ಕೃಷಿ ಯಾಂತ್ರೀಕರಣ ಯೋಜನೆಯಡಿ ರೈತರಿಗೆ ಶೇ.90ರಷ್ಟು ಸಹಾಯಧನ ಸಿಗುತ್ತದೆ. ಕೃಷಿ ಇಲಾಖೆ ಹಾಗೂ ತೋಟಗಾರಿಕೆ ಇಲಾಖೆಯಿಂದ ಲಭ್ಯತೆ ಆಧಾರದ ಮೇಲೆ ಕೃಷಿ. ಯಂತ್ರೋಪಕರಣಗಳನ್ನು ರೈತರಿಗೆ ನೀಡಲಾಗುವುದು.
ರೈತರ ಕೃಷಿ ಚಟುವಟಿಕೆಗೆ ಅನುಕೂಲವಾಗಲೆಂದು ಕೃಷಿ ಯಂತ್ರೋಪಕರಣಗಳಿಗೆ ಪ್ರೋತ್ಸಾಹ ಧನ ನೀಡಲಾಗುತ್ತದೆ. ಕೃಷಿ ಯಂತ್ರೋಪಕರಣಗಳಿಗೆ ಆಯಾ ಯಂತ್ರೋಪಕರಣಗಳಿಗನುಗುಣವಾಗಿ ಶೇ. 60, ಶೇ.50 ಮತ್ತು ಶೇ. 40 ರಷ್ಟು ಸಹಾಯಧನ ನೀಡಲಾಗುವುದು.
PM Kisan 11 ನೇ ಕಂತಿನ ಹಣ ನಿಮ್ಮ ಖಾತೆಗೆ ಇನ್ನೂ ಬಂದಿಲ್ಲವೇ? ಹಾಗಿದ್ದರೆ ಈಗಲೇ ಚೆಕ್ ಮಾಡಿ...
ರೈತರಿಗೆ ಲಾಭದಾಯಕವಾದ ಸರ್ಕಾರದ ಮಹತ್ವದ ಯೋಜನೆಗಳು! ನೀವಿದರ ಪ್ರಯೋಜನ ಪಡೆದುಕೊಂಡಿದ್ದೀರಾ?
ಇದಕ್ಕಾಗಿ ರೈತಬಾಂಧವರು ಹತ್ತಿರದ ರೈತ ಸಂಪರ್ಕ ಕೇಂದ್ರದಲ್ಲಿ ಅರ್ಜಿ ಸಲ್ಲಿಸಿ ಸಬ್ಸಿಡಿಯಲ್ಲಿ ಯಂತ್ರೋಪಕರಣಗಳನ್ನು ಪಡೆಯಬಹುದು.
ಮಿನಿ ಟ್ರ್ಯಾಕ್ಟರ್, ಪವರ್ ಟಿಲ್ಲರ್ , ಟ್ರ್ಯಾಕ್ಟರ್ ಚಾಲಿತ ಎಂ.ಬಿ.ಪ್ಲೋ, ರೋಟೋವೇಟರ್,ರೋಟೋವೇಟರ್,ಡಿಸ್ಕ್ ಫ್ಲೋ, ಡಿಸ್ಕ್ ಹ್ಯಾರೋ ಸೇರಿದಂತೆ ಇನ್ನಿತರ ಕೃಷಿ ಯಂತ್ರೋಪಕರಣಗಳಿಗೆ ಸಹಾಯಧನ ಸಿಗಲಿದೆ.
ರೈತರು ಯಾವ ಕೃಷಿ ಯಂತ್ರೋಪಕರಣಕ್ಕೆ ಅರ್ಜಿ ಸಲ್ಲಿಸ ಬಯಸುತ್ತೀರೋ ಎಂಬುದರ ಕುರಿತು ಅರ್ಜಿ ಸಲ್ಲಿಸಬೇಕು. ಕೆ-ಕಿಸಾನ್ ನಲ್ಲಿ ಆನ್ ಲೈನ್ ನಲ್ಲಿ ನೋಂದಣಿ ಪ್ರತಿ (ಎಫ್ ಐಡಿ ಸಂಖ್ಯೆಯೊಂದಿಗೆ) ರೈತರು ಆಧಾರ್ ಕಾರ್ಡ್ ಹೊಂದಿರಬೇಕು.
ಜಮೀನಿ ಪಹಣಿ ಸೇರಿದಂತೆ ಜಮೀನಿನ ಜಮಾಬಂಧಿ, ಬ್ಯಾಂಕ್ ಖಾತೆ ವಿವರ, ಪಾಸ್ ಪೋರ್ಟ್ ಅಳತೆಯ ಫೋಟೋ ಇರಬೇಕು. ರೈತರ ಬ್ಯಾಂಕ್ ಪಾಸ್ ಬುಕ್ ನಲ್ಲಿ ರೈತರ ವಂತಿಕೆ ಸರಬರಾಜು ಸಂಸ್ಥೆಗೆ ಆರ್.ಟಿ.ಜಿ.ಎಸ್ ಜಮವಾಣೆಯಾದ ಝರಾಕ್ಸ್ ಪ್ರತಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಾಗಿದ್ದರೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಸೇರಿದಂತೆ ಅಗತ್ಯ ದಾಖಲೆಗಳನ್ನು ರೈತ ಸಂಪರ್ಕ ಕೇಂದ್ರ ಕಚೇರಿಯಲ್ಲಿ ವಿಚಾರಿಸಿ ನೀಡಬೇಕು.
ಆತ್ಮಹತ್ಯೆ ಮಾಡಿಕೊಂಡ ರೈತ ಕುಟುಂಬಗಳಿಗೆ ಶೀಘ್ರ ಪರಿಹಾರ ನೀಡುವಂತೆ ಹೈಕೋರ್ಟ್ ಸೂಚನೆ
ಕರ್ನಾಟಕದಲ್ಲಿ ಕೇಜ್ರಿವಾಲ್ ಅಲೆ! ಇಲ್ಲೂ ಸೃಷ್ಟಿಸಲಿದ್ದಾರಾ ಆಮ್ ಆದ್ಮಿ ಪಾರ್ಟಿಯ ನೆಲೆ ?
ಯಾವ ಯಾವ ಉಪಕರಣಗಳು ಸಿಗುತ್ತವೆ?
ಕೃಷಿ ಯಾಂತ್ರೀಕರಣ ಯೋಜನೆಯಡಿಯಲ್ಲಿ ಸಣ್ಣ ಟ್ರ್ಯಾಕ್ಟರ್, ಟಿಲ್ಲರ್, ಟ್ರ್ಯಾಕ್ಟರ್ ಟ್ರ್ಯಾಲಿ, ಕ್ರಾಪ್ ರೀಪರ್, ಪೋಸ್ಟ ಹೋಲ್ ಡಿಗ್ಗರ್, ಪಾವರ್ ವೀಡರ್, ರೈಸ್ ಟ್ರಾನ್ಸ್ ಪ್ಲೆಟರ್, ಕೊಯ್ಲು ಒಕ್ಕಣೆಗಳು, ಅಂತರ ಬೇಸಾಯ ಉಪಕರಣಗಳು ಸೇರಿದಂತೆ ಇನ್ನಿತರ ಉಪಕರಣಗಳು ಸಿಗುತ್ತವೆ.
ಯಾವ ಕೃಷಿ ಯಂತ್ರೋಪಕರಣಕ್ಕೆ ಎಷ್ಟು ಸಹಾಯಧನ?
ಪವರ್ ಟಿಲ್ಲರ್ : ಖರೀದಿಗೆ ಸಾಮಾನ್ಯ ವರ್ಗದವರಿಗೆ ಶೇ. 50 ರಷ್ಟು ಸಹಾಯಧನ ಗರಿಷ್ಠ 72500 ರೂಪಾಯಿವರೆಗೆ ಸಹಾಯಧನ ಸಿಗಲಿದೆ. ಅದೇ ರೀತಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಶೇ. 60ರಷ್ಟು ಸಹಾಯಧನ, ಗರಿಷ್ಠ 1 ಲಕ್ಷ ರೂಪಾಯಿಯವರೆಗೆ ಸಹಾಯಧನ ಸಿಗಲಿದೆ.
ಹೆಚ್ಚಿನ ಮಾಹಿತಿಗಾಗಿ ನಿಮ್ಮ ಹೋಬಳಿಯಲ್ಲಿ ಲಭ್ಯವಿರುವ ಕೃಷಿ ಯಂತ್ರೋಪಕರಣಗಳ ಬಗ್ಗೆ ಮಾಹಿತಿ ಪಡೆಯಲು ರೈತರು ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಬಹುದು. ಲಭ್ಯವಿರುವ ಕೃಷಿ ಯಂತ್ರೋಪಕರಣಗಳನ್ನು ಪಡೆಯಬಹುದು.
“ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ನನ್ನ ಹೆಸರು ಬೇಡ”- ಮಾಜಿ ಸಿಎಂ ಯಡಿಯೂರಪ್ಪ!
ರಸಗೊಬ್ಬರ ಕೊರತೆ ಇಲ್ಲ; 4 ಸಾವಿರ ಮೆಟ್ರಿಕ್ ಟನ್‌ಗೂ ಅಧಿಕ ರಸಗೊಬ್ಬರ ದಾಸ್ತಾನಿಗೆ-ಬಿ.ಸಿ. ಪಾಟೀಲ್