1. ಸುದ್ದಿಗಳು

Rain : ರಾಜ್ಯದಲ್ಲಿ 3 ದಿನ ಹಗುರ ಮಳೆ ಸಾಧ್ಯತೆ-ಹವಾಮಾನ ಇಲಾಖೆ ಅಂದಾಜು

Maltesh
Maltesh
Rain: 3 days of light rain in the state-Meteorological department estimates

ಮುಂದಿನ 6 ದಿನಗಳಲ್ಲಿ ಕರ್ನಾಟಕ ಸೇರಿದಂತೆ 10ಕ್ಕೂ ಹೆಚ್ಚು ರಾಜ್ಯಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ. ಮಾರ್ಚ್ ಎರಡನೇ ವಾರದಲ್ಲಿ ಹವಾಮಾನವು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದೆ. ಜೊತೆಗೆ  ತಾಪಮಾನವು ಹೆಚ್ಚುತ್ತಿದೆ.

ಕೆಲವೆಡೆ ಹಗಲು ಮನೆಯಲ್ಲೇ ಇರಲು ಸಾಧ್ಯವಾಗದ ಪರಿಸ್ಥಿತಿ ಇದೆ. ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮಳೆಯಾಗುವ ಸಾಧ್ಯತೆಯಿದ್ದು, ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿಯಲಿದೆ. ಬೆಂಗಳೂರಿನಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ. ಕಾರವಾರದಲ್ಲಿ ಗರಿಷ್ಠ 37.1 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದ್ದರೆ, ಬಾಗಲಕೋಟೆಯಲ್ಲಿ ಕನಿಷ್ಠ 14.0 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.

EPFO ಹೆಚ್ಚಿನ ವೇತನದ ಪಿಂಚಣಿ ಸಂಬಂಧಿಸಿದ ಅರ್ಜಿ ದಿನಾಂಕ ವಿಸ್ತರಣೆ

ಬೆಂಗಳೂರಿನಲ್ಲಿ ಹೆಚ್‌ಎಎಲ್‌ನಲ್ಲಿ 31.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ, 18 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ, ಬೆಂಗಳೂರು ನಗರದಲ್ಲಿ ಗರಿಷ್ಠ 32.5 ಡಿಗ್ರಿ ಸೆಲ್ಸಿಯಸ್, ಕನಿಷ್ಠ ತಾಪಮಾನ 19.2 ಡಿಗ್ರಿ ಸೆಲ್ಸಿಯಸ್, ಕೆಐಎಎಲ್‌ನಲ್ಲಿ 31.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ, 18.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದೆ.

ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ, ಮುಂದಿನ 48 ಗಂಟೆಗಳಲ್ಲಿ ಕರಾವಳಿ ಕರ್ನಾಟಕದ ಮೇಲೆ ಬೆಚ್ಚಗಿನ ಗಾಳಿ ಬೀಸಲಿದೆ. ಏತನ್ಮಧ್ಯೆ, ಕೆಲವು ರಾಜ್ಯಗಳಲ್ಲಿ ಗುಡುಗು ಮತ್ತು ಆಲಿಕಲ್ಲು ಸಹಿತ ಮಳೆಯಾಗುವ ಸಾಧ್ಯತೆಯಿದೆ, ಮಾರ್ಚ್ 14-16 ರವರೆಗೆ ಗಿಲ್ಗಿಟ್, ಮುಜಾಫರಾಬಾದ್, ಜಮ್ಮು ಮತ್ತು ಕಾಶ್ಮೀರ, ಲಡಾಕ್, ಹಿಮಾಚಲ ಪ್ರದೇಶ, ಉತ್ತರಾಖಂಡ ಸೇರಿದಂತೆ  ಕರ್ನಾಟಕದ ಹಲವೆಡೆ ಮಳೆಯಾಗಲಿದೆ.

ಮಾರ್ಚ್ 15-17ರವರೆಗೆ ದಕ್ಷಿಣ ಭಾರತ, ಪೂರ್ವ ಭಾರತ ಮತ್ತು ಮಧ್ಯ ಭಾರತದಲ್ಲಿ ಮಳೆಯಾಗಲಿದೆ. ಅದರಂತೆ ಮುಂದಿನ 6 ದಿನಗಳ ಕಾಲ ದೇಶದ ವಿವಿಧೆಡೆ ಮಳೆಯಾಗುವ ಸಾಧ್ಯತೆ ಇದೆ. ಮಹಾರಾಷ್ಟ್ರ, ಪಂಜಾಬ್, ಗುಜರಾತ್, ಮಧ್ಯಪ್ರದೇಶದಲ್ಲಿ ಇಂದು ಮಳೆಯಾಗಲಿದೆ, ಅರುಣಾಚಲ ಪ್ರದೇಶ, ನಾಗಾಲ್ಯಾಂಡ್, ಅಸ್ಸಾಂ, ಮೇಘಾಲಯ, ಮಣಿಪುರದ ಕೆಲವು ಭಾಗಗಳಲ್ಲಿ ಮಳೆ ಮತ್ತು ಆಲಿಕಲ್ಲು ಬೀಳುವ ಸಾಧ್ಯತೆಯಿದೆ.

Dearness allowance: ಸರ್ಕಾರಿ ನೌಕರರೇ ಗಮನಿಸಿ; ಶೀಘ್ರದಲ್ಲೇ 4% ತುಟ್ಟಿಭತ್ಯೆ ಹೆಚ್ಚಳ ನಿರೀಕ್ಷೆ!

ಇದೆಲ್ಲದರ ನಡುವೆ ಈಗಾಗಲೇ ಉತ್ತರ ಕನ್ನಡ ಹಾಗೂ ಕರಾವಳಿ ತೀರದ ಹಲವು ಪ್ರದೇಶಗಳಲ್ಲಿ ಸಾಧಾರಣ ಮಳೆ ಬಿದ್ದಿದೆ. ಇತ್ತ ಅನೇಕ ಪ್ರದೇಶಗಳಲ್ಲಿ, ತಾಪಮಾನವು ಇಂದು 35 ಡಿಗ್ರಿ ಸೆಲ್ಸಿಯಸ್‌ಗೆ ತಲುಪಬಹುದು.IMD ಪ್ರಕಾರ, ಹೆಚ್ಚಿನ ರಾಜ್ಯಗಳಲ್ಲಿ ತಾಪಮಾನವು ಪ್ರಸ್ತುತ ಸಾಮಾನ್ಯಕ್ಕಿಂತ 4 ರಿಂದ 5 ಡಿಗ್ರಿಗಳಷ್ಟಿದೆ.

Published On: 14 March 2023, 02:37 PM English Summary: Rain: 3 days of light rain in the state-Meteorological department estimates

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.