News

ಮಾಧ್ಯಮಿಕ ಹಂತದಲ್ಲಿ ಕೃಷಿ ಪಠ್ಯ ಸೇರಿಸಲು ಪ್ರಯತ್ನ-ನರೇಂದ್ರ ಮೋದಿ

30 August, 2020 2:15 PM IST By:

ಕೃಷಿ ಬೆನ್ನೆಲುಬಾಗಿರುವ ದೇಶದಲ್ಲಿ ಇನ್ನೂ ಮುಂದೆ ಕೃಷಿಗೆ ಮತ್ತಷ್ಟೂ ಆದ್ಯತೆ ನೀಡಲು ಸರ್ಕಾರ ತೀರ್ಮಾನಿಸಿದ್ದು, ಕೃಷಿಗೆ ಸಂಬಂಧಿಸಿದ ಶಿಕ್ಷಣವನ್ನು ಮಾಧ್ಯಮಿಕ ಹಂತದಲ್ಲಿಯೇ ಕೃಷಿಯನ್ನು ಪಠ್ಯವಾಗಿ ಕಲಿಸಲು ಪ್ರಯತ್ನ ನಡೆಯುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಅವರು ಉತ್ತರಪ್ರದೇಶದ ಝಾನ್ಸಿ ರಾಣಿ ಲಕ್ಷ್ಮೀಬಾಯಿ ಕೇಂದ್ರೀಯ ಕೃಷಿ ವಿಶ್ವವಿದ್ಯಾಲಯದ ಆಡಳಿತ ಕಟ್ಟಡವನ್ನು ವೀಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿ ಮಾತನಾಡಿದರು.

ಕೃಷಿಗೆ ಸಂಬಂಧಿಸಿದ ಜ್ಞಾನ ಮತ್ತು ಅದರ ಪ್ರಾಯೋಗಿಕ ಅಳವಡಿಕೆಯನ್ನು ಶಾಲಾ ಮಟ್ಟಕ್ಕೆ ಕೊಂಡೊಯ್ಯುವ ಅವಶ್ಯಕತೆಯಿದೆ. ನಾವು ಸಂಶೋಧನೆಯನ್ನು ಕೃಷಿಯೊಂದಿಗೆ ಜೋಡಿಸಲು ಪ್ರಯತ್ನಿಸುತ್ತಿದ್ದೇವೆ. ಈ ಉದ್ದೇಶ ಸಾಧನೆಯಲ್ಲಿ ವಿ.ವಿ.ಗಳು, ಯುವ ಸಂಶೋಧಕರು ಮತ್ತು ವಿದ್ಯಾರ್ಥಿಗಳು ಮಹತ್ವದ ಪಾತ್ರ ವಹಿಸಬಹುದು. ಇದಕ್ಕೆ ಪೂರಕವಾಗಿ ಹಳ್ಳಿಗಳಲ್ಲಿ ಮಾಧ್ಯಮಿಕ ಶಾಲಾ ಮಟ್ಟದಲ್ಲಿ ಕೃಷಿ ವಿಷಯವನ್ನು ಪರಿಚಯಿಸುವ ಪ್ರಯತ್ನಗಳು ನಡೆದಿವೆ. ಮಾಧ್ಯಮಿಕ ಶಾಲಾ ಹಂತದಲ್ಲೇ ಕೃಷಿಯನ್ನು ಒಂದು ವಿಷಯವನ್ನಾಗಿ ಕಲಿಸಿದರೆ ಕೃಷಿಯಲ್ಲಿ ಇನ್ನೂ ಹೆಚ್ಚು ಬದಲಾವಣೆ ತರಬಹುದು. ಶಾಲಾ ಹಂತದಲ್ಲಿಯೇ ಕೃಷಿ ಶಿಕ್ಷಣ ನೀಡುವುದರಿಂದ ಗ್ರಾಮ ಭಾರತದ ಸಬಲೀಕರಣ ಸಾಧ್ಯವಾಗುತ್ತದೆ. ಕೃಷಿ ತಂತ್ರಜ್ಞಾನ ಮತ್ತು ಮಾರುಕಟ್ಟೆ ವ್ಯವಸ್ಥೆ ಬಗ್ಗೆ ವಿದ್ಯಾರ್ಥಿಗಳಲ್ಲಿ ತಿಳಿವಳಿಕೆ ಮೂಡುತ್ತದೆ. ಇದರಿಂದಾಗಿ ಕೃಷಿ ಉದ್ಯಮಶೀಲತೆ ಅಭಿವೃದ್ಧಿ ಹೊಂದುತ್ತದೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಕೃಷಿ ಕುರಿತು ಈಗಾಗಲೇ ತಿಳಿದಿರುವುದಕ್ಕಿಂತ ಹೆಚ್ಚಿನ ಮಾಹಿತಿ ಸಿಕ್ಕಂತಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.