News

ಕೃಷಿ ವಲಯಕ್ಕೆ ಹೆಚ್ಚಿನ ಆಧುನೀಕರಣದ ಅಳವಡಿಕೆ ಅಗತ್ಯ-ನರೇಂದ್ರ ಮೋದಿ

29 March, 2021 11:55 AM IST By:

ಕೃಷಿಕ್ಷೇತ್ರದಲ್ಲಿ ಆಧುನಿಕ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳಲು ಇದು ಸಕಾಲ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಈ ಮೂಲಕ ಕೃಷಿಯಲ್ಲಿ ಆದಾಯ ವೃದ್ದಿಗೆ ಒತ್ತು ನೀಡುವ ಅಗತ್ಯವಿದೆ ಎಂದು ತಿಳಿಸಿದರು.

ಈಗಾಗಲೇ ಸಾಕಷ್ಟು ಸಮಯ ಕಳೆದಿದ್ದೇವೆ ಇನ್ನುಮುಂದೆ ಆಧುನಿಕ ತಂತ್ರಜ್ಞಾನ ಬಳಸಿಕೊಂಡು ಕೃಷಿಕ್ಷೇತ್ರವನ್ನು ಪ್ರಗತಿ ಪಥದತ್ತ ಕೊಂಡೊಯ್ಯುವ ಅನಿವಾರ್ಯತೆ ನಮ್ಮ ಮುಂದಿದೆ ಎಂದು ಅವರು ಹೇಳಿದ್ದಾರೆ.
ಆಕಾಶವಾಣಿಯ ತಿಂಗಳ ಸರಣಿ ಮನ್ ಕಿ ಬಾತ್ 75 ನೇ ಸಂಚಿಕೆಯಲ್ಲಿ ಮಾತನಾಡಿದ ಅವರು ಕೃಷಿ ಜೊತೆಗೆ ಪ್ರತಿಯೊಂದು ಕ್ಷೇತ್ರವನ್ನು ಆಧುನೀಕರಣಗೊಳಿಸುವ ಅಗತ್ಯವಿದೆ ಎಂದು ಅವರು ತಿಳಿಸಿದ್ದಾರೆ.
ಕೃಷಿ ಕ್ಷೇತ್ರದಲ್ಲಿನ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳುವ ಮೂಲಕ ಉದ್ಯೋಗವಕಾಶ ಹೆಚ್ಚಿಸಿಕೊಳ್ಳಲು ಆದ್ಯತೆ ನೀಡಬೇಕಾಗಿದೆ ಎಲ್ಲರೂ ಈ ನಿಟ್ಟಿನಲ್ಲಿ ಚಿಂತಿಸುವ ಅಗತ್ಯವಿದೆ ಎಂದು ಹೇಳಿದ್ದಾರೆ.
ಕೊರೊನಾ ಸೋಂಕು ತಡೆಗೆ ಕಳೆದ ವರ್ಷ ಮಾರ್ಚ್ ನಲ್ಲಿ ದೇಶದಲ್ಲಿ ಜನರು ನಡೆಸಿದ ಜನತಾ ಕರ್ಪ್ಯೂ ಇಡೀ ಜಗತ್ತಿಗೆ ಮಾದರಿಯಾಗಿದೆ ಹೇಳಿದ್ದಾರೆ.
ಸೋಂಕು ವಿರುದ್ಧದ ಹೋರಾಟದಲ್ಲಿ ಜನರು ಹೋರಾಡುವುದು ಮತ್ತು ಶಿಸ್ತು ಪ್ರದರ್ಶನ ಮಾಡುವುದಕ್ಕೆ ಜನತಾ ಕರ್ಪ್ಯೂ ತಾಜಾ ನಿದರ್ಶನ ಎಂದು ಅವರು ತಿಳಿಸಿದ್ದಾರೆ.
ದೇಶದಲ್ಲಿ ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಜನರು ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಜೊತೆಗೆ ಸೋಂಕು ತಡೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.
2020 ರ ಮಾರ್ಚ್ 22 ರಂದು ಬೆಳಿಗ್ಗೆ 7ಗಂಟೆಯಿಂದ ರಾತ್ರಿ 9 ಗಂಟೆ ತನಕ ದೇಶದ ಜನರು ಸ್ವಯಂಪ್ರೇರಿತವಾಗಿ ಜನತಾ ಕರ್ಪ್ಯೂ ಆಚರಿಸಿದ್ದರು ಇದು ಜಗತ್ತಿನ ಎಲ್ಲೆಡೆ ಮಾದರಿಯಾಗಿದೆ ಎಂದು ಅವರು ಹೇಳಿದ್ದಾರೆ.
ಮಾರ್ಚ್ 24 ರಿಂದ ಮೇ 18 ರ ತನಕ ದೇಶಾದ್ಯಂತ ಲಾಕ್ಡೌನ್ ಮಾಡಲು ಜನತಾ ಕರ್ಫ್ಯೂ ಸಹಕಾರಿಯಾಯಿತು ಎಂದು ಅವರು ತಿಳಿಸಿದ್ದಾರೆ.
ಕೊರೋನಾ ಸೋಂಕಿಗೆ ಲಸಿಕೆ ಹಾಕುವ ವಿಶ್ವದ ಅತಿ ದೊಡ್ಡ ಅಭಿಯಾನ ಭಾರತದಲ್ಲಿ ಪ್ರಗತಿಯಲ್ಲಿದೆ. ಉತ್ತರಪ್ರದೇಶದ ಜೈಪುರ್ ನಲ್ಲಿ 09 ವರ್ಷದ ಮಹಿಳೆ ಲಸಿಕೆ ಪಡೆದಿದ್ದಾರೆ ಅದೇ ರೀತಿ ದೆಹಲಿಯಲ್ಲಿ 37 ವರ್ಷದ ವ್ಯಕ್ತಿ ಲಸಿಕೆ ಪಡೆದಿದ್ದಾರೆ ಇದೇ ರೀತಿ ದೇಶದ ಜನರು ಲಸಿಕೆ ಪಡೆಯುವ ಮೂಲಕ ಕೊರೋನಾ ಸೋಂಕು ದೂರ ಮಾಡಲು ಶ್ರಮಿಸಬೇಕು ಎಂದು ಅವರು ಹೇಳಿದ್ದಾರೆ.

ಜೇನು ಕೃಷಿ:

ದೇಶದ ಅನೇಕ ಭಾಗಗಳಲ್ಲಿ ರೈತರು ಜೇನು ಕೃಷಿ ನಡೆಸುವ ಮೂಲಕ ತಮ್ಮ ಆದಾಯ ಹೆಚ್ಚಳ ಮಾಡುವ ಕಡೆಗೆ ಗಮನಹರಿಸಿದ್ದಾರೆ. ಅದರಲ್ಲಿ ಡಾರ್ಜಿಲಿಂಗ್ ಸೇರಿದಂತೆ ಅನೇಕ ಭಾಗಗಳಲ್ಲಿ ಆತ್ಮ ನಿರ್ಭರ ಭಾರತ ಯೋಜನೆಯಡಿ ಜೇನು ಕೃಷಿ ನಡೆಸಿ ತಮ್ಮ ಆದಾಯ ವೃದ್ಧಿಸಿಕೊಳ್ಳಲು ದ್ದಾರೆ ಎಂದು ಅವರು ತಿಳಿಸಿದ್ದಾರೆ ತಮಿಳುನಾಡಿನ ಕೊಯಮತ್ತೂರಿನ ಬಸ್ ಕಂಡಕ್ಟರ್ ಮಾರಿಮುತ್ತು ಯೋಗನಾಥನ್ ಅವರು ಉಚಿತವಾಗಿ ಪ್ರಯಾಣಿಕರಿಗಡ ಸಸಿಗಳನ್ನು ವಿತರಿಸುವ ಮೂಲಕ ಪರಿಸರ ಕಾಳಜಿ ವ್ಯಕ್ತಪಡಿಸುತ್ತಿರುವುದು ಶ್ಲಾಘನೀಯ ಎಂದು ಅವರು ಹೇಳಿದ್ದಾರೆ.