News

PM Krishi Sinchai Yojana : ನೀರಾವರಿ ಅಳವಡಿಸಿಕೊಳ್ಳಲು ಆಸಕ್ತ ರೈತರಿಂದ ಅರ್ಜಿ ಆಹ್ವಾನ!

08 February, 2023 2:07 PM IST By: Kalmesh T
PM Krishi Sinchai Yojana: Applications invited from interested farmers to adopt irrigation!

ನೀರಾವರಿ ಅಳವಡಿಸಿಕೊಳ್ಳಲು ಬಯಸುವ ಆಸಕ್ತ ತೋಟಗಾರಿಕೆ ಬೆಳೆ ಬೆಳೆಯುವ ರೈತ ಬಾಂಧವರಿಂದ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಅರ್ಜಿ ಆಹ್ವಾನ ಮಾಡಲಾಗಿದೆ. ಇಲ್ಲಿದೆ ಈ ಕುರಿತಾದ ವಿವರ

Poly house subsidy: ಪಾಲಿ ಹೌಸ್ ನಿರ್ಮಾಣಕ್ಕೆ ರೈತರಿಂದ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಕೆಗೆ ಫೆ.10 ಕೊನೆ ದಿನ!

2022-23 ನೇ ಸಾಲಿಗೆ ತೋಟಗಾರಿಕೆ ಇಲಾಖೆಯಿಂದ ಹನಿ ನೀರಾವರಿ ಅಳವಡಿಸಿಕೊಳ್ಳಲು ಆಸಕ್ತ ತೋಟಗಾರಿಕೆ ಬೆಳೆ ಬೆಳೆಯುವ ರೈತ ಬಾಂಧವರಿಂದ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಅರ್ಜಿ ಅಹ್ವಾನಿಸಲಾಗಿದೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ರೈತರಿಗೆ ಗರಿಷ್ಟ 2 ಹೆಕ್ಟೇರ್ ವರೆಗೆ ಶೇ.90 ರಷ್ಟು ಸಹಾಯಧನ ನೀಡಲಾಗುವುದು. ಇತರೆ ರೈತರಿಗೆ 2 ಹೆಕ್ಟೇರ್ ವರೆಗೆ ಶೇ.75 ರಷ್ಟು ಸಹಾಯಧನ ನೀಡಲಾಗುವುದು.

ತರಕಾರಿ ಹಾಗೂ ವಾಣಿಜ್ಯ ಹೂ ಬೆಳೆಗಳಿಗೆ ಗರಿಷ್ಠ 2 ಹೆಕ್ಟೇರ್ ಪ್ರದೇಶಕ್ಕೆ ಮಾತ್ರ ಸಹಾಯಧನ ನೀಡಲಾಗುವುದು. ಎಲ್ಲಾ ವರ್ಗದ ರೈತರಿಗೆ ಭಾರತ ಸರ್ಕಾರದ ಮಾರ್ಗಸೂಚಿಯನ್ವಯ 2 ಹೆಕ್ಟೇರ್ ಮೇಲ್ಪಟ್ಟು 5 ಹೆಕ್ಟೇರ್ ವರೆಗೂ ಶೇ.45 ರಷ್ಟು ಸಹಾಯಧನ ನೀಡಲಾಗುವುದು.

ಫೆಬ್ರುವರಿ 22ರಿಂದ 25ರವರೆಗೆ “ರಾಷ್ಟ್ರೀಯ ತೋಟಗಾರಿಕೆ ಮೇಳ – 2023” ಆಯೋಜನೆ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗಕ್ಕೆ ಸೇರಿದ ರೈತರಾಗಿದ್ದಲ್ಲಿ ಕಂದಾಯ ಇಲಾಖೆಯಿಂದ ಆರ್‍ಡಿ ಸಂಖ್ಯೆ ಇರುವಂತಹ ಜಾತಿ ಪ್ರಮಾಣ ಪತ್ರವನ್ನು ಸಲ್ಲಿಸುವುದು ಕಡ್ಡಾಯವಾಗಿರುತ್ತದೆ.

ತೋಟಗಾರಿಕೆ ಬೆಳೆಗಳಿಗೆ ಹನಿ ನೀರಾವರಿ ಅಳವಡಿಸುವ ಪೂರ್ವ ತಾಲೂಕಾ ತೋಟಗಾರಿಕೆ ಕಛೇರಿಯಲ್ಲಿ ಹೆಸರು ನೊಂದಾಯಿಸಿ ಕಾರ್ಯದೇಶ ಪಡೆಯತಕ್ಕದ್ದು.

ಕಾರ್ಯದೇಶ ಪಡೆಯದೇ ಅಳವಡಿಸಿಕೊಂಡಲ್ಲಿ ಸಹಾಯಧನಕ್ಕೆ ಪರಿಗಣಿಸಲಾಗುವುದಿಲ್ಲ.

ಈ ಸರ್ಕಾರಿ ನೌಕರರಿಗೆ ಸಿಹಿಸುದ್ದಿ : ಹಳೆ ಪಿಂಚಣಿ ಮರು ಜಾರಿಗೆ ಸುಪ್ರೀಂ ಕೋರ್ಟ್‌ ತೀರ್ಪು!

ಹೆಚ್ಚಿನ ಮಾಹಿತಿಗಾಗಿ ಆಯಾ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ರವರ ಕಚೇರಿಗೆ ಸಂಪರ್ಕಿಸಬೇಕು.

ವರ್ಷಾಂತ್ಯ ಸಮೀಪಿಸುತ್ತಿದ್ದು, ರೈತರು ಕೂಡಲೇ ತಾಲೂಕಿನ ತೋಟಗಾರಿಕೆ ಇಲಾಖೆಯನ್ನು ಸಂಪರ್ಕಿಸಿ, ಅರ್ಜಿ ನೋಂದಾಯಿಸಿ ಈ ಯೋಜನೆಯಡಿ ಸಹಾಯಧನ ಪಡೆದು ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕೆಂದು ತೋಟಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.