News

ಪ್ರಧಾನಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆ ಯೋಜನೆಗೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

29 January, 2021 9:11 AM IST By: KJ Staff

ಆಹಾರ ಸಂಸ್ಕರಣಾ ಕೈಗಾರಿಕೆಗಳ ಮಂತ್ರಾಲಯ (ಎಂಒಎಫ್ಪಿಐ) ವು ರಾಜ್ಯ ಮತ್ತು ಕೇಂದ್ರಾಡಳಿತ ಸರ್ಕಾರಗಳ ಪಾಲುದಾರಿಕೆಯೊಂದಿಗೆ ಕಿರು ಸಂಸ್ಕರಣಾ ಉದ್ದಿಮೆಗಳ ಉನ್ನತೀಕರಣಕ್ಕಾಗಿ ಹಣಕಾಸು, ತಾಂತ್ರಿಕ ಹಾಗೂ ವ್ಯಾಪಾರ ಬೆಂಬಲ ಒದಗಿಸಲು ಪ್ರಧಾನಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮ ಬದ್ದಗೊಳಿಸುವಿಕೆ ಯೋಜನೆ ಪ್ರಾರಂಭಿಸಿದೆ ಎಂದು ಕಲಬುರಗಿ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ರಿತೇಂದ್ರನಾಥ ಸುಗೂರು ಅವರು ತಿಳಿಸಿದ್ದಾರೆ.

ಕಲಬುರಗಿ ಜಿಲ್ಲೆಯಲ್ಲಿ ಒಂದು ಉತ್ಪನ್ನದಡಿ ತೊಗರಿ ಬೆಳೆ ಆಯ್ಕೆಯಾಗಿರುತ್ತದೆ. ವೈಯಕ್ತಿಕ ಕಿರು ಆಹಾರ ಸಂಸ್ಕರಣಾ ಘಟಕಗಳ ಉನ್ನತೀಕರಣಕ್ಕಾಗಿ ಸಹಾಯದನ ಬೆಂಬಲ ಶೇ. 35 ರಷ್ಟು ಸಾಲ ಸಂಪರ್ಕಿತ ಅನುದಾನ ನೀಡಲಾಗುತ್ತಿದೆ. ಆಸಕ್ತಿವುಳ್ಳ ಉದ್ದಿಮೆದಾರರು ಪಿಎಂಎಫ್ಎಮ್ಇ ವೆಬ್ಸೈಟ್ದಲ್ಲಿ ಅರ್ಜಿ ಸಲ್ಲಿಸಬಹುದು.

ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿ ಸಲ್ಲಿಸಲು http://pmfme.mofpi.gov.  ವೆಬ್ಸೈಟ್ಗೆ ಸಂಪರ್ಕಿಸಬೇಕೆಂದು ಅವರು ತಿಳಿಸಿದ್ದಾರೆ.