1. ಸುದ್ದಿಗಳು

ರೈತರ ಖಾತೆಗಳಿಗೆ ಪಿಎಂ ಕಿಸಾನ್ ನಗದು ಜಮಾ: ಫಲಾನುಭವಿಗಳು ಪಿಎಂ ಕಿಸಾನ್ ಸ್ಟೇಟಸ್ ನೋಡಲು ಇಲ್ಲಿ ಕ್ಲಿಕ್ ಮಾಡಿ

ಕೇಂದ್ರ ಸರ್ಕಾರ ಇಂದು ರೈತರ ಖಾತೆಗಳಿಗೆ ಪಿಎಂ ಕಿಸಾನ್ 9ನೇ ಕಂತಿನ ಹಣ ಜಮಾ ಮಾಡಿದೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮನ್ ನಿಧಿ ಯೋಜನೆ(ಪಿಎಂ ಕಿಸಾನ್) ಯೋಜನೆಯನ್ನು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ 2018ರಲ್ಲಿ ಆರಂಭಿಸಿದೆ.

ಈ ಯೋಜನೆಯಡಿ ಸಣ್ಣ ಮತ್ತು ಅತಿಸಣ್ಣ ರೈತರಿಗೆ ನೆರವಾಗಲು ವಾರ್ಷಿಕ 6,000 ರೂಗಳನ್ನು ಒಂದೇ ಬಾರಿಗೆ ನೀಡದೆ ಮೂರು ಕಂತುಗಳಲ್ಲಿ ರೈತರ ಬ್ಯಾಂಕ್‌ ಖಾತೆಗಳಲ್ಲಿ ಜಮಾ ಮಾಡಲಾಗುತ್ತಿದೆ. ಕೇಂದ್ರ ಸರ್ಕಾರ ಅರ್ಹ ರೈತನ ಖಾತೆಯಲ್ಲಿ ಪ್ರತಿ ವರ್ಷ ನಾಲ್ಕು ತಿಂಗಳಿಗೊಮ್ಮೆ ವರ್ಷಕ್ಕೆ ಮೂರು ಸಲ ಎರಡು ಸಾವಿರ ರೂಪಾಯಿ ಜಮಾ ಮಾಡುತ್ತದೆ.

ಏಪ್ರಿಲ್-ಜುಲೈ ನಡುವೆ ಮೊದಲ ಕಂತು, ಆಗಸ್ಟ್-ನವೆಂಬರ್ ನಡುವೆ ಎರಡನೇ ಕಂತು ಹಾಗೂ ಡಿಸೆಂಬರ್-ಮಾರ್ಚ್ ನಡುವೆ ಮೂರನೇ ಕಂತು ನಗದು ಜಮಾ ಮಾಡುತ್ತದೆ. ಈ ಬಾರಿ 10  ಕೋಟಿ ಅರ್ಹ ರೈತರ ಖಾತೆಗೆ 9ನೇ ಕಂತಿನ ಹಣವನ್ನು ವೀಡಿಯೋ ಕಾನ್ಸರೆನ್ಸ್ ನಡೆಸಿದ ನಂತರ ರೈತರ ಖಾತೆಗೆ ಜಮೆ ಮಾಡಿದರು.

ಒಟ್ಟು 2 ಹೆಕ್ಟೇರ್‌ಗಿಂತ ಕಡಿಮೆ ಭೂಮಿ ಹೊಂದಿರುವ ರೈತರು ಈ ವಾರ್ಷಿಕ ಯೋಜನೆಯಿಂದ ಪ್ರಯೋಜನ ಪಡೆಯಲಿದ್ದಾರೆ. ಈ ಯೋಜನೆಯನ್ನು 2018ರ ಡಿಸೆಂಬರ್‌ನಲ್ಲಿ ಪ್ರಾರಂಭಿಸಿದಾಗಿನಿಂದ ಸರ್ಕಾರ 9 ಕಂತುಗಳಲ್ಲಿ ರೈತರಿಗೆ ಹಣ ಪಾವತಿಸಿದೆ. ಆದರೆ, ಹಣವನ್ನು ನಮ್ಮ ಖಾತೆಗೆ ಜಮಾ ಮಾಡಲಾಗಿದೆಯೇ ಅಥವಾ ಇಲ್ಲವೇ ಎಂಬುದನ್ನು ಸುಲಭವಾಗಿ ತಿಳಿದುಕೊಳ್ಳಬಹುದು. ಕೆಲವರಿಗೆ ಎಸ್‌ ಎಂ ಎಸ್ ಸಂದೇಶಗಳು ಬರಲಿವೆ. ಒಂದುವೇಳೆ ನಿಮಗೆ ಸಂದೇಶ ಬರದಿದ್ದರೆ ಈ ಕೆಳಗಿನ ವಿಧಾನ ಅನುಸರಿಸಿ.

ಸ್ಟೇಟಸ್‌ ಈ ರೀತಿ ಚೆಕ್‌ ಮಾಡಿಕೊಳ್ಳಿ:

ಪಿಎಂ ಕಿಸಾನ್ ಯೋಜನೆಗೆ ನೋಂದಣಿ ಮಾಡಿಸಿಕೊಂಡ ರೈತರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿದರೆ ಸಾಕು,  https://pmkisan.gov.in/beneficiarystatus.aspx  ಕೇಂದ್ರ ಸರ್ಕಾರದ ಪಿಎಂ ಕಿಸಾನ್ ಯೋಜನೆಯ ವೆಬ್ ಪೇಜ್ ಓಪನ್ ಆಗುತ್ತದೆ.  ಇಲ್ಲಿ ನಿಮ್ಮ ಆಧಾರ್ ನಂಬರ್ ಅಥವಾ ಅಕೌಂಟ್ ನಂಬರ್ ಅಥವಾ ಮೊಬೈಲ್ ನಂಬರ್ ಈ ಮೂರರಲ್ಲಿ ಯಾವುದಾದರೊಂದನ್ನು ಸೆಲೆಕ್ಟ್ ಮಾಡಿಕೊಳ್ಳಬೇಕು. ಒಂದು ವೇಳೆ ನೀವು ಮೊಬೈಲ್ ನಂಬರ್ ಸೆಲೆಕ್ಟ್ ಮಾಡಿಕೊಂಡರೆ ಅಲ್ಲಿ ನಿಮ್ಮ ಮೊಬೈಲ್ ನಂಬರ್ ನಮೂದಿಸಿ ಗೆಟ್ ಡಾಟಾ  ಮೇಲೆ ಕ್ಲಿಕ್ ಮಾಡಬೇಕು. ಆಗ ಇಲ್ಲಿಯವರೆಗೆ ನಿಮ್ಮ ಯಾವ ಖಾತೆಗೆ ಎಷ್ಟು ಕಂತಿನ ಹಣ ಜಮೆಯಾಗಿದೆ ಎಂಬುದನ್ನು ನೋಡಬಹುದು.

ಒಂದು ವೇಳೆ ನೀವು ಖಾತೆಗೆ ಹಣ ಜಮೆಯಾಗುವ ಸ್ಟೇಟಸ್ ಏನೂ ತೊರಿಸದೆ ಇದ್ದರೆ ಅಥವಾ ನೋಂದಣಿಯಾಗಿಲ್ಲ ಎಂಬಿತ್ಯಾದಿ ಸಂದೇಶ ಕಂಡರೆ ನಿಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರ, ಅಥವಾ ಕೃಷಿ ಇಲಾಖೆಯ ಕಚೇರಿಗೆ ಭೇಟಿ ನೀಡಿ ಹೆಸರನ್ನು ನೋಂದಾಯಿಸಿಕೊಳ್ಳಬಹುದು. ಅಥವಾ ಕೇಂದ್ರ ಸರ್ಕಾರದ ಪಿಎಂ ಕಿಸಾನ್ ಯೋಜನೆಯ  ಸಹಾಯವಾಣಿ ನಂಬರ್ ಟೋಲ್ ಫ್ರೀ ನಂಬರ್ : 18001155266, ಪಿಎಂ ಕಿಸಾನ್ ಹೆಲ್ಪ್ ಲೈನ್ ನಂಬರ್ : 155261, ಪಿಎಂ ಕಿಸಾನ್ ಲ್ಯಾಂಡಲೈನ್ ನಂಬರ್ : 011—23381092, 23382401, PM Kisan helpline: 0120-6025109, 011-24300606 ಅಥವಾ ಈ Email ID: pmkisan-ict@gov.in ಗೆ ಮೇಲ್ ಮಾಡಬಹುದು. ನಿಮ್ಮ ಹೆಸರು ಫಲಾನುಭವಿಗಳ ಪಟ್ಟಿಯಲ್ಲಿದ್ದರೆ ಮಾತ್ರ ನಗದು ಜಮಾ ಆಗಲಿದೆ.

Published On: 09 August 2021, 09:23 PM English Summary: Pm kisan status check in mobile

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.