News

Railways Plan: ರೈಲ್ವೆ ಯೋಜನೆಗಳ ತ್ವರಿತ ಜಾರಿಗೆ ಸಮಿತಿ ರಚನೆ!

21 November, 2022 12:11 PM IST By: Hitesh
Railways Plan: Formation of committee for rapid implementation of railway projects!

ಕರ್ನಾಟಕದಲ್ಲಿ ರೈಲ್ವೆ (Railways Plan)ಯೋಜನೆಗಳನ್ನು ಕಾಲಮಿತಿಯಲ್ಲಿ ಅನುಷ್ಠಾನ ಮಾಡುವ ಉದ್ದೇಶದಿಂದ ರೈಲ್ವೆ ಇಲಾಖೆ ಮತ್ತು ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಗಳನ್ನು ಒಳಗೊಂಡ ಸಮನ್ವಯ ಸಮಿತಿ ರಚಿಸಲು ತೀರ್ಮಾನಿಸಲಾಗಿದೆ.

Ration card: “ದತ್ತಾ” ಬದಲು “ಕುತ್ತಾ”; ಅಧಿಕಾರಿ ಮುಂದೆ ಆತ ಮಾಡಿದ್ದೇನು ಗೊತ್ತಾ!

ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ್ದು,  ರಾಜ್ಯದಲ್ಲಿನ ರೈಲ್ವೆ ಯೋಜನೆಗಳ ಅನುಷ್ಠಾನ ಕುರಿತು ಚರ್ಚೆ ನಡೆಸಿದ್ದಾರೆ.

ಈ ವೇಳೆ ಅವರು ಶೇಕಡ 50:50ರ ವೆಚ್ಚ ಹಂಚಿಕೆ ಆಧಾರದಲ್ಲಿ ಕೈಗೆತ್ತಿಕೊಂಡಿರುವ ಒಂಬತ್ತು ಹೊಸ ಯೋಜನೆಗಳ ಪ್ರಗತಿಯನ್ನು ಪರಿಶೀಲಿಸಿದರು.

ಕಬ್ಬು ಬೆಳೆ FRP ದರ ಹೆಚ್ಚಳಕ್ಕೆ ಆಗ್ರಹಿಸಿ ಸಿ.ಎಂ ಮನೆ ಮುಂದೆ ನ.22ರಿಂದ ಧರಣಿ: ಕುರುಬೂರು ಶಾಂತಕುಮಾರ್‌ ಎಚ್ಚರಿಕೆ 

ಭೂಸ್ವಾಧೀನ, ಅನುದಾನ ಬಿಡುಗಡೆ, ಕಾಮಗಾರಿಗೆ ವೇಗ ನೀಡುವುದರಲ್ಲಿ ಸಮನ್ವಯ ಸಾಧಿಸಲು ಉನ್ನತಮಟ್ಟದ ಸಮಿತಿ ರಚಿಸುವ ಸಂಬಂಧ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಯಿತು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾತನಾಡಿ, ಭೂಸ್ವಾಧೀನ ಪ್ರಕ್ರಿಯೆಗೆ ವೇಗ ನೀಡುವುದು ಮತ್ತು ರೈಲ್ವೆ ಯೋಜನೆಗಳ ಅನುಷ್ಠಾನಕ್ಕೆ ಎದುರಾಗುವ ತೊಡಕುಗಳನ್ನು ನಿವಾರಿಸಲು ಸಮನ್ವಯ ಸಮಿತಿ ರಚಿಸಲಾಗುವುದು ಎಂದರು.

ಒಂಬತ್ತು ರೈಲ್ವೆ ಯೋಜನೆಗಳಿಗೆ 15ಸಾವಿರ ಎಕರೆ ಜಮೀನು ಅಗತ್ಯವಿದ್ದು, ಈವರೆಗೆ 9 ಸಾವಿರ ಎಕರೆಯನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬೇಡಿಕೆ ಹೆಚ್ಚಾಗಿರುವ ಹಾಗೂ ತ್ವರಿತವಾಗಿ ಕಾಮಗಾರಿ ಪೂರ್ಣಗೊಳಿಸಲು ಸಾಧ್ಯವಿರುವ ಯೋಜನೆಗಳಿಗೆ ಅಗತ್ಯವಿರುವ

ಜಮೀನುಗಳನ್ನು ಆದ್ಯತೆ ಮೇಲೆ ಸ್ವಾಧೀನಪಡಿಸಿಕೊಳ್ಳುವಂತೆ ನಿರ್ದೇಶನ ನೀಡಲಾಗಿದೆ ಎಂದರು.

ಗದಗ –ವಾಡಿ, ರಾಯದುರ್ಗ- ತುಮಕೂರು, ಗಿಣಿಗೇರಾ- ರಾಯಚೂರು, ತುಮಕೂರು-ಚಿತ್ರದುರ್ಗ-ದಾವಣಗೆರೆ, ಬಾಗಲಕೋಟೆ- ಕುಡಚಿ,

ಕಡೂರು-ಚಿಕ್ಕಮಗಳೂರು-ಬೇಲೂರು, ಹಾಸನ – ಬೇಲೂರು, ಶಿವಮೊಗ್ಗ–ರಾಣೆಬೆನ್ನೂರು, ಮಾರಿಕುಪ್ಪಂ-ಕುಪ್ಪಂ,

ಬೆಳಗಾವಿ-ಧಾರವಾಡ ಹೊಸ ರೈಲು ಮಾರ್ಗಗಳಿಗೆ ಸಂಬಂಧಿಸಿದಂತೆ ಪ್ರಗತಿ ಪರಿಶೀಲನೆ ನಡೆಸಲಾಯಿತು. ಬೆಂಗಳೂರು ಉಪನಗರ ರೈಲ್ವೆ ಯೋಜನೆ ಅನುಷ್ಠಾನದ ಸಂಬಂಧ ಸಹ ಚರ್ಚೆ ನಡೆಯಿತು.

ರೈತರ ಮೇಲೆ ಕ್ರಿಮಿನಲ್‌ ಪ್ರಕರಣ ದಾಖಲಿಸಿದರೆ ಜೋಕೆ: ಆರ್‌. ಅಶೋಕ್‌ ಎಚ್ಚರಿಕೆ! 

ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್‌ ಜೋಶಿ, ಸಂಸದ ಎಸ್. ಮುನಿಸ್ವಾಮಿ, ಹಣಕಾಸು ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್. ಪ್ರಸಾದ್,

ಮೂಲಸೌಕರ್ಯ ಅಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ, ಮುಖ್ಯಮಂತ್ರಿ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್,

ನೈರುತ್ಯ ರೈಲ್ವೆ ಪ್ರಧಾನ ವ್ಯವಸ್ಥಾಪಕ ಸಂಜೀವ್ ಕಿಶೋರ್ ಸೇರಿದಂತೆ ಹಲವರು ಸಭೆಯಲ್ಲಿ ಉಪಸ್ಥಿತರಿದ್ದರು.

ರಾಜ್ಯದಲ್ಲಿ ಚಳಿ ಹೆಚ್ಚಾಗುವ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ!