1. ಸುದ್ದಿಗಳು

ಸಿರಿಧಾನ್ಯಗಳ ಉತ್ಪಾದನೆಗೆ ಆದ್ಯತೆ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Shoba karandlaje

ದೇಶದಲ್ಲಿ ಸಿರಿಧಾನ್ಯಗಳ ಉತ್ಪಾದನೆಗೆ ಆದ್ಯತೆ ನೀಡಲಾಗುತ್ತದೆ ಎಂದು ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು. ಅವರು ಬೆಂಗಳೂರಿನ  ವಿಕಾಸಸೌಧದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿ, 2023 ರ ವರ್ಷವನ್ನು ಸಿರಿಧಾನ್ಯಗಳ ವರ್ಷ ಎಂದು ವಿಶ್ವ ಸಂಸ್ಥೆ ಘೋಷಣೆ ಮಾಡಿದೆ. ಹೀಗಾಗಿ ರಾಜ್ಯದಲ್ಲಿ ಹೆಚ್ಚಿನ ಸಿರಿಧಾನ್ಯ ಬೆಳೆಗೆ ಆದ್ಯತೆ ನೀಡಲಾಗುವುದು ಎಂದರು.

ದೇಶದಲ್ಲಿ ಪಾರಂಪರಿಕವಾಗಿ ಸಿರಿಧಾನ್ಯಗಳನ್ನು ಬೆಳೆಯುತ್ತಿರುವ ರಾಜ್ಯಗಳಿವೆ. ಆದರೆ ಇವುಗಳಿಗೆ ಪೂರಕ ವಾತಾವರಣ ಇಲ್ಲದಿದ್ದರೂ ಉತ್ತರಾಖಂಡ ರಾಜ್ಯ ಈ ಸಿರಿಧಾನ್ಯಗಳ ಬೆಳೆಗಳನ್ನು ಬೆಳೆಯುವುದರಲ್ಲಿ ಮುಂಚೂಣಿಯಲ್ಲಿದ್ದು, ಗುಣಮಟ್ಟವನ್ನೂ ಕಾಯ್ದುಕೊಂಡಿದೆ ಎಂದು ಹೇಳಿದರು.

. ರಾಜ್ಯ ಸರ್ಕಾರ ಅಭಿವೃದ್ಧಿ ಪಡಿಸಿರುವ ಯೋಜನೆಯನ್ನು ದೇಶಾದ್ಯಂತ ವಿಸ್ತರಿಸಲಾಗುವುದು. ಆಂಧ್ರ ಪ್ರದೇಶದಲ್ಲಿ ಕೃಷಿ ಭರವಸಾ ಯೋಜನೆ ಜಾರಿ ಮಾಡಿದ್ದಾರೆ. ತಮಿಳುನಾಡಿನಲ್ಲಿ ತರಕಾರಿ ಮಾರಾಟಕ್ಕೆ ಸೂಕ್ತ ವ್ಯವಸ್ಥೆ ಮಾಡಿದ್ದಾರೆ. ಈ ಯೋಜನೆಯನ್ನು ರಾಜ್ಯ ಸರ್ಕಾರ ಅನುಷ್ಠಾನಗೊಳಿಸಬೇಕು. ರಫ್ತು ಉದ್ಯಮಕ್ಕೆ ಉತ್ತೇಜನ ನೀಡಲು ಕ್ರಮ ವಹಿಸಲಾಗುವುದು ಎಂದು ವಿವರಿಸಿದರು.

ಒಳನಾಡಿನ ಮೀನುಗಾರಿಕೆಗೆ ಉತ್ತೇಜನ. ರೇಷ್ಮೆ ಬೆಳೆ ಉತ್ತೇಜನ, ರೇಷ್ಮೆಗೆ ಈ ಮಾರುಕಟ್ಟೆ ಜಾರಿಗೆ ತರಲು ತೀರ್ಮಾನ ಮಾಡಲಾಗಿದೆ.. ಶೇ 50 ರಷ್ಟು ರೈತರು ಇ ಪೇಮೆಂಟ್ ವ್ಯವಸ್ಥೆಗೆ ಅಳವಡಿಸಿಕೊಂಡಿದ್ದಾರೆ. 57.ಕೋಟಿ ರೈತರಿಗೆ ನೇರವಾಗಿ ಅವರ ಅಕೌಂಟ್ ಗೆ ಬೆಳೆ ವಿಮೆ ಹಣ ತಲುಪಿಸಲಾಗಿದೆ. ದೇಶ ಇತಿಹಾಸದಲ್ಲಿ 320 ಲಕ್ಷ ಮೆಟ್ರಿಕ್ ಟನ್ ಆಹಾರ ಉತ್ಪಾದನೆ ಮಾಡಲಾಗಿದೆ. ಫುಡ್ ಪ್ರೊಸೆಸ್ಸಿಂಗ್ ಆಹಾರ ರಫ್ತು ಮಾಡಲು ಕೈಗಾರಿಕಾ ಇಲಾಖೆಯಲ್ಲಿ ಪ್ರತ್ಯೇಕ ವಿಂಗ್ ಮಾಡಲು ಮನವಿ ಮಾಡಿದ್ದೇನೆ. ಅವರೊಂದಿಗೆ ಚರ್ಚಿಸಲಾಗುತ್ತಿದೆ. ಕೃಷಿಗೆ ಸಂಬಂಧಿಸಿದ ಕೆಲಸಗಳನ್ನು ಎನ್ ಆರ್.ಇಜಿ ಮೂಲಕ ಜಾರಿಗೆ ಆದ್ಯತೆ ನೀಡಲಾಗುವುದು. ಎಫ್ ಪಿ ಒ ಗಳ ಮೂಲಕ ಕೃಷಿ ಉತ್ಪನ್ನಗಳ ಮಾರಾಟ ಮಾಡಲು ಕ್ರಮ ಕೈಗೊಳ್ಳಲಾಗುವುದು. ಎಫ್.ಪಿಒ 25 ವಿವಿಧ ರೀತಿಯ ಕ್ರಮಕೈಗೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದರು.

ಪ್ರವಾಹ ಪರಿಹಾರವಾಗಿ ಎನ್ ಡಿ ಆರ್ ಎಫ್ ಮೂಲಕ 630 ಕೋಟಿ ಬಿಡುಗಡೆ ಮಾಡಲಾಗಿದೆ. ಕೊರೊನಾ ದಿಂದ ಎರಡು ವರ್ಷ ಹಿನ್ನಡೆಯಾಗಿದೆ. ಕೊರೊನಾ. ಕಾರಣದಿಂದ ಸ್ವಲ್ಪ ಮುಂದೂಡಿಕೆಯಾಗಿದೆ. ರಸಗೊಬ್ಬರ ಬೆಲೆ ಹೆಚ್ಚಳವಾದರೂ ಕೇಂದ್ರ ಸರ್ಕಾರ ಸಬ್ಸಿಡಿ ಕೊಡುತ್ತಿದೆ ಎಂದರು.

ಕೃಷಿಯಿಂದ ವಿಮುಖರಾಗುವವರ ಸಂಖ್ಯೆ ಹೆಚ್ಚಳ

ಇದೇ ಸಂದರ್ಭದಲ್ಲಿ ಕೃಷಿ ವಿರೋಧಿ ಹೋರಾಟದ ಬಗ್ಗೆ ಮಾತನಾಡಿದ ಅವರು, ಅಂತೆಯೇ ವರ್ಷದಿಂದ ವರ್ಷಕ್ಕೆ ಕೃಷಿಯಿಂದ ವಿಮುಖರಾಗುವವರ ಸಂಖ್ಯೆ ಹೆಚ್ಚುತ್ತಿದೆ. ಇದನ್ನು ತಡೆಯುವ ಸಲುವಾಗಿ ಕೇಂದ್ರ ಸರ್ಕಾರ ಹಲವು ಯೋಜನೆಗಳನ್ನು ಹಮ್ಮಿಕೊಂಡಿದೆ ಎಂದು ಹೇಳಿದ ಅವರು, ಕೃಷಿ ಲಾಭದಾಯಕವಲ್ಲವೆಂದು ನಗರಗಳತ್ತ ವಲಸೆ ಹೋಗುತ್ತಿದ್ದಾರೆ. ಕೃಷಿಯಿಂದ ಬರುವ ಆದಾಯ ಗಣನೀಯವಾಗಿ ಹೆಚ್ಚಾದರೆ ಮಾತ್ರ ಈ ವಲಸೆಯನ್ನು ತಡೆಯಲು ಸಾಧ್ಯ. ಆದ್ದರಿಂದ ಕೃಷಿಕರ ಆದಾಯ ಹೆಚ್ಚಳ ಮಾಡುವತ್ತ ಗಮನ ನೀಡಲಾಗಿದೆ ಎಂದರು.

ರಾಜ್ಯದಲ್ಲಿ 10 ಸಾವಿರ ಕೃಷಿ ಉತ್ಪಾದಕರ ಸಂಘಗಳ ಸ್ಥಾಪನೆ ಮಾಡಲಾಗುವುದು, ದೇಶದಲ್ಲಿ 10 ಸಾವಿರ ಎಫ್ ಪಿ ಒ ಗಳನ್ನು ಸ್ಥಾಪನೆ ಮಾಡಲು ತೀರ್ಮಾನಿಸಲಾಗಿದೆ. ಮುಂದಿನ ಒಂದು ವರ್ಷದಲ್ಲಿ ರಾಜ್ಯದಲ್ಲಿ 700 ಎಫ್‌ಪಿಒ ತೆರೆಯಲು ನಿರ್ಧರಿಸಲಾಗಿದೆ. ಎಫ್‌ಒಗಳಿಗೆ ಕೇಂದ್ರ ಸರ್ಕಾರ ಎಲ್ಲ ರೀತಿಯ ಸಹಕಾರ ನೀಡಲಿದೆ. ರಫ್ತು ಗುಣಮಟ್ಟದ ಉತ್ಪಾದನೆಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಪ್ರತಿ ಜಿಲ್ಲೆಯಲ್ಲಿ ಕ್ಲಸ್ಟರ್ ತೆರೆಯಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು

Published On: 27 August 2021, 08:43 PM English Summary: Priority for cereal production- says Shoba karandlaje

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.