1. ಸುದ್ದಿಗಳು

ನಾಳೆ ಕರ್ನಾಟಕಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ! ಮಹತ್ವದ ಯೋಜನೆಗಳಿಗೆ ಚಾಲನೆ

Kalmesh T
Kalmesh T
Prime Minister Narendra Modi will visit Karnataka on January 19

Narendra Modi visiting Karnataka: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು 2023ರ ಜನವರಿ 19ರಂದು ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ. ಕರ್ನಾಟಕದಲ್ಲಿ ಪ್ರಧಾನಮಂತ್ರಿಯವರು ಯಾದಗಿರಿ ಮತ್ತು ಕಲಬುರಗಿ ಜಿಲ್ಲೆಗಳಿಗೆ ಭೇಟಿ ನೀಡಲಿದ್ದಾರೆ.

ಸ್ವಯಂ ಉದ್ಯೋಗಕ್ಕೆ ನೇರ ಸಾಲ ಯೋಜನೆ: ಪ್ರತಿ ಫಲಾನುಭವಿಗೆ ಸಿಗಲಿದೆ ರೂ.1,00,000 ಧನ ಸಹಾಯ

Narendra Modi visiting Karnataka: ಮಧ್ಯಾಹ್ನ ಸುಮಾರು 12 ಗಂಟೆಗೆ ಯಾದಗಿರಿ ಜಿಲ್ಲೆಯ ಕೊಡೇಕಲ್ ನಲ್ಲಿ ನೀರಾವರಿ, ಕುಡಿಯುವ ನೀರು ಮತ್ತು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಯೋಜನೆಗಳಿಗೆ ಸಂಬಂಧಿಸಿದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ಮತ್ತು ಶಂಕುಸ್ಥಾಪನೆ ನೆರವೇರಿಸುವರು.

ಮಧ್ಯಾಹ್ನ 2:15 ಕ್ಕೆ ಕಲಬುರಗಿ ಜಿಲ್ಲೆಯ ಮಳಖೇಡ್ ಗೆ ಆಗಮಿಸಲಿರುವ ಪ್ರಧಾನಮಂತ್ರಿಯವರು, ಅಲ್ಲಿ ಹೊಸದಾಗಿ ಘೋಷಿಸಲಾದ ಕಂದಾಯ ಗ್ರಾಮಗಳ ಅರ್ಹ ಫಲಾನುಭವಿಗಳಿಗೆ ಹಕ್ಕುಪತ್ರಗಳನ್ನು ವಿತರಿಸುವರು ಮತ್ತು ರಾಷ್ಟ್ರೀಯ ಹೆದ್ದಾರಿ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸುವರು.

ಸಂಜೆ 5 ಗಂಟೆಗೆ ಪ್ರಧಾನಮಂತ್ರಿಯವರು ಮುಂಬೈನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ಲೋಕಾರ್ಪಣೆ ಮಾಡಲಿದ್ದಾರೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಸಂಜೆ 6:30 ರ ಸುಮಾರಿಗೆ ಅವರು ಮುಂಬೈ ಮೆಟ್ರೋದ ಎರಡು ಮಾರ್ಗಗಳನ್ನು ಉದ್ಘಾಟಿಸುವರು.

Millets : ರಾಷ್ಟ್ರೀಯ ಯುವಜನೋತ್ಸವದಲ್ಲಿ ಸಿರಿಧಾನ್ಯ ವೈಭವ - ಪ್ರದರ್ಶನ ಮತ್ತು ಮಾರಾಟ

ಕರ್ನಾಟಕದಲ್ಲಿ ಪ್ರಧಾನ ಮಂತ್ರಿ (Narendra Modi visiting Karnataka)

ಎಲ್ಲಾ ಮನೆಗಳಿಗೆ ವೈಯಕ್ತಿಕವಾಗಿ ಕೊಳಾಯಿ ಸಂಪರ್ಕಗಳ ಮೂಲಕ ಸುರಕ್ಷಿತ ಮತ್ತು ಸಮರ್ಪಕ ಕುಡಿಯುವ ನೀರನ್ನು ಒದಗಿಸುವ ಪ್ರಧಾನಮಂತ್ರಿಯವರ ದೃಷ್ಟಿಕೋನವನ್ನು ಸಾಕಾರಗೊಳಿಸುವ ಮತ್ತೊಂದು ಹೆಜ್ಜೆಯಾಗಿ, ಜಲ ಜೀವನ ಅಭಿಯಾನದ ಅಡಿಯಲ್ಲಿ ಯಾದಗಿರಿ ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆಗೆ ಯಾದಗಿರಿ ಜಿಲ್ಲೆಯ ಕೊಡೇಕಲ್ ನಲ್ಲಿ ಶಂಕುಸ್ಥಾಪನೆ ನೆರವೇರಲಿದೆ.

ಈ ಯೋಜನೆಯಡಿ 117 ಎಂಎಲ್.ಡಿ ನೀರು ಸಂಸ್ಕರಣಾ ಘಟಕವನ್ನು ನಿರ್ಮಿಸಲಾಗುವುದು.  2050 ಕೋಟಿ ರೂ.ಗೂ ಹೆಚ್ಚು ವೆಚ್ಚದ ಈ ಯೋಜನೆಯು ಯಾದಗಿರಿ ಜಿಲ್ಲೆಯ 700ಕ್ಕೂ ಹೆಚ್ಚು ಗ್ರಾಮೀಣ ಜನವಸತಿಗಳು ಮತ್ತು ಯಾದಗಿರಿಯ ಮೂರು ಪಟ್ಟಣಗಳ ಸುಮಾರು 2.3 ಲಕ್ಷ ಮನೆಗಳಿಗೆ ಕುಡಿಯುವ ನೀರನ್ನು ಪೂರೈಸುತ್ತದೆ.

ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರು ನಾರಾಯಣಪುರ ಎಡದಂಡೆ ಕಾಲುವೆ – ವಿಸ್ತರಣಾ ನವೀಕರಣ ಮತ್ತು ಆಧುನೀಕರಣ ಯೋಜನೆ (ಎನ್.ಎಲ್ ಬಿಸಿ – ಇಆರ್.ಎಂ) ಉದ್ಘಾಟಿಸಲಿದ್ದಾರೆ. ಕಾಲುವೆ ಮೂವರ 10,000 ಕ್ಯೂಸೆಕ್ ನೀರು ಸಾಗಿಸುವ ಸಾಮರ್ಥ್ಯ ಹೊಂದಿರುವ ಈ ಯೋಜನೆಯು 4.5 ಲಕ್ಷ ಹೆಕ್ಟೇರ್ ಜಲಾನಯನ ಪ್ರದೇಶಕ್ಕೆ ನೀರಾವರಿ ಕಲ್ಪಿಸುತ್ತದೆ.

ಕಲಬುರಗಿ, ಯಾದಗಿರಿ ಮತ್ತು ವಿಜಯಪುರ ಜಿಲ್ಲೆಗಳ 560 ಗ್ರಾಮಗಳ 3 ಲಕ್ಷಕ್ಕೂ ಹೆಚ್ಚು ರೈತರಿಗೆ ಇದರಿಂದ ಅನುಕೂಲವಾಗಲಿದೆ. ಯೋಜನೆಯ ಒಟ್ಟು ವೆಚ್ಚ ಸುಮಾರು 47೦೦ ಕೋಟಿ ರೂ. ಆಗಿದೆ.

ರಾಷ್ಟ್ರೀಯ ಹೆದ್ದಾರಿ 150ಸಿ 65.5 ಕಿ.ಮೀ ವಿಭಾಗಕ್ಕೂ ಪ್ರಧಾನಮಂತ್ರಿಯವರು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಈ ಷಟ್ಪಥದ ಹಸಿಲು ವಲಯ ರಸ್ತೆ ಯೋಜನೆಯು ಸೂರತ್ - ಚೆನ್ನೈ ಎಕ್ಸ್ ಪ್ರೆಸ್ ಮಾರ್ಗದ ಭಾಗವಾಗಿದೆ.  ಇದನ್ನು ಸುಮಾರು 200೦ ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಿಸಲಾಗುತ್ತಿದೆ.

ಫಸಲ್‌ ಬಿಮಾ ಯೋಜನೆಯಡಿ ಸಣ್ಣ ಮೊತ್ತದ ಕ್ಲೈಮ್‌ ಕುರಿತು ಶೀಘ್ರದಲ್ಲೆ ಹೊಸ ನೀತಿ! ಏನಿದು?

Narendra Modi visiting Karnataka: ಸರ್ಕಾರದ ಯೋಜನೆಗಳು ಶೇ.100ರಷ್ಟು ಗರಿಷ್ಠತೆ ಸಾಧಿಸಬೇಕೆಂಬ ಪ್ರಧಾನಮಂತ್ರಿಯವರ ದೃಷ್ಟಿಕೋನಕ್ಕೆ ಅನುಗುಣವಾಗಿ, ಕಲಬುರಗಿ, ಯಾದಗಿರಿ, ರಾಯಚೂರು, ಬೀದರ್ ಮತ್ತು ವಿಜಯಪುರ ಐದು ಜಿಲ್ಲೆಗಳಲ್ಲಿ ಸುಮಾರು 1475 ದಾಖಲೆ ರಹಿತ ಜನವಸತಿಗಳನ್ನು ಹೊಸ ಕಂದಾಯ ಗ್ರಾಮಗಳಾಗಿ ಘೋಷಿಸಲಾಗಿದೆ.

ಕಲಬುರಗಿ ಜಿಲ್ಲೆಯ ಸೇಡಂ ತಾಲ್ಲೂಕಿನ ಮಳಖೇಡ್ ಗ್ರಾಮದಲ್ಲಿ ಪ್ರಧಾನಮಂತ್ರಿಯವರು ಹೊಸದಾಗಿ ಘೋಷಿಸಲಾದ ಈ ಕಂದಾಯ ಗ್ರಾಮಗಳ ಅರ್ಹ ಫಲಾನುಭವಿಗಳಿಗೆ ಹಕ್ಕುಪತ್ರಗಳನ್ನು ವಿತರಿಸುವರು. ಎಸ್ಸಿ, ಎಸ್ಟಿ ಮತ್ತು ಒಬಿಸಿಯ ವಂಚಿತ ಮತ್ತು ದುರ್ಬಲ ಸಮುದಾಯಗಳಿಗೆ ಸೇರಿದ ಐವತ್ತು ಸಾವಿರಕ್ಕೂ ಹೆಚ್ಚು ಫಲಾನುಭವಿಗಳಿಗೆ ಹಕ್ಕುಪತ್ರಗಳನ್ನು ವಿತರಿಸಿ, ಅವರ ಭೂಮಿಗೆ ಸರ್ಕಾರದಿಂದ ಔಪಚಾರಿಕ ಮಾನ್ಯತೆಯನ್ನು ಒದಗಿಸುವ ಒಂದು ಹೆಜ್ಜೆ ಇದಾಗಿದ್ದು, ಕುಡಿಯುವ ನೀರು, ವಿದ್ಯುತ್, ರಸ್ತೆಗಳು ಮುಂತಾದ ಸರ್ಕಾರಿ ಸೇವೆಗಳನ್ನು ಪಡೆಯಲು ಅವರನ್ನು ಅರ್ಹರನ್ನಾಗಿ ಮಾಡುತ್ತದೆ.

ಈ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರು ರಾಷ್ಟ್ರೀಯ ಹೆದ್ದಾರಿ 150ಸಿ 71 ಕಿ.ಮೀ. ವಿಭಾಗಕ್ಕೂ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಈ ಷಟ್ಪಥದ ಹಸಿರು ವಲಯ ರಸ್ತೆ ಯೋಜನೆಯು ಸೂರತ್ - ಚೆನ್ನೈ ಎಕ್ಸ್ ಪ್ರೆಸ್ ಮಾರ್ಗದ ಭಾಗವಾಗಿದೆ.  ಇದನ್ನು 21೦೦ ಕೋಟಿ ರೂ.ಗಿಂತ ಹೆಚ್ಚು ವೆಚ್ಚದಲ್ಲಿ ನಿರ್ಮಿಸಲಾಗುತ್ತಿದೆ.

ಸೂರತ್-ಚೆನ್ನೈ ಎಕ್ಸ್ ಪ್ರೆಸ್ ಮಾರ್ಗ ಗುಜರಾತ್, ಮಹಾರಾಷ್ಟ್ರ, ಕರ್ನಾಟಕ, ತೆಲಂಗಾಣ, ಆಂಧ್ರಪ್ರದೇಶ ಮತ್ತು ತಮಿಳುನಾಡು ಈ ಆರು ರಾಜ್ಯಗಳ ಮೂಲಕ ಹಾದುಹೋಗುತ್ತದೆ. ಇದು ಅಸ್ತಿತ್ವದಲ್ಲಿರುವ ಮಾರ್ಗವನ್ನು 16೦೦ ಕಿ.ಮೀ.ಗಳಿಂದ 1270 ಕಿ.ಮೀ.ಗೆ ಇಳಿಸಲಿದೆ.

Published On: 18 January 2023, 11:06 AM English Summary: Prime Minister Narendra Modi will visit Karnataka on January 19

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.