News

ಆಂಧ್ರಪ್ರದೇಶದಲ್ಲಿ ರಾಜಕೀಯ ಹೈಡ್ರಾಮ: ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಬಂಧನ!

09 September, 2023 5:17 PM IST By: Hitesh
Political hydra in Andhra Pradesh: Former Chief Minister Chandrababu Naidu arrested!

ಆಂಧ್ರಪ್ರದೇಶದಲ್ಲಿ ಶನಿವಾರ ರಾಜಕೀಯ ಹೈಡ್ರಾಮ ಶುರುವಾಗಿದ್ದು, ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು

ಅವರನ್ನು ಶನಿವಾರ ಬಂಧಿಸಲಾಗಿದೆ. ಇದರ ಸಂಪೂರ್ಣ ವಿವರ ಇಲ್ಲಿದೆ.

ನಾಟಕೀಯ ಬೆಳವಣಿಗೆಯಲ್ಲಿ ಆಂಧ್ರಪ್ರದೇಶದ ಸಿಐಡಿ ಪೊಲೀಸ್ ಅಧಿಕಾರಿಗಳು ತೆಲುಗು ದೇಶಂ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ಎನ್‌.

ಚಂದ್ರಬಾಬು ನಾಯ್ಡು ಅವರನ್ನು ಸೆಪ್ಟೆಂಬರ್ 9ರ ಮುಂಜಾನೆ ಐದು ಗಂಟೆಯಲ್ಲಿ ಬಂಧಿಸಿದ್ದಾರೆ.

ಆಂಧ್ರಪ್ರದೇಶದ ಕೌಶಲ್ಯ ಅಭಿವೃದ್ಧಿ ನಿಗಮದಲ್ಲಿನ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ಕ್ರಿಮಿನಲ್ ಪ್ರಕರಣದಲ್ಲಿ ಪೊಲೀಸರು

ಶನಿವಾರ ಬೆಳಿಗ್ಗೆ 5ಕ್ಕೆ  ಚಂದ್ರಬಾಬು ನಾಯ್ಡು ಅವರನ್ನು ನಂದ್ಯಾಲದ ಫಂಕ್ಷನ್ ಹಾಲ್‌ನಲ್ಲಿ ಬಂಧಿಸಿದ್ದಾರೆ.

ಈ ವೇಳೆ ಭಾರೀ ಬಂದೋಬಸ್ತ್‌ ಕಲ್ಪಿಸಲಾಗಿತ್ತು.   

ಇನ್ನು ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ.ಎಸ್‌. ಜಗನ್‌ಮೋಹನ ರೆಡ್ಡಿ ಹಾಗೂ ಚಂದ್ರಬಾಬು ನಾಯ್ಡು

ಅವರ ನಡುವೆ ಮುಸುಕಿನ ಗುಡ್ಡಾಟ ನಿರಂತರವಾಗಿತ್ತು. ಇದೀಗ ಚಂದ್ರಬಾಬು ನಾಯ್ಡು ಅವರ ಬಂಧನದೊಂದಿಗೆ ತಾರಕಕ್ಕೇರಿದೆ. 

ವಿಡಿಯೋ ಸ್ಟೋರಿಗಾಗಿ ಲಿಂಕ್‌ ಕ್ಲಿಕ್‌ ಮಾಡಿ 

ಏನಿದು ಆಂಧ್ರಪ್ರದೇಶ ಕೌಶಲ್ಯಾಭಿವೃದ್ಧಿ ಭ್ರಷ್ಟಾಚಾರ ಪ್ರಕರಣ?

ಆಂಧ್ರಪ್ರದೇಶದಲ್ಲಿ ಟಿಡಿಪಿ ಸರ್ಕಾರದ ಅವಧಿಯಲ್ಲಿ  ಅಂದರೆ 2016ರಲ್ಲಿ ಕೌಶಲ್ಯಾಭಿವೃದ್ಧಿ ಕಾರ್ಪೋರೇಷನ್‌ ರಚನೆ ಮಾಡಲಾಗಿತ್ತು.

ಕೌಶಲ್ಯ ತರಬೇತಿಯನ್ನು ನೀಡುವ ಮೂಲಕ ನಿರುದ್ಯೋಗಿ ಯುವಕರನ್ನು ಸಬಲೀಕರಣಗೊಳಿಸುವುದು ಇದರ ಉದ್ದೇಶವಾಗಿತ್ತು.

ಚಂದ್ರಬಾಬು ನಾಯ್ಡು ವಿರುದ್ಧ ಕೇಳಿಬಂದ ಆರೋಪಗಳೇನು ?

ಕ್ಯಾಬಿನೆಟ್ ಅನುಮೋದನೆಯಿಲ್ಲದೆ ಆಂಧ್ರಪ್ರದೇಶ ಕೌಶಲ್ಯ ಅಭಿವೃದ್ಧಿ ಯೋಜನೆಯನ್ನು ಪ್ರಾರಂಭಿಸಿದ್ದರು ಎನ್ನುವುದು

ಸೇರಿದಂತೆ ಹಲವು ಗಂಭೀರ ಆರೋಪಗಳು ಈ ಪ್ರಕರಣದಲ್ಲಿ ಕೇಳಿಬಂದಿದೆ.

ಅದರಲ್ಲಿ ಯೋಜನೆಗಾಗಿ ಸೀಮೆನ್ಸ್ ಗ್ಲೋಬಲ್ ಕಂಪನಿಯು ನಿಗದಿಪಡಿಸಿದ ಹಣವನ್ನು ಶೆಲ್ ಕಂಪನಿಗಳಿಗೆ ವರ್ಗಾಯಿಸಲಾಗಿತ್ತು.

ಟೆಂಡರ್ ಪಡೆದ ಕಂಪನಿಯ ಕೌಶಲ್ಯ ಅಭಿವೃದ್ಧಿ ಚಟುವಟಿಕೆಗಳಿಗೆ ಹಣ ಖರ್ಚು ಮಾಡಿಲ್ಲ ಎನ್ನುವುದು ಪ್ರಮುಖವಾಗಿದೆ.

ಅಲ್ಲದೇ ಟೆಂಡರ್‌ ಘೋಷಣೆಯಲ್ಲಿ ಅವ್ಯವಹಾರ ಹಾಗೂ 3,300 ಕೋಟಿ ರೂಪಾಯಿ

ಮೊತ್ತದ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪದ ಮೇಲೆ ಸಿಐಡಿ ತನಿಖೆ ನಡೆಸುತ್ತಿದೆ.