News

ಪಿಎಂ ಕಿಸಾನ್ ಸಮ್ಮಾನ್ ಯೋಜನೆಯ 7 ನೇ ಕಂತಿನ ಹಣ ಈ ವಾರ ಜಮೆಯಾಗುವ ಸಾಧ್ಯತೆ

14 December, 2020 6:24 AM IST By:

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಏಳನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಈ ವಾರ ಜಮೆಯಾಗುವ ಸಾಧ್ಯತೆಯಿದೆ.

ನೋಂದಣಿ ಮಾಡಿಸಿದ ಎಲ್ಲಾ ರೈತರ ಖಾತೆಗಳಿಗೆ ಈಗಾಗಲೇ ಆರನೇ ಕಂತಿನ ಹಣ ಆಗಸ್ಟ್ ತಿಂಗಳಲ್ಲಿ ಜಮೆಯಾಗಿತ್ತು. ಏಳನೇ ಕಂತಿನ ಹಣ ಇದೇ ವಾರ ಜಮೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. ಜಮೆ ಮಾಡುವ ಪ್ರಕ್ರಿಯೆ ಆರಂಭವಾಗಿದೆ.

ಇದನ್ನೂ ಓದಿ: ಪಿಎಂ ಕಿಸಾನ್ ಸ್ಟೇಟಸ್ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಈಗ ಮನೆಯಲ್ಲಿಯೇ ಕುಳಿತು 7ನೇ ಕಂತಿನ ಹಣದ ಸ್ಟೇಟಸ್ ನೋಡಿಕೊಳ್ಳಬಹುದು. ಪಿಎಂ ಕಿಸಾನ್ ಸ್ಟೇಟಸ್ ಚೆಕ್ ಮಾಡಲು ಈ ಲಿಂಕ್. https://pmkisan.gov.in/beneficiarystatus.aspx ಕ್ಲಿಕ್ ಮಾಡಿ ನಿಮ್ಮ ಮೊಬೈಲ್ ನಂಬರ್ ಅಥವಾ ಆಧಾರ್ ಕಾರ್ಡ್ ಸೆಲೆಕ್ಟ್ ಮಾಡಿಕೊಂಡು ಚೆಕ್ ಮಾಡಿಕೊಳ್ಳಬಹುದು. ಅಷ್ಟೇ ಅಲ್ಲ PM KISSAN ಯೋಜನೆಯ 7 ನೆ ಕಂತಿನ ಹೊಸ ಲಿಸ್ಟ್ ನಲ್ಲಿ ನಿಮ್ಮ ಹೆಸರು ಇದೆಯೋ ಇಲ್ಲವೋ ಈಗಲೇ ಚೆಕ್ ಮಾಡಿಕೊಳ್ಳಬಹುದು.

ಹೊಸ beneficiary ಲಿಸ್ಟ್ ಅನ್ನು ಹೀಗೆ ಚೆಕ್ ಮಾಡಿಕೊಳ್ಳಬೇಕು. ಗೂಗಲ್ನಲ್ಲಿ ಪಿಎಂ-ಕಿಸಾನ್ ಎಂದು ಟೈಪ್ ಮಾಡಿ ಹಾಗೂ ಸರ್ಚ್ ಕೊಡಿ, ನಂತರ ಮೊದಲ ಆಯ್ಕೆಯನ್ನು ಆಯ್ಕೆಮಾಡಿ ಆಗ ಪಿಎಂಕಿಸಾನ್ ಹೋಂ  ಪೇಜಿಗೆ ತೆರೆಯುತ್ತದೆ,  ಅಲ್ಲಿ ಬಲಗಡೆ ಬೇನಿಫಿಷೇರಿ ಲಿಸ್ಟ್ ಎಂಬ ಆಪ್ಷನ್ ಇದೆ, ಅದರ ಮೇಲೆ ಕ್ಲಿಕ್ ಮಾಡಬೇಕು.  ಅಲ್ಲಿ ನಿಮ್ಮ ರಾಜ್ಯ ಜಿಲ್ಲೆ ತಾಲೂಕು ಹಾಗೂ ಗ್ರಾಮವನ್ನು ಆಯ್ಕೆ ಮಾಡಿಕೊಂಡು ನಿಮ್ಮ ಹೊಸ beneficiary ಲಿಸ್ಟ್ ಅನ್ನು ನೋಡಿಕೊಳ್ಳಬಹುದು  ಏನಾದರೂ ತಾಂತ್ರಿಕ ದೋಷವಿದ್ದರೆ ಈ ಕೆಳಗೆ ನೀಡಿದ ಸಹಾಯವಾಣಿ ನಂಬರಿಗೆ ಸಂಪರ್ಕಿಸಬಹುದು.

ಟೋಲ್ ಫ್ರೀ ನಂಬರ್ : 18001155266, ಪಿಎಂ ಕಿಸಾನ್ ಹೆಲ್ಪ್ ಲೈನ್ ನಂಬರ್ : 155261, ಪಿಎಂ ಕಿಸಾನ್ ಲ್ಯಾಂಡಲೈನ್ ನಂಬರ್ : 011—23381092, 23382401, PM Kisan helpline: 0120-6025109, 011-24300606 ಅಥವಾ ಈ Email ID: pmkisan-ict@gov.in ಗೆ ಮೇಲ್ ಮಾಡಬಹುದು.