Pradhan Mantri Awas Yojana: ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸುವುದು ಹೇಗೆ ಎಂಬುದನ್ನು ಈ ಲೇಖನದಲ್ಲಿ ಹಂತಹಂತವಾಗಿ ವಿವರಿಸಲಾಗಿದೆ.
ಪ್ರಧಾನ ಮಂತ್ರಿ ಆವಾಸ್ ಯೋಜನೆಯು (PMAY) ಭಾರತ ಸರ್ಕಾರವು ಪ್ರಾರಂಭಿಸಿದ ವಸತಿ ಯೋಜನೆಯಾಗಿದೆ. ಇದನ್ನು 25ನೇ ಜೂನ್ 2015ರಂದು ಪ್ರಾರಂಭಿಸಲಾಗಿದೆ. ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳು (UTs) ಮತ್ತು ಕೇಂದ್ರೀಯ ನೋಡಲ್ ಏಜೆನ್ಸಿಗಳ (CNAs) ಮೂಲಕ ಎಲ್ಲ ಅರ್ಹ ಕುಟುಂಬಗಳು/ಫಲಾನುಭವಿಗಳಿಗೆ ಸುಮಾರು 1.12 ಕೋಟಿ ಮನೆಗಳ ವ್ಯಾಲಿಡೇಟ್ ಬೇಡಿಕೆ ವಿರುದ್ಧ ಮನೆಗಳನ್ನು ಒದಗಿಸಲು ಮಿಷನ್ ಅನುಷ್ಠಾನ ಸಂಸ್ಥೆಗಳಿಗೆ ಕೇಂದ್ರ ಸರ್ಕಾರವು ಸಹಾಯವನ್ನು ಒದಗಿಸುತ್ತದೆ.
PM ಕಿಸಾನ್ ರೈತರಿಗೆ ಬಿಗ್ ನ್ಯೂಸ್: OTP ಮೂಲಕ ಆಧಾರ್ ಕಾರ್ಡ್ e-KYC ರದ್ದು..
Big Announce! ರೈತರ income ಹೆಚ್ಚಿಸಲು 100 ಕೋಟಿ ಮೀಸಲು CM ಬೊಮ್ಮಾಯಿ ಅವರಿಂದ Big GIft, ಬಜೆಟ್‌ನಲ್ಲಿ ಘೋಷಣೆ
ಆರ್ಥಿಕವಾಗಿ ದುರ್ಬಲ ವರ್ಗಗಳು, ನಗರ ಪ್ರದೇಶದ ಕಡಿಮೆ-ಆದಾಯದ ಗುಂಪುಗಳು ಮತ್ತು ಗ್ರಾಮೀಣ ಬಡವರ ಅನುಕೂಲಕ್ಕಾಗಿ ಈ ಯೋಜನೆಯಿದೆ. ಈ ಹಿಂದಿನ ಯೋಜನೆಗಳಿಗಿಂತ ಭಿನ್ನ ಎಂಬಂತೆ ಆರ್ಥಿಕ ದುರ್ಬಲ ವರ್ಗದವರು (EWS) ಮತ್ತು ಕಡಿಮೆ ಆದಾಯದ ಗುಂಪಿನಿಂದ (LIG) ಮಹಿಳೆಯರ ಸಬಲೀಕರಣದ ಕಡೆಗೆ ಸರ್ಕಾರದ ಪ್ರಯತ್ನಗಳ ಮುಂದುವರಿಕೆಯಾಗಿ, PMAY (U) ಈ ಮಿಷನ್ ಅಡಿಯಲ್ಲಿ ಕುಟುಂಬದ ಮಹಿಳಾ ಮುಖ್ಯಸ್ಥರು ಮನೆಯ ಮಾಲೀಕರು ಅಥವಾ ಸಹ-ಮಾಲೀಕರಾಗಿರಬೇಕು ಎಂಬ ಕಡ್ಡಾಯವಾದ ನಿಬಂಧನೆ ಮಾಡಿದೆ.
ಇದು ಆರ್ಥಿಕವಾಗಿ ದುರ್ಬಲ, ಕಡಿಮೆ-ಆದಾಯದ ಮತ್ತು ಮಧ್ಯಮ-ಆದಾಯದ ಗುಂಪುಗಳಿಗೆ ಸೇರಿದ ಅರ್ಹ ಅಭ್ಯರ್ಥಿಗಳಿಗೆ ವಸತಿ ಸಾಲಗಳ ಮೇಲಿನ ಬಡ್ಡಿ ಸಬ್ಸಿಡಿಗಳನ್ನು ಸಹ ನೀಡುತ್ತದೆ. ಅಂದಹಾಗೆ ಈ ಕಾರ್ಯಕ್ರಮವನ್ನು ಕ್ರಮವಾಗಿ ನಗರ ಮತ್ತು ಗ್ರಾಮೀಣ ಜನರಿಗೆ ಅನುಕೂಲವಾಗುವ ಪಿಎಂಎವೈ ನಗರ (PMAY – U) ಮತ್ತು ಪಿಎಂಎವೈ ಗ್ರಾಮೀಣ (PMAY – G) ಎಂದು ಎರಡು ವಿಭಾಗಗಳಾಗಿ ವಿಂಗಡಿಸಲಾಗಿದೆ.
EPFO Big Update! ಯಾವ ದಿನ ಬರಲಿದೆ! Balance ಹಣ?
7th Pay commission! Indian Railways Employees! ಒಳ್ಳೆಯ ಸುದ್ದಿ!
ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳು ಹೀಗಿವೆ:
ಗುರುತಿನ ಪುರಾವೆ (ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್, ಮತದಾರರ ಗುರುತಿನ ಚೀಟಿ)
ವಿಳಾಸದ ಪುರಾವೆ
ಆದಾಯದ ಪುರಾವೆ (ಫಾರ್ಮ್ 16, ಬ್ಯಾಂಕ್ ಖಾತೆ ಹೇಳಿಕೆ, ಇತ್ತೀಚಿನ ಐಟಿ ರಿಟರ್ನ್ಸ್)
ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಪ್ರಮುಖ ವಿಭಾಗಗಳು:
ಪ್ರಧಾನ ಮಂತ್ರಿ ಆವಾಸ್ ಯೋಜನೆಯಲ್ಲಿ ನಾಲ್ಕು ವಿಭಾಗಗಳಿವೆ.
ಆರ್ಥಿಕವಾಗಿ ದುರ್ಬಲ ವಿಭಾಗ (EWS): ಕುಟುಂಬದ ವಾರ್ಷಿಕ ಆದಾಯ ರೂ. 3 ಲಕ್ಷಕ್ಕಿಂತ ಹೆಚ್ಚಿರಬಾರದು.
ಕಡಿಮೆ ಆದಾಯದ ಗುಂಪು (LIG): ಕುಟುಂಬದ ವಾರ್ಷಿಕ ಆದಾಯ ರೂ. 3 ಲಕ್ಷದಿಂದ ರೂ. 6 ಲಕ್ಷ.
ಮಧ್ಯಮ ಆದಾಯ ಗುಂಪು (MIGs): ಕುಟುಂಬದ ವಾರ್ಷಿಕ ಆದಾಯ ರೂ. 6 ಲಕ್ಷದಿಂದ ರೂ. 18 ಲಕ್ಷ.
ಕೊಳೆಗೇರಿ ನಿವಾಸಿಗಳು: ಕೊಳೆಗೇರಿ ಪ್ರದೇಶಗಳಲ್ಲಿ ವಾಸಿಸುವ ಜನರು.
ಗುಡ್ ನ್ಯೂಸ್: ಹೈನುಗಾರರಿಗೆ ಕ್ರೆಡಿಟ್ ಕಾರ್ಡ್! ದೇಶದಲ್ಲೆ ಮೊದಲು
ನಿಮ್ಮ ದನ-ಕರುಗಳಿಗೆ ಚರ್ಮ ರೋಗ ಇದೆಯೇ?
ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವುದು ಹೇಗೆ?:
ಹಂತ 1: ನೀವು PMAYಗೆ ಅರ್ಹತೆ ಪಡೆದ ವರ್ಗವನ್ನು ಗುರುತಿಸಿ.
ಹಂತ 2: ಆ ನಂತರ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ: http://pmaymis.gov.in.
ಹಂತ 3: ಮುಖ್ಯ ಮೆನುವಿನಲ್ಲಿ ‘Citizen Assessment’ ಕ್ಲಿಕ್ ಮಾಡಿ ಮತ್ತು ಅರ್ಜಿದಾರರ ವರ್ಗವನ್ನು ಆಯ್ಕೆ ಮಾಡಿ.
ಹಂತ 4: ನಿಮ್ಮನ್ನು ಬೇರೆ ಪುಟಕ್ಕೆ ಮರು ನಿರ್ದೇಶಿಸಲಾಗುತ್ತದೆ, ಅಲ್ಲಿ ನಿಮ್ಮ ಆಧಾರ್ ವಿವರಗಳನ್ನು ನಮೂದಿಸಬೇಕು.
ಹಂತ 5: ನಿಮ್ಮ ವೈಯಕ್ತಿಕ, ಆದಾಯ, ಬ್ಯಾಂಕ್ ಖಾತೆ ವಿವರಗಳು ಮತ್ತು ಪ್ರಸ್ತುತ ವಸತಿ ವಿಳಾಸದೊಂದಿಗೆ ಆನ್‌ಲೈನ್ PMAY ಅರ್ಜಿಯನ್ನು ಭರ್ತಿ ಮಾಡಿ.
ಹಂತ 6: ಕ್ಯಾಪ್ಚಾ ಕೋಡ್ ಅನ್ನು ನಮೂದಿಸಿ, ನಿಖರತೆಗಾಗಿ ವಿವರಗಳನ್ನು ಪರಿಶೀಲಿಸಿ ಮತ್ತು ಅದನ್ನು ಸಲ್ಲಿಸಿ.
ಇನ್ಮುಂದೆ Aadhaar-Pan Link ಫ್ರೀ ಇಲ್ಲ..ಸ್ವಲ್ಪ ಯಾಮಾರಿದ್ರೆ 1 ಸಾವಿರ Fine..!
ಈ ಸ್ಮಾರ್ಟ್‌ಫೋನ್‌ಗಳಲ್ಲಿ ಇನ್ಮುಂದೆ Whatsapp ಕಾರ್ಯನಿರ್ವ ಹಿಸಲ್ಲ..! ಕಾರಣವೇನು.
ಪ್ರಧಾನ ಮಂತ್ರಿ ಆವಾಸ್ ಯೋಜನಾ ಆಫ್‌ಲೈನ್‌ಗೆ ಅರ್ಜಿ ಸಲ್ಲಿಸುವುದು ಹೇಗೆ?:
ರಾಜ್ಯ ಸರ್ಕಾರಗಳು ನಿರ್ವಹಿಸುವ ಸಾಮಾನ್ಯ ಸೇವಾ ಕೇಂದ್ರದಲ್ಲಿ (CSC) ಫಾರ್ಮ್ ಅನ್ನು ಭರ್ತಿ ಮಾಡುವ ಮೂಲಕ ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಸಾಧ್ಯವಿದೆ. ಆಫ್‌ಲೈನ್ ಫಾರ್ಮ್‌ಗಳನ್ನು ರೂ. 25 ಜತೆಗೆ ಜಿಎಸ್ಟಿ ಜತೆ ಭರ್ತಿ ಮಾಡಬಹುದು.
6% ಬಡ್ಡಿ ದರದಲ್ಲಿ ಸ್ವಯಂ ಉದ್ಯೋಗಕ್ಕೆ ಸಾಲ ಪಡೆಯುವುದು ಹೇಗೆ..? ಯಾರು ಅರ್ಹರು..?