News

ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ ಅನುಷ್ಠಾನ-ವಿಮೆ ಕಂತು ಕಟ್ಟಲು ಜುಲೈ 31 ಕೊನೆ ದಿನ

04 July, 2020 12:06 PM IST By:

ಬೆಳೆ ನಷ್ಟ, ಬೆಳೆ ವಿಫಲಗೊಂಡ ಸಂದರ್ಭದಲ್ಲಿ ನಷ್ಟ ಹೊಂದಿದ ರೈತರ ಕೈಹಿಡಿಯಲು ರಾಜ್ಯ ಸರ್ಕಾರವು ಕೇಂದ್ರ ಸರ್ಕಾರದ ಕೇಂದ್ರ ಸರ್ಕಾರದ ಸಹಭಾಗೀತ್ವದಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯನ್ನು ಅನುಷ್ಠಾನಗೊಳಿಸಿದೆ.

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ವಿಮೆ ಕಂತು ಕಟ್ಟಿದ್ದ ರೈತರಿಗೆ ಬೆಳೆನಷ್ಟ ಮತ್ತು ಪ್ರಕೃತಿ ವಿಕೋಪದಡಿ ಬೆಳೆ ನಷ್ಟ ಆದರೆ ಬೆಳೆ ವಿಮೆ ಮಾಡಿಸಿರುವ ರೈತರಿಗೆ ಎಕರೆವಾರು ವಿಮಾ ಮೊತ್ತವನ್ನು ಪಾವತಿ ಮಾಡುವ ಯೋಜನೆ ಇದಾಗಿದೆ.

2020-21 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯನ್ನು ರಾಜ್ಯದ ಆಯಾ ಜಿಲ್ಲೆಗಳಿಗೆ ಅನುಷ್ಟಾನಗೊಳಿಸಲಾಗಿದೆ.

 ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ ಅಡಿ 2020-21ನೇ ಸಾಲಿನ ಮುಂಗಾರು ಹಂಗಾಮಿಗೆ  ಮುಖ್ಯ ಬೆಳೆಗಳನ್ನು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಹಾಗೂ ಉಳಿದ ಬೆಳೆಗಳನ್ನು ಹೋಬಳಿ ಮಟ್ಟದಲ್ಲಿ ಅನುಷ್ಠಾನಗೊಳಿಸಲು ಆದೇಶಿಸಲಾಗಿದೆ

ಈ ಯೋಜನೆಯನ್ನು ಅನುಷ್ಠಾನಗೊಳಿಸಲು ಬೆಂಗಳೂರಿನ ಯೂನಿವರ್ಸಲ್ ಸೊಂಪು ಜನರಲ್ ಇನ್ಸುರೆನ್ಸ್ ಕಂಪನಿಯನ್ನು ನಿಗದಿಪಡಿಸಲಾಗಿದೆ. ಭತ್ತ, ತೊಗರಿ (ನೀರಾವರಿ), ತೊಗರಿ (ಮಳೆಯಾಶ್ರಿತ), ಸೂರ್ಯಕಾಂತಿ (ಮಳೆಯಾಶ್ರಿತ), ಮುಸುಕಿನ ಜೋಳ (ನೀರಾವರಿ) ಬೆಳೆಗಳಿಗೆ ವಿಮಾ ಕಂತು ತುಂಬಲು  ಆಗಸ್ಟ್ 14 ಕೊನೆಯ ದಿನವಾಗಿದೆ. ಸಜ್ಜೆ, ಉದ್ದು, ಹೆಸರು, ಸೋಯಾ ಅವರೆ, ಹತ್ತಿ, ಮುಸುಕಿನ ಜೋಳ ಹಾಗೂ ಎಳ್ಳು (ಮಳೆಯಾಶ್ರಿತ) ಬೆಳೆಗಳಿಗೆ ವಿಮಾ ಕಂತು ತುಂಬಲು ಜುಲೈ 31 ಕೊನೆಯ ದಿನವಾಗಿದೆ.

ರೈತರ ಕೈ ಹಿಡಿಯಲಿರುವ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ- ಜುಲೈ 31ರೊಳಗೆ ವಿಮೆ ಮಾಡಿಸಿ

ಪಾವತಿಸಬೇಕಾದ ವಿಮಾ ಮೊತ್ತ ಮತ್ತಿತರ ಮಾಹಿತಿಗಾಗಿ ಸಮೀಪದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಅಥವಾ ಬೆಂಗಳೂರಿನ ಯುನಿವರ್ಸಲ್ ಸೊಂಪು ಜನರಲ್ ಇನ್ಸುರೆನ್ಸ್ ಕಂಪನಿ ಲಿಮಿಟೆಡ್ ಕಂಪನಿಯ (ವಿಮಾ ಸಂಸ್ಥೆ) ಜಿಲ್ಲಾ ಪ್ರತಿನಿಧಿಯ ಮೊಬೈಲ್ ಸಂಖ್ಯೆ 74004 34603 ಹಾಗೂ ಟೋಲ್
ಫ್ರೀ ಸಂಖ್ಯೆ: 18002005142 ಗೆ ಸಂಪರ್ಕಿಸಿ ಮಾಹಿತಿ ಪಡೆಯಬಹುದು.