----------
- ಪಿ.ಎಂ ಕಿಸಾನ್13ನೇ ಕಂತು: ಹೊಸ ವರ್ಷದ ಮೊದಲು ಬಿಡುಗಡೆ
- ತೊಗರಿಬೆಳೆಗೆ ನೆಟೆರೋಗ: ರೈತರಿಂದ ಕಲಬುರಗಿಯಲ್ಲಿ ಬೃಹತ್ ಪ್ರತಿಭಟನೆ
- ನಾಲ್ಕು ವರ್ಷಗಳ ಪದವಿ ಕೋರ್ಸ್ ಪ್ರಾರಂಭಕ್ಕೆ ಕಾಲಾವಕಾಶ
- ಕರ್ನಾಟಕ- ಮಹಾರಾಷ್ಟ್ರ ಗಡಿ ವಿವಾದ: ಉಭಯ ರಾಜ್ಯಗಳ ಸಚಿವರ ಸಮಿತಿ
- ರಾಜ್ಯದಲ್ಲಿ ತಗ್ಗಿದ ಮಳೆಯ ಅಬ್ಬರ
- ರಾಜ್ಯ ಸರ್ಕಾರಕ್ಕೆ5 ಲಕ್ಷ ದಂಡ ವಿಧಿಸಿದ ಹೈಕೋರ್ಟ್!
- 60ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಆರೋಗ್ಯ ಪರೀಕ್ಷೆ: ಬಸವರಾಜ ಬೊಮ್ಮಾಯಿ
- ಕಬ್ಬಿನ ಉತ್ಪನ್ನಗಳ ಲಾಭ ಬೆಲೆ ಶೀಘ್ರ ಹೆಚ್ಚಳ
- ರೈತ ಸಂಘಟನೆಗಳಿಂದ ಡಿಸೆಂಬರ್19ಕ್ಕೆ ಮಂಡ್ಯ ಬಂದ್‌ಗೆ ಕರೆ
- ಕೃಷಿಯಲ್ಲಿ ಡ್ರೋನ್ ತಂತ್ರಜ್ಞಾನ ಬಳಕೆಗೆ10 ಲಕ್ಷ ಧನ ಸಹಾಯ
----------
Lumpy Skin Disease| ಚರ್ಮಗಂಟು ರೋಗದಿಂದ ಜಾನುವಾರು ಸಾವು: ಪರಿಹಾರಕ್ಕೆ 30ಕೋಟಿ
1.ಪಿ.ಎಂ ಕಿಸಾನ್13ನೇ ಕಂತು ಹೊಸ ವರ್ಷದ ಮೊದಲೇ ಬಿಡುಗಡೆ ಆಗುವ ಸಾಧ್ಯತೆ ಇದೆ. ಮಾಧ್ಯಮ ವರದಿಗಳ ಪ್ರಕಾರ, ಪಿಎಂ ಕಿಸಾನ್ 13ನೇ ಕಂತನ್ನು ಹೊಸ ವರ್ಷದ ಒಳಗೆ ಅಂದರೆ ಡಿಸೆಂಬರ್ 25 ರಂದು ಬಿಡುಗಡೆ ಮಾಡುವ ಸಾಧ್ಯತೆ ಇದೆ. ಹಣಕಾಸಿನ ನೆರವು ಬಿಡುಗಡೆಯಾಗುವ ಮೊದಲು ಈ ಯೋಜನೆಯ ಎಲ್ಲಾ ಫಲಾನುಭವಿಗಳು ತಮ್ಮ ಇ-ಕೆವೈಸಿ ನವೀಕರಿಸುವಂತೆ ಕೇಂದ್ರ ಸರ್ಕಾರ ತಿಳಿಸಿದೆ. ರೈತರಿಗೆ ಸಹಾಯ ಮಾಡಲು ಪಿ.ಎಂ ಕಿಸಾನ್ ವೆಬ್‌ಸೈಟ್ ಏಕರೂಪದ ರಚನೆಯಲ್ಲಿ ಒಂದೇ ವೆಬ್ ಪೋರ್ಟಲ್‌ನಲ್ಲಿ ವಿವರಗಳನ್ನು ಅಪ್‌ಲೋಡ್ ಮಾಡಲು PM ಕಿಸಾನ್ ವೆಬ್‌ಸೈಟ್ ಪ್ರಾರಂಭಿಸಲಾಗಿದೆ.
----------
Heavy Rain| ರಾಜ್ಯದಲ್ಲಿ ಮುಂದುವರಿದ ಮಳೆಯ ಅಬ್ಬರ!
----------
2.ತೊಗರಿಬೆಳೆಗೆ ನೆಟೆರೋಗ ತಗುಲಿದ್ದು ಸಂಕಷ್ಟದಲ್ಲಿರುವ ರೈತರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ರೈತರು ಕಲಬುರಗಿಯ ಜಿಲ್ಲಾಧಿಕಾರಿ ಕಚೇರಿಯ ಮುಂದೆಗುರುವಾರ ರೈತರು ಮತ್ತು ಕಾಂಗ್ರೆಸ್ನಿಂದ ಪ್ರತಿಭಟನೆ ನಡೆಯಿತು. ಶಾಸಕ ಪ್ರಿಯಾಂಕ್ ಖರ್ಗೆ ಅವರು ಮಾತನಾಡಿ, ಕಲ್ಯಾಣ ಕರ್ನಾಟಕ ಭಾಗದಲ್ಲಿ ನೆಟೆರೋಗದಿಂದ ತೊಗರಿ ಬೆಳೆಯು ಸಂಪೂರ್ಣ ಹಾಳಾಗಿದೆ. ಆದರೆ, ಸರ್ಕಾರ ಇದುವರೆಗೂ ಯಾವುದೇ ಸಮೀಕ್ಷೆಯನ್ನು ನಡೆಸದೆ, ಪರಿಹಾರ ನೀಡಿಲ್ಲ ಎಂದು ದೂರಿದರು. ಸರ್ಕಾರ ಶೀಘ್ರ ರೈತರ ಸಮಸ್ಯೆಗೆ ಸ್ಪಂದಿಸಬೇಕು ಎಂದು ಆಗ್ರಹಿಸಿದರು.
----------
ರಾಜ್ಯದಲ್ಲಿ “ಪಕ್ಷಿ ಉತ್ಸವ”; ಎಲ್ಲಿ ಮತ್ತು ಯಾವಾಗ ಇಲ್ಲಿದೆ ವಿವರ!
----------
3. ನಾಲ್ಕು ವರ್ಷಗಳ ಪದವಿ ಕೋರ್ಸ್‌ಅನ್ನು ಪೂರ್ಣ ಪ್ರಮಾಣದಲ್ಲಿ ಪ್ರಾರಂಭಿಸುವ ವರೆಗೆ ಮೂರು ವರ್ಷದ ಪದವಿ ಕೋರ್ಸ್ ಸ್ಥಗಿತ ಮಾಡುವುದಿಲ್ಲ ಎಂದು ಯುಜಿಸಿ ಅಧ್ಯಕ್ಷ ಎಂ.ಜಗದೀಶ್ ಕುಮಾರ್ ತಿಳಿಸಿದ್ದಾರೆ. ವಿಶ್ವವಿದ್ಯಾಲಯಗಳಿಗೆ ಮೂರು ಅಥವಾ ನಾಲ್ಕು ವರ್ಷದ ಕೋರ್ಸ್‌ಗಳನ್ನು ಆಯ್ಕೆ ಮಾಡಿಕೊಳ್ಳಲು ಅವಕಾಶ ಇರುತ್ತದೆ ಎಂದು ಹೇಳಿದ್ದಾರೆ.
----------
4.ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವಿನ ಗಡಿ ವಿವಾದವನ್ನು ಸೌಹಾರ್ದವಾಗಿ ಬಗೆಹರಿಸಿಕೊಳ್ಳುವ ಉದ್ದೇಶದಿಂದ ಉಭಯ ರಾಜ್ಯಗಳ ಸಚಿವರನ್ನು ಒಳಗೊಂಡ ಸಮಿತಿಯನ್ನು ರಚಿಸಲಾಗಿದೆ. ಗಡಿವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಿದ್ದು, ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಬುಧವಾರ ಸಭೆ ನಡೆಯಿತು. ಸಭೆಯಲ್ಲಿ ಪ್ರತ್ಯೇಕ ಸಮಿತಿ ರಚಿಸಲು ತೀರ್ಮಾನಿಸಲಾಯಿತು.
ಉಭಯ ರಾಜ್ಯಗಳ ಗಡಿ ವಿವಾದ ಸೂಕ್ಷ್ಮ ವಿಷಯವಾಗಿದ್ದು, ರಸ್ತೆಯಲ್ಲಿ ನಿಂತು ಚರ್ಚಿಸುವ ವಿಷಯವಲ್ಲ. ಸಂವಿಧಾನ ಬದ್ಧವಾಗಿ ವಿವಾದ ಇತ್ಯರ್ಥಗೊಳಿಸುತ್ತೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ. ಕರ್ನಾಟಕ ಮಹಾರಾಷ್ಟ್ರ ಗಡಿ ವಿವಾದದ ಇತ್ಯರ್ಥಕ್ಕಾಗಿ ಮಹಾರಾಷ್ಟ್ರದ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಕರ್ನಾಟಕದ ಮುಖ್ಯಮಂತ್ರಿ ಮತ್ತು ಮಂತ್ರಿಗಳ ಜೊತೆ ಅಮಿತ್ ಶಾ ಸಭೆ ನಡೆಸಿದರು.
----------
ಆಧಾರ್ ಕಾರ್ಡ್‌ನೊಂದಿಗೆ ಪಾನ್ ಕಾರ್ಡ್ ಜೋಡಣೆ ಕಡ್ಡಾಯ: ಮತ್ತೊಮ್ಮೆ ಗಡುವು!
----------
5.ರಾಜ್ಯದಲ್ಲಿ ಬುಧವಾರಕರಾವಳಿ ಮತ್ತು ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಸಾಧಾರಣ ಮಳೆ ಆಗಿದೆ. ಸೋಮವಾರ ಪೇಟೆ, ಶನಿವಾರಸಂತೆ ಭಾಗದಲ್ಲಿ 8 ಸೆಂ.ಮೀ ಮಳೆ ಆಗಿರುವುದು ವರದಿ ಆಗಿದೆ. ಗುರುವಾರ ಹಾಗೂ ಶುಕ್ರವಾರ ಸಾಧಾರಣ ಮಳೆ ಮುಂದುವರಿಯಲಿದ್ದು, ರಾಜ್ಯದ ಒಂದೆರಡು ಕಡೆಗಳಲ್ಲಿ ಹಗುರ ಮಳೆ ಆಗುವ ಸಾಧ್ಯತೆ ಇದೆ. ಉಳಿದಂತೆ ಯಾವುದೇ ಗಮನಾರ್ಹ ಬದಲಾವಣೆ ಇಲ್ಲ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.
----------
6.ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆ ನಡೆಸಲು ವಿಳಂಬ ನೀತಿ ಅನುಸರಿಸುತ್ತಿರುವ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ₹ 5 ಲಕ್ಷ ದಂಡ ವಿಧಿಸಿದೆ. ತಾಲ್ಲೂಕು, ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮರು ವಿಂಗಡಣೆ ಹಾಗೂ ಮೀಸಲಾತಿ ನಿಗದಿಪಡಿಸುವ ಉದ್ದೇಶದಿಂದ ಪ್ರತ್ಯೇಕ ಸೀಮಾ ನಿರ್ಣಯ ಆಯೋಗ ರಚಿಸಿರುವುದನ್ನು ಪ್ರಶ್ನಿಸಿ ರಾಜ್ಯ ಚುನಾವಣಾ ಆಯೋಗ ಅರ್ಜಿ ಸಲ್ಲಿಸಿತ್ತು. ಕ್ಷೇತ್ರ ಪುನರ್‌ವಿಂಗಡಣೆ ಹಾಗೂ ಮೀಸಲಾತಿ ನಿಗದಿಪ್ರಕ್ರಿಯೆ ಪೂರ್ಣಗೊಳಿಸಲು 3 ತಿಂಗಳು ಸಮಯ ನೀಡಬೇಕು ಎಂದು ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗವು ಅರ್ಜಿ ಸಲ್ಲಿಸಿದ್ದವು.
----------
7.ರಾಜ್ಯದಲ್ಲಿ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಸರ್ಕಾರಿ ಆಸ್ಪತ್ರೆಗಳಲ್ಲಿ ಜನವರಿಯಿಂದ ಉಚಿತವಾಗಿ ಆರೋಗ್ಯ ತಪಾಸಣೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ನೇತ್ರ ಚಿಕಿತ್ಸೆ, ಕನ್ನಡಕ ಹಾಗೂ ಶ್ರವಣದೋಷ ಇರುವವರಿಗೆ ಉಚಿತ ಸಲಕರಣೆ ನೀಡಲಾಗುವುದು. ಎಲ್ಲರಿಗೂ ಉತ್ತಮ ಆರೋಗ್ಯ ಸೇವೆ ನೀಡಲು ಸರ್ಕಾರ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ನಗರ ಪ್ರದೇಶದ ಬಡವರಿಗೆ ಉಚಿತ ಆರೋಗ್ಯ ಸೇವೆ ನೀಡಲು ರಾಜ್ಯದಾದ್ಯಂತ ನಮ್ಮ ಕ್ಲಿನಿಕ್‌ಗಳನ್ನು ಪ್ರಾರಂಭಿಸಲಾಗುತ್ತಿದೆ ಎಂದಿದ್ದಾರೆ.
----------
8.ಕಬ್ಬಿನ ಉತ್ಪನ್ನಗಳ ಲಾಭ ಹೆಚ್ಚುವರಿ50 ರೂಪಾಯಿಯನ್ನು ಸರ್ಕಾರ ಸದ್ಯದಲ್ಲೇ ಪುನರ್ ಪರಿಸೀಲಿನೆ ನಡೆಸಿ ಹೆಚ್ಚಳ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ. ರೈತ ಮುಖಂಡರೊಂದಿಗೆ ಸಭೆ ನಡೆಸಿದ ನಂತರ ಅವರು ಮಾತನಾಡಿದರು. ಕಬ್ಬು ಕಟಾವು ಸಾಗಾಣಿಕೆ ವೆಚ್ಚ ಏರಿಕೆ ಕಡಿಮೆ ಮಾಡಿ ರೈತರಿಗೆ ಹೆಚ್ಚು ಬೆಲೆ ನೀಡಲಾಗುವುದು. ತೂಕದಲ್ಲಿ ಮೋಸ ತಡೆಗಟ್ಟಲು ಎಲ್ಲ ಸಕ್ಕರೆ ಕಾರ್ಖಾನೆಗಳ ಮುಂದೆ ಸರ್ಕಾರದ ವತಿಯಿಂದಲೇ ಎಪಿಎಂಸಿಗಳ ಮೂಲಕ ತೂಕದ ಯಂತ್ರ ಸರ್ಕಾರ ಸ್ಥಾಪಿಸಲಾಗುವುದು. ಹೀಗಾಗಿ, ಚಳವಳಿಯನ್ನು ಕೈ ಬಿಡಬೇಕು ಎಂದು ರೈತ ಮುಖಂಡರಲ್ಲಿ ಅವರು ಮನವಿ ಮಾಡಿದರು. ರಾಜ್ಯರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಅವರು ಮಾತನಾಡಿ, ಕಬ್ಬು ಬೆಳೆಗಾರರು ನಿರಂತರ 23 ದಿನದಿಂದ ಧರಣಿ ನಡೆಸುತ್ತಿದ್ದರೂ, ಸರ್ಕಾರ ಗಂಭೀರ ಚಿಂತನೆ ನಡೆಸಿಲ್ಲ. ಕಬ್ಬಿನ ಎಫ್‌ಆರ್‌ಪಿ ದರ ಪ್ರಕಾರ ರೈತರಿಗೆ ಉತ್ಪಾದನ ವೆಚ್ಚ ಸಿಗುತ್ತಿಲ್ಲ ಎಂದು ಎಂದು ಅಸಮಾಧಾನ ವ್ಯಕ್ತಪಡಿಸಿದರು.
----------
9.ತಿಂಗಳಿಂದ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದರೂ, ರಾಜ್ಯ ಸರ್ಕಾರ ನಿರ್ಲಕ್ಷ ಮಾಡುತ್ತಿರುವ ಹಿನ್ನೆಲೆಯಲ್ಲಿ ರೈತ ಸಂಘಟನೆಯಿಂದ ಡಿಸೆಂಬರ್19ರಂದು ಮಂಡ್ಯ ನಗರ ಬಂದ್‌ಗೆ ಕರೆ ನೀಡಲಾಗಿದೆ. ಟನ್ ಕಬ್ಬಿಗೆ 4500 ರೂಪಾಯಿ ಹಾಗೂ ಲೀಟರ್ ಹಾಲಿಗೆ 40 ನಿಗದಿ ಮಾಡುವಂತೆ ಆಗ್ರಹಿಸಿ ಕಳೆದ 34 ದಿನಗಳಿಂದ ನಿರಂತರವಾಗಿ ಪ್ರತಿಭಟನೆ ನಡೆಯುತ್ತಿದ್ದರೂ ಸರ್ಕಾರ ಸ್ಪಂದಿಸುತ್ತಿಲ್ಲ. ಹೀಗಾಗಿ, ಪ್ರತಿಭಟನೆಗೆ ಮುಂದಾಗಿದ್ದೇವೆ ಎಂದು ರೈತ ಮುಖಂಡ ಎಸ್.ಸಿ.ಮಧು ಚಂದನ್ ತಿಳಿಸಿದ್ದಾರೆ. ರೈತರ ಬಂದ್‌ಗೆ ವ್ಯಾಪಾರಸ್ಥರು, ವಾಹನ ಚಾಲಕರು, ಹೋಟೆಲ್ ಮಾಲೀಕರು ಸೇರಿದಂತೆ ಬಹುತೇಕ ಸಂಘಟನೆಗಳು ಬೆಂಬಲ ಸೂಚಿಸಿವೆ ಎಂದಿದ್ದಾರೆ.
----------
10.ಕೃಷಿಯಲ್ಲಿ ಡ್ರೋನ್ ತಂತ್ರಜ್ಞಾನ ಬಳಕೆಯನ್ನು ಉತ್ತೇಜಿಸುವ ಉದ್ದೇಶದಿಂದ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆ ಧನಸಹಾಯ ನೀಡುತ್ತಿದೆ. ಭಾರತೀಯ ಕೃಷಿ ಸಂಶೋಧನಾ ಮಂಡಳಿ, ಕೃಷಿವಿಜ್ಞಾನ ಕೇಂದ್ರಗಳು, ರಾಜ್ಯ ಕೃಷಿ ವಿವಿ ಸೇರಿದಂತೆ ವಿವಿಧ ಸಂಸ್ಥೆಗಳು ಡ್ರೋನ್‌ಗಳನ್ನು ಖರೀದಿಸಲು ಪ್ರತಿ ಡ್ರೋನ್‌ಗೆ10 ಲಕ್ಷ ನೀಡುತ್ತಿದೆ. ರೈತ ಉತ್ಪಾದಕರ ಸಂಸ್ಥೆಗಳು, ರೈತರ ಹೊಲಗಳಲ್ಲಿ ಅದರ ಪ್ರಾತ್ಯಕ್ಷಿಕೆಗಾಗಿ ಕೃಷಿ ಡ್ರೋನ್‌ನ ವೆಚ್ಚದ ಶೇಕಡ 75 ವರೆಗೆ ಅನುದಾನವನ್ನು ಒದಗಿಸಲಾಗುತ್ತದೆ.