News

ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಹೆಸರು ನೋಂದಾಯಿಸಿಲ್ಲವೇ? 6 ಸಾವಿರ ಸಹಾಯಧನ ಪಡೆಯಲು ಇಲ್ಲಿ ಕ್ಲಿಕ್ ಮಾಡಿ

17 January, 2021 6:12 AM IST By:
PM Kisan

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಅತ್ಯಂತ ಪ್ರಸಿದ್ಧಿಹೊಂದಿದ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ನಿಮ್ಮ ಹೆಸರು  ನೋಂದಾಯಿಸದಿದ್ದರೆ ಕೂಡಲೇ ಹೆಸರು ನೋಂದಾಯಿಸಿಕೊಳ್ಳಿ. ಈ ಯೋಜನೆಯಡಿ ಸರಕಾರವು ಎಲ್ಲ ಅರ್ಹ ರೈತರಿಗೆ ಪ್ರತಿ ವರ್ಷ6000 ರೂಪಾಯಿಯನ್ನು ಅವರ ಬ್ಯಾಂಕ್‌ ಖಾತೆಗಳಿಗೆ ನೇರವಾಗಿ ಜಮೆ ಮಾಡುತ್ತದೆ.

ಪಿಎಂ ಕಿಸಾನ್ ನಿಧಿ ಯೋಜನೆಯಡಿ ಹೆಸರು ನೋಂದಾಯಿಸಿಲು ನೀವು ಎಲ್ಲಿಗೂ ಹೋಗಬೇಕಿಲ್ಲ. ಮನೆಯಲ್ಲಿಯೇ ಕುಳಿತು ನೋಂದಾಯಿಸಿಕೊಳ್ಳಬಹುದು. ಹೆಸರು ನೋಂದಾಯಿಸಿಕೊಂಡಿದ್ದರೆ ಯೋಜನೆಯ ಫಲಾನುಭವಿಗಳ ಪಟ್ಟಿಯಲ್ಲಿ ತಮ್ಮ ಹೆಸರು ಇದೆಯೋ? ಇಲ್ಲವೋ ಎಂಬುದನ್ನು ಸಹ ಪರಿಶೀಲಿಸಿಕೊಳ್ಳಬಹುದು.

ದಾಖಲಾತಿಗಳು(Documents):

ಪಿಎಂ ಕಿಸಾನ್ ಯೋಜನೆಯಡಿ ಸಹಾಯ ಧನವನ್ನು ಪಡೆಯಲು ಆಧಾರ್ ಕಾರ್ಡ್ ಕಡ್ಡಾಯಗೊಳಿಸಲಾಗಿದೆ. ಆಧಾರ್ ಇಲ್ಲದ ರೈತರು ತಾತ್ಕಾಲಿಕವಾಗಿ ಬೇರೆ ಗುರುತಿನ ದಾಖಲೆ ಒದಗಿಸಬೇಕಿದೆ. ಮೊದಲನೇ ಕಂತಿನ ಸಹಾಯ ಧನ ಪಡೆಯಲು ಆಧಾರ್ ಇಲ್ಲದ ರೈತರು ಮತದಾರರ ಗುರುತಿನ ಚೀಟಿ, ಡಿಎಲ್ ಇಲ್ಲವೇ, ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ನೀಡಿರುವ ಫೋಟೋ ಸಹಿತ ಯಾವುದಾದರೂ ಗುರುತಿನ ಚೀಟಿಯನ್ನು ಕಡ್ಡಾಯವಾಗಿ ಒದಗಿಸಬೇಕಿದೆ.

ಆಧಾರ್ ಕಾರ್ಡ್ ಕಡ್ಡಾಯ (Adhar card):

ರೈತರು 2 ನೇ, 3ನೇ  ಕಂತಿನಿಂದ ಸಹಾಯ ಧನ ಪಡೆಯುವ ಸಂದರ್ಭದಲ್ಲಿ ಕಡ್ಡಾಯವಾಗಿ ಆಧಾರ್ ಕಾರ್ಡ್ ಅನ್ನು ಒದಗಿಸಬೇಕೆಂದು ತಿಳಿಸಲಾಗಿದೆ.

PM Kisan Registration

ಯಾರು ಫಲಾನುಭವಿಗಳು (Beneficiary) ?

 ಗಂಡ, ಹೆಂಡತಿ ಹಾಗು 18 ವರ್ಷದೊಳಗಿನ ಮಕ್ಕಳು ಇರುವ ಕುಟುಂಬ ಇರಬೇಕು.  ಎರಡು ಹೆಕ್ಟೇರ್ ಜಮೀನು ಇರಬೇಕು. - ಫೆಬ್ರವರಿ 1, 2019ರ ಕ್ಕಿಂತ ಮೊದಲಿನ ಭೂ ದಾಖಲೆಗಳಲ್ಲಿ ಹೆಸರು ಇರುವ ರೈತರನ್ನು ಮಾತ್ರ ಪರಿಗಣಿಸಲಾಗುತ್ತದೆ. ಫೆಬ್ರವರಿ 1ರ ನಂತರ ಬದಲಾವಣೆ ಮಾಡಲಾದ ಭೂ ದಾಖಲಾತಿಗಳನ್ನು ಪರಿಗಣನೆಗೆ ತೆಗೆದುಕೊಳ್ಳುವುದಿಲ್ಲ. - ಕುಟುಂಬವೊಂದಕ್ಕೆ ಸೇರಿದ ಜಮೀನು ವಿವಿಧ ಹಳ್ಳಿಗಳಲ್ಲಿ ಅಥವಾ ಕಂದಾಯ ದಾಖಲೆಗಳಲ್ಲಿ ಹಂಚಿ ಹೋಗಿದ್ದರೂ ಪರಿಗಣಿಸಲಾಗುತ್ತದೆ.

ಹೆಸರು ನೋಂದಾಯಿಸುವುದು ಹೇಗೆ?

ಫಲಾನುಭವಿಗಳಾಗಲು ಈ ಲಿಂಕ್   https://www.pmkisan.gov.in/RegistrationForm.aspx  ಮೇಲೆ ಕ್ಲಿಕ್ ಮಾಡಿ ಅಗತ್ಯ ಮಾಹಿತಿಗಳನ್ನು ನೀಡಿ ಹೆಸರು ನೋಂದಾಯಿಸಿಕೊಳ್ಳಿ.

ಈ ತಂತ್ರಾಂಶದಲ್ಲಿ  ತಮ್ಮ ಜಮೀನು ಇರುವ ಜಿಲ್ಲೆ, ತಾಲೂಕು, ಹೋಬಳಿ, ಮತ್ತು ಗ್ರಾಮವನ್ನು ಆಯ್ಕೆ ಮಾಡಿ ನಂತರ ತಮ್ಮ ಮೊಬೈಲ್  ನಂಬರ್ ಅನ್ನು ದಾಖಲಿಸಿ ಮುಂದುವರಿಯಬೇಕು. ಮುಂದಿನ ಹಂತದಲ್ಲಿ ನಾಲ್ಕು ಸಂಖ್ಯೆಯ ಪಾಸ್‍ವರ್ಡ್ ನಂಬರ್ ದಾಖಲಿಸಬೇಕು. ನಂತರ ಗ್ರಾಮವನ್ನು ಆಯ್ಕೆ ಮಾಡಿ ಅಪ್‍ಲೋಡ್ ಎಂಬ ಬಟನ್ ಒತ್ತಬೇಕು.

ಈ ಹಂತದಲ್ಲಿ ಗ್ರಾಮಕ್ಕೆ ಸಂಬಂಧಿಸಿದ ಭೂ ದಾಖಲೆಗಳ ವಿವರಗಳು ನೇರವಾಗಿ ಭೂಮಿ ದತ್ತಾಂಶದಿಂದ ಮೊಬೈಲ್‍ಗೆ ಡೌನ್‍ಲೋಡ್ ಆಗುತ್ತದೆ. ಸರ್ವೆ ಸಂಖ್ಯೆ ದಾಖಲಿಸಿ ಸ್ವಾಧೀನದಾರರ ಹೆಸರನ್ನು ಆಯ್ಕೆ ಮಾಡಬೇಕು. ವರ್ಗ, ಸಣ್ಣ, ಅತೀ ಸಣ್ಣ ಹಿಡುವಳಿದಾರರ ಮಾಹಿತಿಯನ್ನು ಆಯ್ಕೆ ಮಾಡಿ ದೃಢೀಕರಿಸಿದ ನಂತರ ಆಧಾರ್  ಮಾಹಿತಿಯನ್ನು ದಾಖಲಿಸಬೇಕು. ಅಥವಾ ಆಧಾರ್ ಮಾಹಿತಿಯನ್ನು ನೇರವಾಗಿ ಆಧಾರ್ ಕಾರ್ಡ್‍ನಲ್ಲಿರುವ ಕ್ಯೂ  ಆರ್ ಕೋಡ್ ಅನ್ನು ಮೊಬೈಲ್‍ನಿಂದ ಸ್ಕ್ಯಾನ್ ಮಾಡುವ ಮೂಲಕವೂ ಸ್ವಯಂಚಾಲಿತವಾಗಿ ಆಧಾರ್ ವಿವರ ದಾಖಲಿಸುವ ಸೌಲಭ್ಯವೂ ಇದೆ.

ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ:

ಪಿಎಂ. ಕಿಸಾನ್ ಯೋಜನಾ ಹೆಲ್ಪ್ ಲೈನ್ ನಂಬರ್ 011-24300606, ಅಥವಾ ಪಿಎಂ ಕಿಸಾನ್ ಯೋಜನೆ ಟೋಲ್ ಫ್ರಿ ನಂ. 1800115526 ಗೆ ಸಂಪರ್ಕಿಸಬಹುದು.ಇದಲ್ಲದೆ ಹೆಲ್ಪ್ ಲೈನ್ 155261 ಕರೆ ಸಮಸ್ಯೆ ಬಗೆಹರಿಸಿಕೊಳ್ಳಬಹುದು. ಇದು ಬಿಟ್ಟು ಕೇಂದ್ರ ಕೃಷಿ ಸಚಿವಾಲಯ 011-23381092 ಗೆ ಕರೆ ಮಾಡಬಹುದು.

ಪ್ಲೇಸ್ಟೋರ್‍ನಿಂದ (playstore) ಪಿಎಂ ಕಿಸಾನ್  ಆ್ಯಪ್  ಡೌಲ್ಡೋಡ್:

ಈ ಮೊಬೈಲ್ ಆ್ಯಪ್‍ನ್ನು ಗೂಗಲ್ ಪ್ಲೇಸ್ಟೋರ್‍ (Google play store) ನಿಂದ ಡೌನ್‍ಲೌಡ್ ಮಾಡಿಕೊಂಡು ಸ್ವಯಂ ದೃಢೀಕರಣ ಪತ್ರದಲ್ಲಿ ಅಗತ್ಯ ಮಾಹಿತಿ ಭರ್ತಿ ಮಾಡಿ ಮೊಬೈಲ್ ಮೂಲಕವೇ ಮಾಹಿತಿ ಅಪ್‍ಲೋಡ್ ಮಾಡಬಹುದು.