1. ಸುದ್ದಿಗಳು

ರೈತರೇ ನಡೆಸಿದ ಬೆಳೆ ಸಮೀಕ್ಷೆ ಮಾದರಿಯಲ್ಲಿ ಹಿಂಗಾರು ಬೆಳೆ ಸಮೀಕ್ಷೆ : ಬಿ.ಸಿ ಪಾಟೀಲ್

ಮುಂಗಾರು ಬೆಲಳೆಯ ಸಮೀಕ್ಷೆ ಮಾದರಿಯಲ್ಲಿಯೇ ಹಿಂಗಾರು ಬೆಳೆ ಸಮೀಕ್ಷೆ ನಡೆಸಲು ಕೃಷಿ ಇಲಾಖೆ ನಿರ್ಧರಿಸಿದೆ. ಬೆಂಗಳೂರಿನಲ್ಲಿ ಹಿಂಗಾರು ಬೆಳೆ ಸಮೀಕ್ಷೆ ನಡೆಸುವ ಕುರಿತಂತೆ ಇಲಾಖೆಯ ಅಧಿಕಾರಿಗಳ ಜೊತೆ ಸಭೆ ನಡೆಸಿದ ಸಭೆಯಲ್ಲಿ ಕೃಷಿ ಸಚಿವ ಬಿ.ಸಿ ಪಾಟೀಲ್ ಚರ್ಚಿಸಿದರು.

ಮುಂಗಾರು ಬೆಳೆ ಸಮೀಕ್ಷೆ ಶೇ.100 ರಷ್ಟು ಯಶಸ್ವಿಯಾಗಿದ್ದರಿಂದ ಅದೇ ಮಾದರಿಯಲ್ಲಿ ಸಮೀಕ್ಷೆ ನಡೆಸಲು ನಿರ್ಧರಿಸಲಾಗಿದೆ. ರೈತರೇ ತಮ್ಮ ಬೆಳೆ ಜಮೀನಿನ ಸಮೀಕ್ಷೆಯನ್ನು ತಾವೇ ಆ್ಯಪ್ ಮೂಲಕ ಸಮೀಕ್ಷೆ ನಡೆಸಿದ್ದು, ಇದೇ ಮಾದರಿಯಲ್ಲಿಯೇ ಹಿಂಗಾರು ಬೆಳೆ ಸಮೀಕ್ಷೆಯನ್ನು ಕೂಡ ಯಶಸ್ವಿಯಾಗಿ ನಡೆಸುವ ಬಗ್ಗೆ ಸಚಿವರು ಇಲಾಖಾಧಿಕಾರಿಗಳೊಂದಿಗೆ ಚರ್ಚಿಸಿದರು.

ಮಾಸ್ಟರ್ಸ್ ಗಳಿಗೆ ಹಿಂಗಾರು ಬೆಳೆ ಸಮೀಕ್ಷೆ ಬಗ್ಗೆ ತರಬೇತಿ ನೀಡುವುದು, ಮಾಸ್ಟರ್ಸ್ ತರಬೇತುದಾರರಿಂದ ಖಾಸಗಿ ನಿವಾಸಿಗಳಿಗೆ (ಪಿಆರ್ ಓ) ರೈತರ ಬೆಳೆ ಸಮೀಕ್ಷೆ ಆ್ಯಪ್ ಬಗ್ಗೆ ತರಬೇತಿ ನೀಡಿ ಬಳಿಕ ಆ್ಯಪ್ ಮೂಲಕ ರೈತರೇ ತಮ್ಮ ಬೆಳೆ ಸಮೀಕ್ಷೆಯನ್ನು ತಾವೇ ನಡೆಸಲು ಕ್ರಮಕೈಗೊಳ್ಳುವುದು ಸೇರಿದಂತೆ ಮತ್ತಿತ್ತರ ವಿಷಯಗಳ ಕುರಿತು ಸಭೆಯಲ್ಲಿ ಮಾಹಿತಿ ಪಡೆಯಲಾಯಿತು.

ಡಿಸೆಂಬರ್ ಮೊದಲ ವಾರದಲ್ಲಿ ಹಿಂಗಾರು ಬೆಳೆ ಸಮೀಕ್ಷೆ ರೈತರ ಆ್ಯಪ್ ಬಿಡುಗಡೆಯಾಗಲಿದ್ದು, ಶೀಘ್ರದಲ್ಲಿಯೇ ದಿನಾಂಕ ಪ್ರಕಟಿಸಲಾಗುವುದು. ರೈತರು ಮುಂಗಾರು ಬೆಳೆ ಸಮೀಕ್ಷೆಯಲ್ಲಿ ಸಹಕರಿಸಿದಂತೆ ಹಿಂಗಾರು ಬೆಳೆ ಸಮೀಕ್ಷೆಯಲ್ಲಿಯೂ ಸಹ ಸಹಕರಿಸಬೇಕು. ಮುಂಗಾರು ಬೆಳೆಯಂತೆ ಹಿಂಗಾರು ಬೆಳೆ ಸಮೀಕ್ಷೆಯನ್ನು ಸಹ ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದ್ದಾರೆ.

Published On: 07 November 2020, 06:03 PM English Summary: rabi crop survey on kharif crop survey model

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.