News

ಉತ್ತರಪ್ರದೇಶದ ಪಿಎಂ ಕಿಸಾನ್ ಫಲಾನುಭವಿಗಳಿಗೆಲ್ಲರಿಗೆ ಸಿಗಲಿದೆ ಕಿಸಾನ್ ಕ್ರೆಡಿಟ್ ಕಾರ್ಡ್

09 March, 2021 3:41 PM IST By:

ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಉತ್ತರ ಪ್ರದೇಶದ ರೈತರಿಗೆ ಸಂತಸದ ಸುದ್ದಿಯನ್ನು ನೀಡಿದ್ದಾರೆ. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ (ಪಿಎಂ-ಕಿಸಾನ್ ) ಫಲಾನುಭವಿಗಳಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ (ಕೆಸಿಸಿ) ನೀಡಬೇಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ರೈತರಿಗೆ ಕಿಸಾನ್ ಕ್ರೇಡಿ ಕಾರ್ಡ್ ನೀಡಲು  ಏಪ್ರೀಲ್ 15ರವರೆಗೆ ರಾಜ್ಯಾದ್ಯಂತ ಅಭಿಯಾನ ನಡೆಯಲಿದೆ. ಕಳೆದ ವರ್ಷ ಕೊರೋನಾದಿಂದಾಗಿ ಕಿಸಾನ್ ಕ್ರೆಡಿಟ್ ಕಾರ್ಡ್ ನೀಡಲು ಸಾಧ್ಯವಾಗಲಿಲ್ಲ. ಇದೀಗ ಪ್ರತಿ ಹಳ್ಳಿಯಲ್ಲೂ ಏಪ್ರೀಲ್ 15ರವರೆಗೆ ಅಭಿಯಾನವನ್ನು ನಡೆಸುವ ಮೂಲಕ ರೈತರ ಕ್ರೆಡಿಟ್ ಕಾರ್ಡ್ ನೀಡಲಾಗುವುದು ಎಂದು ತಿಳಿಸಿದ್ದಾರೆ.

 ಕಿಸಾನ್ ಕ್ರೇಡಿಟ್ ಕಾರ್ಡ್ ವಿತರಿಸಲು ಎಲ್ಲ ಗ್ರಾಮಗಳಲ್ಲಿ ಪ್ರಚಾರ ಕಾರ್ಯ ಆರಂಭಿಸಬೇಕು. ರೈತರ ಹಿತ ಕಾಪಾಡುವುದಿಲ್ಲಿ ಹಿಂದೆ ಸರಿಯಬಾರದು. ರೈತರಿಗೆ ಅನ್ಯಾಯವಾಗದಂತೆ ನೋಡಿಕೊಳ್ಳಬೇಕು ಎಂದು ಆದೇಶ ನೀಡಿದ್ದಾರೆ. ರೈತರನ್ನು ಸ್ವಾವಲಂಬಿಗಳನ್ನಾಗಿ ಮಾಡಲು ಈ ಅಭಿಯಾನ ಹಮ್ಮಿಕೊಂಡಿದೆ. ರೈತರು ಸಹ ಯಾರೂ ಕ್ರೇಡಿಟ್ ಕಾರ್ಡ್ ಪಡೆದಿಲ್ಲವೋ ಅವರೆಲ್ಲರೂ ಪಡೆದುಕೊಳ್ಳಬೇಕು ಎಂದಿದ್ದಾರೆ.

ರಾಜ್ಯದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಕೃಷಿ) ಎಲ್ಲಾ ಜಿಲ್ಲಾಧಿಕಾರಿಗಳು, ಮುಖ್ಯ ಅಭಿವೃದ್ಧಿ ಅಧಿಕಾರಿಗಳು ಮತ್ತು ಕೃಷಿ ಉಪ ನಿರ್ದೇಶಕರಿಗೆ ಪತ್ರ ಬರೆದಿದ್ದು, ಇದರಲ್ಲಿ ಕೃಷಿ ಇಲಾಖೆಯ ಅಧಿಕಾರಿಗಳು ಪ್ರಧಾನ್ ಮಂತ್ರಿ ಕಿಸಾನ್ ಯೋಜನೆಯ ಎಲ್ಲಾ ಫಲಾನುಭವಿಗಳ ಶೇಕಡಾ 100 ರಷ್ಟು ಪರಿಶೀಲನೆ ಮಾಡಿ ಎಲ್ಲ ರೈತರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ ನೀಡುವಂತೆ ನಿರ್ದೇಶನ ನೀಡಿದ್ದಾರೆ.

ರಾಷ್ಟ್ರೀಕೃತ ಬ್ಯಾಂಕ್, ಪ್ರಾದೇಶಿಕ ಬ್ಯಾಂಕ್, ಸಹಕಾರಿ ಬ್ಯಾಂಕ್, ಬ್ಯಾಂಕ್ ಆಫ್ ಇಂಡಿಯಾ ಮತ್ತು ಇತರ ಬ್ಯಾಂಕ್ ಗಳು ಸಹ ಕಿಸಾನ್ ಕ್ರೇಡಿಟ್ ಕಾರ್ಡ್ ನೀಡುತ್ತವೆ.

ಕೆಸಿಸಿಯಿಂದ ರೈತರಿಗೆ 3 ಲಕ್ಷ ರೂಪಾಯಿಯವರೆಗೆ ಸಾಲ ನೀಡಲಾಗುತ್ತದೆ. ಸಾಲದ ಮೇಲಿನ ಬಡ್ಡಿ ದರ ಶೇ.9ರಷ್ಟಿದ್ದರೂ, ಕೆಸಿಸಿ ಮೇಲೆ ಸರಕಾರ ಶೇ.2ರಷ್ಟು ಸಬ್ಸಿಡಿ ನೀಡುತ್ತದೆ.