾಲೀಕ ರೈತ ಕುಟುಂಬಗಳಿಗೆ ಆದಾಯ ಬೆಂಬಲ ಒದಗಿಸುವ ಗುರಿಯನ್ನು ಯೋಜನೆ ಹೊಂದಿದೆ.
PM GatiShakti: ಗ್ರಾಮೀಣ ಪ್ರದೇಶಗಳಲ್ಲಿ ಬ್ರಾಡ್ಬ್ಯಾಂಡ್ ಸೇವೆ ನೀಡಲು “GatiShakti Sanchar” ಪೋರ್ಟಲ್ ಪ್ರಾರಂಭ!
G7: ಉಕ್ರೇನ್ ವಿಶ್ವದ ಪ್ರಮುಖ ಧಾನ್ಯ ಪೂರೈಕೆದಾರರ ಪ್ರಭಾವಶಾಲಿ ಸಂಘಟನೆ ರಚಿಸಲು ಸಲಹೆ ನೀಡಿದೆ!
ರೈತರ ಖಾತೆಗೆ ಜಮಾ ಆಗುವುದು ಯಾವಾಗ 11ನೇ ಕಂತು? ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ರೈತರ ಖಾತೆಗೆ ಹಣ ಜಮಾ ಆಗುವುದು ಕೊಂಚ ತಡವಾಗಿದೆ. ಕಳೆದ ವರ್ಷ ಏಪ್ರಿಲ್-ಜುಲೈ ತಿಂಗಳ ಕಂತು ಮೇ 15ರ ಹೊತ್ತಿಗೆ ಜಮಾ ಆಗಿತ್ತು. ಆದರೆ ಈ ಬಾರಿ ಕಂತಿನ ಮೊತ್ತವು ಮೇ 31ರೊಳಗೆ ರೈತರ ಖಾತೆಗೆ ಜಮಾ ಆಗಬಹುದು ಎಂದು ವರದಿಯಾಗಿದೆ.
ಒಂದು ಹಣಕಾಸು ವರ್ಷದಲ್ಲಿ, ಪಿಎಂ ಕಿಸಾನ್ ಕಂತು ಮೂರು ಬಾರಿ ಸಿಗುತ್ತದೆ. ಏಪ್ರಿಲ್ನಿಂದ ಜುಲೈ ವೇಳೆಯಲ್ಲಿ ಮೊದಲ ಕಂತು, ಆಗಸ್ಟ್ನಿಂದ ನವೆಂಬರ್ವರೆಗೆ ಎರಡನೇ ಕಂತು ಹಾಗೂ ಡಿಸೆಂಬರ್ ನಿಂದ ಮಾರ್ಚ್ವರೆಗೆ ಮೂರನೇ ಕಂತಿನ ಹಣವನ್ನು ಅರ್ಹ ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗುತ್ತದೆ.
3ನೇ ಮಗುವಿಗೆ ಜನ್ಮ ನೀಡಿದರೆ 11 ಲಕ್ಷ ರೂಪಾಯಿ ಬೋನಸ್ ನೀಡತ್ತೆ ಈ ಕಂಪನಿ.. ಜೊತೆಗೆ 1 ವರ್ಷ ರಜೆ! ಏನಿದು Policy?
ಅರ್ಹ ರೈತರು ಇ-ಕೆವೈಸಿ ಮಾಡಿಸಲು ಸರ್ಕಾರದ ಆದೇಶ ದೇಶದಲ್ಲಿ ಮೇ 31ರೊಳಗೆ ಅರ್ಹ ಫಲಾನುಭವಿಗಳಿಗೆ 11ನೇ ಕಂತಿನ ಹಣವನ್ನು ನೀಡಲಾಗುವುದರ ಬಗ್ಗೆ ಕೇಂದ್ರ ಸರ್ಕಾರ ಸುಳಿವು ನೀಡಿದೆ. ಈ ಹಿನ್ನೆಲೆ ಇ-ಕೆವೈಸಿ ನೋಂದಣಿಗೆ ಮೇ 15ರ ಬದಲಿಗೆ ಮೇ 31ರ ಗಡುವು ವಿಧಿಸಲಾಗಿದೆ. ಆದರೆ ಅಷ್ಟರೊಳಗೆ ಇ-ಕೆವೈಸಿ ನೋಂದಣಿ ಮಾಡಿಸಿಕೊಳ್ಳುವಂತೆ ಸೂಚನೆ ನೀಡಲಾಗಿದೆ.