News

PM Kisan Samman 14 ನೇ ಕಂತು: ಈ ಪ್ರಕ್ರಿಯೆ ಪೂರ್ಣಗೊಳಿಸಿದವ್ರಿಗಷ್ಟೆ!

15 March, 2023 2:58 PM IST By: Maltesh
P.M.Kisas Yojana : Register name without fail in e-KYC

ಮಡಿಕೇರಿ: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ರೈತರ ಆದಾಯ ವೃದ್ಧಿಸಲು ಜಿಲ್ಲೆಯ ಎಲ್ಲಾ ರೈತ ಕುಟುಂಬಗಳಿಗೆ ಪ್ರತಿ ವರ್ಷ 6 ಸಾವಿರ ರೂ. ವನ್ನು ಒಟ್ಟು 3 ಸಮಾನ ಕಂತುಗಳಲ್ಲಿ ರೈತರ ಖಾತೆಗೆ ಜಮೆ ಮಾಡಲಾಗುತ್ತಿದೆ.

ಜಿಲ್ಲೆಯ ಸುಮಾರು 49,582 ರೈತರು ನೋಂದಣಿಯಾಗಿದ್ದು, ಈಗಾಗಲೇ ನೇರ ಆರ್ಥಿಕ ನೆರವು ವರ್ಗಾವಣೆ ಚಾಲ್ತಿಯಲ್ಲಿದೆ. ಈ ಯೋಜನೆಯ ನೆರವು ಆರ್ಹ ಫಲಾನುಭವಿಗಳಿಗೆ ದೊರಕುತ್ತಿರುವುದನ್ನು ಖಾತ್ರಿ ಪಡಿಸಿಕೊಳ್ಳಲು ಇ-ಕೆವೈಸಿ ಮಾಡುವುದು ಅತ್ಯಂತ ಅವಶ್ಯಕವಾಗಿದೆ. ಇ ಕೆವೈಸಿ ಮಾಡಿಕೊಂಡ ರೈತರಿಗೆ ಮಾತ್ರ ಮುಂದಿನ ಕಂತು ಬಿಡುಗಡೆ ಮಾಡಲಾಗುವುದು.

 ಪಿಎಂ ಕಿಸಾನ್‌ ಪೋರ್ಟ್‌ಲ್‌ನ ಅಡಿಯಲ್ಲಿ (ಈಗಾಗಲೇ ಪಿಎಂಕಿಸಾನ್ ಯೋಜನೆಯಡಿ ಫಲಾನುಭವಿಗಳಾಗಿರುವ ಪ್ರತಿಯೊಬ್ಬ) ಆಧಾರ್ ಸಂಖ್ಯೆಯನ್ನು ನಂತರ ಆಧಾರ್ ಸಂಖ್ಯೆಯೊಂದಿಗೆ ನೋಂದಣಿಯಾಗಿರುವ ಮೊಬೈಲ್ ಸಂಖ್ಯೆಯನ್ನು ದಾಖಲಿಸಬೇಕು. ನಂತರ ಮೊಬೈಲ್ ಗೆ OTP ಯು ರವಾನೆಯಾಗುತ್ತದೆ.

ಹೀಗೆ ಸ್ವೀಕರಿಸಿದ OTP ಯನ್ನು ಪೋರ್ಟಲ್‍ನಲ್ಲಿ  ದಾಖಲಿಸಿ ಬ ಬಟನ್ ಒತ್ತಬೇಕು. ಆಗ ತಂತ್ರಾಂಶ ಆಧಾರಿತ ಪರಿಶೀಲನೆ ನಡೆದು ಇ-ಕೆವೈಸಿ   ಸಲ್ಲಿಕೆ ಎಂಬ ವಾಕ್ಯವು ಗೋಚರಿಸುತ್ತದೆ. ಹೀಗೆ ಮೊಬೈಲ್ ಒಟಿಪಿ ಆಧಾರಿತವಾಗಿ ಫಲಾನುಭವಿಯು ಖುದ್ದಾಗಿ ಇಕೆವೈಸಿ ಮಾಡಬಹುದಾಗಿದೆ.

ಪಿಎಂ-ಕಿಸಾನ್ ಯೋಜನೆ ಬಿಗ್‌ ಅಪ್‌ಡೇಟ್‌ : ಫಲಾನುಭವಿಗಳು ಗಮನಿಸಲೇಬೇಕಾದ ಮಹತ್ವದ ಮಾಹಿತಿ

ಯಾವ ಫಲಾನುಭವಿಯ ಮೊಬೈಲ್ ಸಂಖ್ಯೆ ಆಧಾರ್ ಸಂಖ್ಯೆಯೊಂದಿಗೆ ಜೋಡಣೆಯಾಗಿರುವುದಿಲ್ಲವೋ ಅಥವಾ ಯಾರ ಮೊಬೈಲ್ ಸಂಖ್ಯೆಗೆ ಇ-ಕೆವೈಸಿ   ಗಾಗಿ ಕಳುಹಿಸಿದ OTP ಸ್ವೀಕೃತವಾಗುವುದಿಲ್ಲವೋ ಅವರು CSC (ನಾಗರಿಕ ಸೇವಾ ಕೇಂದ್ರಗಳಿಗೆ) ತೆರಳಿ ಅಲ್ಲಿ ಬಯೋಮೆಟ್ರಿಕ್ ಆಧಾರಿತವಾಗಿ ಇ-ಕೆವೈಸಿ  ಮಾಡಬಹುದಾಗಿದೆ. ಅಲ್ಲಿ ಕೈಬೆರಳಿನ ಗುರುತು ಆಧಾರದ ಮೇಲೆ ಇ-ಕೆವೈಸಿ   ಮಾಡಬಹುದಾಗಿದೆ.

ವಿಶೇಷ ಸೂಚನೆ: ಈ ಯೋಜನೆಯ ಪ್ರತಿ ಫಲಾನುಭವಿ ರೈತರು, ಕೇಂದ್ರ ಸರ್ಕಾರವು ಮುಂದಿನ ಕಂತಿನಲ್ಲಿ ನೀಡುವ ಆರ್ಥಿಕ ನೆರವು ಪಡೆಯಲು ಮಾರ್ಚ್ 21 ರೊಳಗೆ e- ಇ-ಕೆವೈಸಿ   ಮಾಡಿಸುವುದು ಕಡ್ಡಾಯವಾಗಿದೆ. ಹೆಚ್ಚಿನ ಮಾಹಿತಿಗೆ ರೈತರು ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ನಾಗರಿಕ ಸೇವಾ  ಕೇಂದ್ರ / ಗ್ರಾಮ ಮಟ್ಟದ ಗ್ರಾಮ ಒನ್ ಕೇಂದ್ರಗಳನ್ನು ಸಂಪರ್ಕಿಸಬಹುದು ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಶಬನಾ ಎಂ.ಶೇಖ್ ಅವರು ತಿಳಿಸಿದ್ದಾರೆ.

Beauty Parlour : ಉಚಿತ ಬ್ಯೂಟಿ ಪಾರ್ಲರ್ ತರಬೇತಿಗೆ ಅರ್ಜಿ ಆಹ್ವಾನ