News

PM Narendra Modi : ಪ್ರಧಾನಿ ನರೇಂದ್ರ ಮೋದಿ ಅವರಿಗೆ ಲೋಕಮಾನ್ಯ ತಿಲಕ್‌ ಪ್ರಶಸ್ತಿ ಪ್ರಧಾನ

01 August, 2023 4:49 PM IST By: Kalmesh T
PM Narendra modi receives prestigious lokmanya tilak award today

ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಮಹಾರಾಷ್ಟ್ರದ ಪುಣೆಗೆ ಭೇಟಿ ನೀಡಿದ್ದು, ದಗ್ದುಶೇತ್ ಮಂದಿರದಲ್ಲಿ ವಿಶೇಷ ಪೂಜಾ ಕೈಕರ್ಯದಲ್ಲಿ ಪಾಲ್ಗೊಂಡಿದ್ದರು. ನಂತರ ನಡೆದ ಸಮಾರಂಭದಲ್ಲಿ ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪ್ರಶಸ್ತಿಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಸ್ವಿಕರಿಸಿದರು.

ಮಹಾರಾಷ್ಟ್ರದ ರಾಜ್ಯಪಾಲ ರಮೇಶ್ ಬಯಾಸ್, ಮುಖ್ಯಮಂತ್ರಿ ಏಕನಾಥ್ ಶಿಂಧೆ, ಉಪಮುಖ್ಯಮಂತ್ರಿ ದೇವೇಂದ್ರ ಪಡ್ನವೀಸ್, ಎನ್‌ಸಿಪಿ ಮುಖಂಡ ಶರದ್ ಪವಾರ್ ಸೇರಿದಂತೆ ಪ್ರತಿಷ್ಠಾನದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಬಳಿಕ ಮಧ್ಯಾಹ್ನ ಪ್ರಧಾನಮಂತ್ರಿ ಮೆಟ್ರೋ ರೈಲುಗಳಿಗೆ ಹಸಿರು ನಿಶಾನೆ ತೋರಲಿದ್ದಾರೆ ಮತ್ತು ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಪುಣೆ ಮೆಟ್ರೋ ಒಂದನೇ ಹಂತದ ಎರಡು ಕಾರಿಡಾರ್‌ಗಳ ಪೂರ್ಣಗೊಂಡ ಮಾರ್ಗಗಳ ಉದ್ಘಾಟನೆಯ ಭಾಗವಾಗಿ ಪ್ರಧಾನ ಮಂತ್ರಿ ಮೆಟ್ರೋ ರೈಲುಗಳ ಸಂಚಾರಕ್ಕೆ ಹಸಿರು ನಿಶಾನೆ ತೋರಲಿದ್ದಾರೆ.

ಈ ಮಾರ್ಗಗಳು ಫುಗೆವಾಡಿ ನಿಲ್ದಾಣದಿಂದ ಸಿವಿಲ್ ಕೋರ್ಟ್ ನಿಲ್ದಾಣದವರೆಗೆ ಮತ್ತು ಗಾರ್ವೇರ್ ಕಾಲೇಜು ನಿಲ್ದಾಣದಿಂದ ರೂಬಿ ಹಾಲ್ ಕ್ಲಿನಿಕ್ ನಿಲ್ದಾಣದವರೆಗೆ ಇವೆ. ೨೦೧೬ರಲ್ಲಿ ಪ್ರಧಾನಮಂತ್ರಿ ಅವರು ಈ ಯೋಜನೆಯ ಶಂಕುಸ್ಥಾಪನೆಯನ್ನು ನೆರವೇರಿಸಿದ್ದರು.

ದೇಶದಾದ್ಯಂತ ಆಧುನಿಕ ಮತ್ತು ಪರಿಸರ ಸ್ನೇಹಿ ಸಾಮೂಹಿಕ ಕ್ಷಿಪ್ರ ನಗರ ಸಾರಿಗೆ ವ್ಯವಸ್ಥೆಯನ್ನು ನಾಗರಿಕರಿಗೆ ಒದಗಿಸುವ ಪ್ರಧಾನಮಂತ್ರಿಯವರ ದೂರದೃಷ್ಟಿ ಸಾಕಾರಗೊಳಿಸುವ ನಿಟ್ಟಿನಲ್ಲಿ ಈ ಮೆಟ್ರೋ ರೈಲು ಸಂಚಾರ ಉದ್ಘಾಟನೆಯು ಒಂದು ಪ್ರಮುಖ ಹೆಜ್ಜೆಯಾಗಿದೆ.

ಛತ್ರಪತಿ ಶಿವಾಜಿ ಮಹಾರಾಜರಿಂದ ಸ್ಫೂರ್ತಿ ಪಡೆದು ಮಾರ್ಗದಲ್ಲಿನ ಕೆಲವು ಮೆಟ್ರೋ ನಿಲ್ದಾಣಗಳ ವಿನ್ಯಾಸಗೊಳಿಸಲಾಗಿದೆ. ಅಲ್ಲದೆ, ಪ್ರಧಾನಿ ಪಿಂಪ್ರಿ ಚಿಂಚ್‌ವಾಡ್ ಮಹಾನಗರ ಪಾಲಿಕೆ ವತಿಯಿಂದ ನಿರ್ಮಿಸಿರುವ ತ್ಯಾಜ್ಯದಿಂದ ಇಂಧನ ಉತ್ಪಾದಿಸುವ ಘಟಕವನ್ನು ಉದ್ಘಾಟಿಸಲಿದ್ದಾರೆ.

ಲೋಕಮಾನ್ಯ ತಿಲಕರ ಪರಂಪರೆ ಗೌರವಿಸಲು ತಿಲಕ್ ಸ್ಮಾರಕ ಮಂದಿರ ಟ್ರಸ್ಟ್ ೧೯೮೩ರಲ್ಲಿ ಪ್ರಶಸ್ತಿಯನ್ನು ಸ್ಥಾಪಿಸಿದೆ. ರಾಷ್ಟ್ರದ ಪ್ರಗತಿ ಮತ್ತು ಅಭಿವೃದ್ಧಿಗಾಗಿ ದುಡಿದ ಜನರಿಗೆ ಅವರ ಕೊಡುಗೆಯನ್ನು ಗಮನಾರ್ಹ ಮತ್ತು ಅಸಾಧಾರಣವೆಂದು ಪರಿಗಣಿಸಿ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ.

ಇದನ್ನು ಪ್ರತಿ ವರ್ಷ ಆಗಸ್ಟ್ ೧ ರಂದು ಲೋಕಮಾನ್ಯ ತಿಲಕರ ಪುಣ್ಯತಿಥಿಯಂದು ಪ್ರದಾನ ಮಾಡಲಾಗುವುದು. ಲೋಕಮಾನ್ಯ ತಿಲಕ್ ಅವರ ೧೩೦ನೇ ಪುಣ್ಯತಿಥಿ ಅಂಗವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ. ಇದೇ ಸಂದರ್ಭದಲ್ಲಿ ತಿಲಕ್ ಪ್ರತಿಷ್ಠಾನ ಕೊಡಮಾಡಲ್ಪಡುವ ಪ್ರತಿಷ್ಠಿತ ರಾಷ್ಟ್ರೀಯ ಲೋಕಮಾನ್ಯ ತಿಲಕ್ ಪ್ರಶಸ್ತಿಯನ್ನು ಸ್ವೀಕರಿಸುವುದಾಗಿ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ದೇಶಭಕ್ತ ಲೋಕಮಾನ್ಯ ತಿಲಕ್ ಅವರ ಕೊಡುಗೆ ಅನನ್ಯ ಅವರ ಹೋರಾಟ ಸ್ವಾತಂತ್ರ್ಯ ಚಳುವಳಿಗೆ ಸ್ಫೂರ್ತಿ ನೀಡಿದ ಮಹಾನ್ ಚೇತನ ಎಂದು ಸಂದೇಶದಲ್ಲಿ ಉಲ್ಲೇಖಿಸಿದ್ದಾರೆ.