1. ಸುದ್ದಿಗಳು

ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ ಬಿಮಾ ಯೋಜನೆ ಅಧಿಸೂಚಿತ ಮುಖ್ಯ ಬೆಳೆಗಳ ವಿಮೆಯ ವಿವರ ಇಲ್ಲಿದೆ

ಮುಂಗಾರು ಹಂಗಾಮಿನ 2021-22ನೇ ಸಾಲಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯನ್ನು ಅನುಷ್ಠಾನಗೊಳಿಸಲು ಸರ್ಕಾರವು ಆದೇಶ ಹೊರಡಿಸಿದ್ದು, ಈ ಯೋಜನೆಯಡಿ ಮುಖ್ಯ ಬೆಳೆಗಳನ್ನು ಜಿಲ್ಲೆಯ ಎಲ್ಲಾ ತಾಲೂಕುವಾರು, ಗ್ರಾಮ ಪಂಚಾಯಿತಿ ಮಟ್ಟಕ್ಕೆ ಹಾಗೂ ಉಳಿದ ಬೆಳೆಗಳನ್ನು ಹೋಬಳಿ ಮಟ್ಟದಲ್ಲಿ ಅನುಷ್ಠಾನಗೊಳಿಸಲು ಆದೇಶಿಸಲಾಗಿದೆ ಎಂದು ಕಲಬರಗಿ ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

ಕಲಬುರಗಿ ಜಿಲ್ಲೆಗೆ 2021-22ನೇ ಸಾಲಿನ ಮುಂಗಾರು ಹಂಗಾಮಿಗೆ ಈ ಯೋಜನೆ ಅನುಷ್ಠಾನಗೊಳಿಸಲು ಬೆಂಗಳೂರಿನ ಯುನಿವರ್ಸಲ್ ಸೊಂಪೊ ಜನರಲ್ ಇನ್ಸುರೆನ್ಸ್ ಕಂಪನಿ ಲಿ. ವಿಮಾ ಸಂಸ್ಥೆಯನ್ನು ನಿಗದಿಪಡಿಸಲಾಗಿದೆ.

ಮುಸುಕಿನಜೋಳ (ನೀರಾವರಿ), ಮುಸುಕಿನಜೋಳ (ಮಳೆಯಾಶ್ರಿತ), ಜೋಳ (ನೀರಾವರಿ), ಜೋಳ (ಮಳೆಯಾಶ್ರಿತ), ಸಜ್ಜೆ (ಮಳೆಯಾಶ್ರಿತ), ಉದ್ದು (ಮಳೆಯಾಶ್ರಿತ), ತೊಗರಿ (ನೀರಾವರಿ), ತೊಗರಿ (ಮಳೆಯಾಶ್ರಿತ), ಹೆಸರು (ಮಳೆಯಾಶ್ರಿತ), ಸೋಯಾ ಅವರೆ (ಮಳೆಯಾಶ್ರಿತ), ಎಳ್ಳು (ಮಳೆಯಾಶ್ರಿತ), ನೆಲಗಡಲೆ (ಶೇಂಗಾ) (ನೀರಾವರಿ), ನೆಲಗಡಲೆ (ಶೇಂಗಾ) (ಮಳೆಯಾಶ್ರಿತ), ಹತ್ತಿ (ನೀರಾವರಿ), ಹತ್ತಿ (ಮಳೆಯಾಶ್ರಿತ) ಹಾಗೂ ಅದೇ ರೀತಿ ಟೊಮ್ಯಾಟೋ, ಅರಿಶಿಣ ಬೆಳೆಗಳಿಗೆ ನೋಂದಣಿ ಮಾಡಿಕೊಳ್ಳಲು 2021ರ ಜುಲೈ 31 ಕೊನೆಯ ದಿನವಾಗಿದೆ. ಭತ್ತ (ನೀರಾವರಿ), ಸೂರ್ಯಕಾಂತಿ (ನೀರಾವರಿ), ಸೂರ್ಯಕಾಂತಿ (ಮಳೆಯಾಶ್ರಿತ), ಈರುಳ್ಳಿ (ನೀರಾವರಿ), ಕೆಂಪು ಮೆಣಸಿನಕಾಯಿ (ನೀರಾವರಿ) ಬೆಳೆಗಳಿಗೆ ನೋಂದಣಿ ಮಾಡಿಕೊಳ್ಳಲು 2021ರ ಆಗಸ್ಟ್ 16 ಕೊನೆಯ ದಿನವಾಗಿದೆ.

ಸ್ಥಳ, ನಿರ್ದಿಷ್ಟ, ಪ್ರಕೃತಿ ವಿಕೋಪಗಳಾದ ಆಲಿಕಲ್ಲು ಮಳೆ, ಭೂ ಕುಸಿತ ಮತ್ತು ಬೆಳೆ ಮುಳುಗಡೆ, ಮೇಘ ಸ್ಫೋಟ ಮತ್ತು ಗುಡುಗು ಮಿಂಚಿಗಳಿAದಾಗಿ ಉಂಟಾಗುವ ಬೆಂಕಿ ಅವಘಡ ಸಂದರ್ಭದಲ್ಲಿ ಬೆಳೆ ನಷ್ಟ ಉಂಟಾದರೆ ವೈಯಕ್ತಿಕ ನಷ್ಟದ ನಿರ್ಧರಣೆಯನ್ನು ವೈಯಕ್ತಿಕವಾಗಿ ನಿರ್ಧರಿಸಿ ಬೆಳೆ ವಿಮಾ ನಷ್ಟ ಪರಿಹಾರವನ್ನು ಇತ್ಯರ್ಥಪಡಿಸಲು ಈ ಯೋಜನೆಯಡಿ ಅವಕಾಶ ಕಲ್ಪಿಸಲಾಗಿದೆ.  

      ಪ್ರಸ್ತುತ ಸಾಲಿನ ಮುಂಗಾರು ಹಂಗಾಮಿನಲ್ಲಿ ವಿವಿಧ ವಿಮಾ ಘಟಕಗಳಲ್ಲಿ ಅಧಿಸೂಚಿಸಿದ ಬೆಳೆಗಳಿಗೆ ಇಚ್ಛೆಯುಳ್ಳ ಬೆಳೆಸಾಲ ಪಡೆಯದ ರೈತರು ಈ ಯೋಜನೆಯಡಿ ಭಾಗವಹಿಸಬಹುದಾಗಿದೆ. ಬೆಳೆ ಸಾಲ ಪಡೆಯದ ರೈತರು ಅರ್ಜಿಯೊಂದಿಗೆ ಭೂಮಿ ಹೊಂದಿರುವುದಕ್ಕೆ ದಾಖಲೆಗಳಾದ ಪಹಣಿ, ಖಾತೆ, ಪಾಸ್ ಪುಸ್ತಕ, ಕಂದಾಯ ರಸೀದಿಯನ್ನು ನೀಡಬೇಕು. ವಿಮಾ ಸಂಸ್ಥೆಗಳು ಬೆಳೆ ಸಾಲ ಪಡೆಯದ ರೈತರನ್ನು ತಮ್ಮ ಅಧಿಕೃತ ಏಜೆಂಟರ ಮೂಲಕವು ಸಹ ಯೋಜನೆಯಡಿ ನೋಂದಾಯಿಸಲು ಅನುಮತಿ ನೀಡಲಾಗಿದೆ.

ಪರಿಷ್ಕೃತ ಪಿ.ಎಂ.ಎಫ್.ಬಿ.ವೈ. ((Revamped PMFBY)  )  ಮಾರ್ಗಸೂಚಿಯನ್ವಯ ಬ್ಯಾಂಕಿನಲ್ಲಿ ಬೆಳೆ ಸಾಲ ಮಂಜೂರಾದÀ ಎಲ್ಲಾ ರೈತರನ್ನು ಕಡ್ಡಾಯವಾಗಿ ಈ ಯೋಜನೆಯಡಿ ಒಳಪಡಿಸಲಾಗುತ್ತದೆ. ಬೆಳೆ ಸಾಲ ಪಡೆದ ರೈತರು ಈ ಯೋಜನೆಯಲ್ಲಿ ಭಾಗವಹಿಸಲು ಇಚ್ಚೆ ಪಡದೇ ಇದ್ದಲ್ಲಿ, ಈ ಕುರಿತು ಬ್ಯಾಂಕಿನ ವ್ಯವಸ್ಥಾಪಕರಿಗೆ ಬೆಳೆ ನೋಂದಣಿ ಅಂತಿಮ ದಿನಾಂಕಕ್ಕಿಂತ 7 ದಿನಗಳು ಮುಂಚಿತವಾಗಿ ಲಿಖಿತವಾಗಿ ಮುಚ್ಚಳಿಕೆ ಪತ್ರವನ್ನು ನೀಡಿದ್ದಲ್ಲಿ ಅಂತಹ ರೈತರನ್ನು ಬೆಳೆ ವಿಮೆ ಯೋಜನೆಯಿಂದ ಕೈಬಿಡಲಾಗುತ್ತದೆ.

ಈ ಯೋಜನೆಯಡಿ ಕಟಾವಿನ ನಂತರ ಬೆಳೆಯನ್ನು ಜಮೀನಿನಲ್ಲೆ ಒಣಗಲು ಬಿಟ್ಟಂತಹ ಸಂದರ್ಭದಲ್ಲಿ  ಕಟಾವು ಮಾಡಿದ ಎರಡು ವಾರಗಳೊಳಗೆ (ಹದಿನಾಲ್ಕು ದಿನಗಳು) ಚಂಡಮಾರುತ, ಚಂಡಮಾರುತ ಸಹಿತ ಮಳೆ ಮತ್ತು ಅಕಾಲಿಕ ಮಳೆಯಿಂದಾಗಿ ಬೆಳೆ ನಾಶವಾದರೆ ವೈಯಕ್ತಿಕವಾಗಿ ವಿಮಾ ಸಂಸ್ಧೆಯು ನಷ್ಟ ನಿರ್ಧಾರ ಮಾಡಿ ಬೆಳೆ ನಷ್ಟ ಪರಿಹಾರವನ್ನು ಇತ್ಯರ್ಥಪಡಿಸಲು ಜಿಲ್ಲೆಯ ಎಲ್ಲಾ ತಾಲೂಕುಗಳನ್ನು ಒಳಪಡಿಸಲಾಗಿದೆ. ಇಂತಹ ಸ್ಥಳಿಯ ಗಂಡಾಂತರ ಕಾರಣಗಳಿಂದ ಬೆಳೆ ನಷ್ಟ ಸಂಭವಿಸಿದರೆ ಬೆಳೆ ವಿಮೆ ಮಾಡಿಸಿರುವ ರೈತರು ಈ ಬಗ್ಗೆ ಸಂಬಂದಪಟ್ಟ ಹಣಕಾಸು ಸಂಸ್ಥೆ ಅಥವಾ ಅನುಷ್ಟಾನಗೊಳಿಸಿರುವ ವಿಮಾ ಸಂಸ್ಥೆಗಳ ಕಚೇರಿಗಳಿಗೆ ತಕ್ಷಣ ಸೂಚನೆ ನೀಡಬೇಕು ಮತ್ತು ಯಾವುದೇ ಸಂದರ್ಭದಲ್ಲಿ ವಿಮೆ ಮಾಡಿಸಿದ ಬೆಳೆಯ ವಿವರಗಳನ್ನು ಹಾನಿಯ ವ್ಯಾಪ್ತಿ ಹಾಗೂ ಹಾನಿಗೆ ಕಾರಣಗಳನ್ನು 72 ಗಂಟೆಯೊಳಗೆ ತಿಳಿಸಬೇಕು.

ಒಂದು ವೇಳೆ ಒಂದು ಅಧಿಸೂಚಿತ ಘಟಕದಲ್ಲಿ ಶೇಕಡಾ 25 ಕ್ಕಿಂತ ಹೆಚ್ಚು ವಿಸ್ತೀರ್ಣದಲ್ಲಿ ಬೆಳೆ ನಷ್ಟವಾದರೆ ಆ ಅಧಿಸೂಚಿತ ಘಟಕದಲ್ಲಿ ಬೆಳೆ ವಿಮೆಗೆ ಒಳಪಟ್ಟ ರೈತರಲ್ಲಿ ಬೆಳೆ ನಷ್ಟವಾದ ರೈತರಿಗೆ ಮಾತ್ರ ಮಾದರಿ ಸಮೀಕ್ಷೆಗನುಣವಾಗಿ ಬೆಳೆ ನಷ್ಟ ಪರಿಹಾರವನ್ನು ಇತ್ಯರ್ಥಪಡಿಸಲಾಗುತ್ತದೆ. ಇಂತಹ ಸ್ಥಳಿಯ ಗಂಡಾAತರ ಕಾರಣಗಳಿಂದ ಬೆಳೆ ನಷ್ಟ ಸಂಭವಿಸಿದರೆ ಬೆಳೆ ವಿಮೆ ಮಾಡಿಸಿರುವ ರೈತರು ಈ ಬಗ್ಗೆ ಸಂಬAದಪಟ್ಟ ಹಣಕಾಸು ಸಂಸ್ಥೆ ಅಥವಾ ಅನುಷ್ಟಾನಗೊಳಿಸಿರುವ ವಿಮಾ ಸಂಸ್ಥೆಗಳ ಕಚೇರಿಗಳಿಗೆ ತಕ್ಷಣ ಸೂಚನೆ ನೀಡಬೇಕು ಮತ್ತು ಯಾವುದೇ ಸಂದರ್ಭದಲ್ಲಿ ವಿಮೆ ಮಾಡಿಸಿದ ಬೆಳೆಯ ವಿವರಗಳನ್ನು ಹಾನಿಯ ವ್ಯಾಪ್ತಿ ಹಾಗೂ ಹಾನಿಗೆ ಕಾರಣಗಳನ್ನು 72 ಗಂಟೆಯೊಳಗೆ ತಿಳಿಸಬೇಕು.

     2021-22 ಮುಂಗಾರು ಹಂಗಾಮಿನಲ್ಲಿ ಮಳೆ ಅಭಾವ ಅಥವಾ ಇತರೆ ಪ್ರತಿಕೂಲ ಹವಾಮಾನ ಪರಿಸ್ಥಿತಿಗಳಿಂದ ಅಧಿಸೂಚಿತ ಘಟಕದಲ್ಲಿ ಶೇಕಡಾ 75 ಕ್ಕಿಂತ ಹೆಚ್ಚಿನ ಕ್ಷೇತ್ರದಲ್ಲಿ ಬಿತ್ತನೆ ವಿಫಲಗೊಂಡಲ್ಲಿ (Prevented sowing / Planting Risk)ವಿಮಾ ಮೊತ್ತದ ಗರಿಷ್ಟ 25 ರಷ್ಟು ಪರಿಹಾರವನ್ನು ವಿಮಾ ಸಂಸ್ಥೆಯು ವಿಮೆ ಮಾಡಿಸಿದ ರೈತರಿಗೆ ಇತ್ಯರ್ಥಪಡಿಸಿ ಮುಂದಿನ ಅವಧಿಗೆ ವಿಮೆಯನ್ನು ರದ್ದುಪಡಿಸಬಹುದಾಗಿದೆ.

ಮುಂಗಾರು ಹಂಗಾಮಿನಲ್ಲಿ ವಿವಿಧ ಬೆಳೆಗಳಿಗೆ ನಿಗದಿಪಡಿಸಲಾದ ವಿಮಾ ಮೊತ್ತ, ರೈತರ ವಿಮಾ ಮೊತ್ತ ಮತ್ತು ರೈತರು ಪಾವತಿಸಬೇಕಾದ ವಿಮಾ ಮೊತ್ತದ ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 1800-200-5142 ಹಾಗೂ ತಮ್ಮ ತಾಲೂಕಿನ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ  ಅಥವಾ ಬೆಂಗಳೂರಿನ ಯುನಿವರಸಲ್ ಸೊಂಪೊ  ಜೆನೆರಲ್  ಇನ್ಸುರೆನ್ಸ ಕಂಪನಿ ಲಿಮಿಟೆಡ್  ವಿಮಾ ಸಂಸ್ಥೆ ಈ ಕೆಳಕಂಡ ವಿಮಾ ಪ್ರತಿನಿಧಿಗಳನ್ನು ಸಂಪರ್ಕಿಸಲು ಕೋರಲಾಗಿದೆ.

ಕಲಬುರಗಿ ಜಿಲ್ಲೆ-ಮೊಬೈಲ್ ಸಂಖ್ಯೆ 9731499917, 8867508750, 9538185343, 9620006812, ಚಿತ್ತಾಪೂರ-9731499917, ಅಫಜಲಪೂರ-9902356434, ಜೇವರ್ಗಿ-9731499917, ಆಳಂದ-9731499917, ಕಲಬುರಗಿ-9538185343, ಚಿಂಚೋಳಿ-8095384057, 9731499917 ಹಾಗೂ ಸೇಡಂ-7204579007ಗಳಿಗೆ ಸಂಪರ್ಕಿಸಲು ಕೋರಲಾಗಿದೆ.

Published On: 17 June 2021, 07:18 PM English Summary: Pradhan mantra fasal bima yojana crop insurance detail information

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.