ಮಹದಾಯಿ ಕಾಮಗಾರಿ ಪೂರ್ಣಗೊಳಿಸುವುದು, ಬಗರಹುಕುಂ ಕಾಯ್ದೆ ಅಡಿಯಲ್ಲಿ ರೈತರಿಗೆ ಹಕ್ಕುಪತ್ರ ನೀಡುವುದು ಸೇರಿದಂತೆ ಇನ್ನಿತರ ರೈತರ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರೈತರ ಸಂಘ ಹುಬ್ಬಳ್ಳಿಯಲ್ಲಿಂದು ಬೃಹತ್ ಪ್ರತಿಭಟನೆ ನಡೆಯಿತು.
ಇದನ್ನೂ ಓದಿರಿ: ಜನಸಾಮಾನ್ಯರಿಗೆ ಗುಡ್‌ನ್ಯೂಸ್: ಅಡುಗೆ ಎಣ್ಣೆ ಬೆಲೆಯಲ್ಲಿ ಇಳಿಕೆ! ಎಷ್ಟು ಗೊತ್ತೆ?
ಮಹದಾಯಿ ಕಾಮಗಾರಿ ಪೂರ್ಣಗೊಳಿಸುವುದು, ಬಗರಹುಕುಂ ಕಾಯ್ದೆ ಅಡಿಯಲ್ಲಿ ರೈತರಿಗೆ ಹಕ್ಕುಪತ್ರ ನೀಡುವುದು ಸೇರಿದಂತೆ ಇನ್ನಿತರ ರೈತರ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರೈತರ ಸಂಘ ಹುಬ್ಬಳ್ಳಿಯಲ್ಲಿಂದು ಬೃಹತ್ ಪ್ರತಿಭಟನೆ ನಡೆಯಿತು.
ಇಲ್ಲಿನ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಿಂದ ನೂರಾರು ರೈತರು, ಟ್ರಾಕ್ಟರ್ ಮೂಲಕ ಚೆನ್ನಮ್ಮ ವೃತ್ತದವರೆಗೆ ಮೆರವಣಿಗೆ ನಡೆಸಿದ ಅವರು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಈ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ದೊರೆಯಲಿದೆ ರೂ 20,000 ದಿಂದ 35,000 ಪ್ರೋತ್ಸಾಹಧನ! ಅರ್ಜಿ ಸಲ್ಲಿಕೆ ಹೇಗೆ ಗೊತ್ತೆ?
ಕೂಡಲೇ ಸರ್ಕಾರ ಬೆಳೆ ವಿಮೆ ಪರಿಹಾರ ಸಂದಾಯ ಮಾಡುವುದು, ಕೃಷಿ ಕೂಲಿ ಕಾರ್ಮಿಕರ ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆ ಮಾಡುವುದು, 2018-19 ರ ಸಾಲ ಮನ್ನಾ ಯೋಜನೆಯ ಫಲಾನುಭವಿ ರೈತರ ಬಾಕಿ ಹಣ ಸಂದಾಯ ಮಾಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುಂತೆ ರೈತರು ಸರ್ಕಾರಕ್ಕೆ ಆಗ್ರಹಿಸಿದರು.
ಈ ಸಂದರ್ಭದಲ್ಲಿ ರಾಜ್ಯಾಧ್ಯಕ್ಷ ಸಿದ್ದರಾಜ ಕುಂದಗೋಳ ಸೇರಿದಂತೆ ಹಲವು ರೈತ ಮುಖಂಡರು ಭಾಗಿಯಾಗಿದ್ದರು.
Share your comments