1. ಸುದ್ದಿಗಳು

ಕರಾವಳಿಯಲ್ಲಿ ಜುಲೈ 23ರವರೆಗೆ ಭಾರಿ ಮಳೆ ಸಾಧ್ಯತೆ

ದೇಶದ ಪಶ್ಚಿಮ ಕರಾವಳಿಯಲ್ಲಿ ಜುಲೈ 23 ರವರೆಗೆ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ, ಈಶಾನ್ಯ ಮತ್ತು ದಕ್ಷಿಣ ಭಾರತದ ಕೆಲವು ಭಾಗಗಳಲ್ಲಿ ಭಾರಿ ಮಳೆಯಾಗಲಿದ.. ಪಶ್ಚಿಮ ರಾಜಸ್ಥಾನದಲ್ಲಿ ಮಂಗಳವಾರ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ  ಮಳೆಯಾಗುವ ಸಾಧ್ಯತೆಯಿದೆ.. ಉತ್ತರ ಪ್ರದೇಶ, ಗುಜರಾತ, ಮಧ್ಯಪ್ರದೇಏಶದ ಹಾಗೂ ರಾಜಸ್ಥಾನದ ಪೂರ್ವ ಭಾಗದ ಕೆಲವುಪ್ರದೇಶಗಳಲ್ಲಿ ಗುಡುಗು ಸಿಡಿಲಿನೊಂದಿಗೆ ಮಳೆಯಾಗುವ ಸಾಧ್ಯತೆಯಿದೆ.

ಪಂಜಾಬ್, ಪೂರ್ವ ರಾಜಸ್ಥಾನ, ಬಿಹಾರ, ಪಶ್ಚಿಮ ಬಂಗಾಳ, ಸಿಕ್ಕಿಂ, ಒಡಿಶಾ, ಅಸ್ಸಾಂ, ಮೇಘಾಲಯ, ಅರುಣಾಚಲ ಪ್ರದೇಶ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರದ ಪ್ರತ್ಯೇಕ ಸ್ಥಳಗಳಲ್ಲಿಯೂ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಐಎಂಡಿ ತಿಳಿಸಿದೆ.

ಕರಾವಳಿ ಜಿಲ್ಲೆಗಳಿಗೆ ಜುಲೈ 21 ರವರೆಗೆ ಆರೆಂಜ್‌ ಅಲರ್ಟ್‌

ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಜುಲೈ 21ರವರೆಗೆ ಗುಡುಗಿನ ಆರ್ಭಟದೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಕೆಲವೆಡೆ ಗುಡುಗಿನಿಂದ ಕೂಡಿದ ಭಾರಿ ಮಳೆ ನಿರೀಕ್ಷಿಸಲಾಗಿದ್ದು, ಜು.18 ಮತ್ತು 21ರವರೆಗೆ ನಾಲ್ಕು ದಿನಗಳ ಕಾಲ ಕರಾವಳಿ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೊಷಿಸಲಾಗಿದೆ.

ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳಿಗೆ ಜುಲೈ 18ರಿಂದ 19ರವರೆಗೆ ಆರೆಂಜ್‌ ಅಲರ್ಟ್‌ ಹಾಗೂ ಜುಲೈ 20 ಮತ್ತು 21ರಂದು ಯೆಲ್ಲೋ ಅಲರ್ಟ್‌ ಕೊಡಲಾಗಿದೆ. ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಭಾರಿ ಮಳೆ ನಿರೀಕ್ಷಿಸಲಾಗಿದ್ದು, 17ರಂದು ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಕೊಪ್ಪಳ ಹಾಗೂ ದಕ್ಷಿಣ ಒಳನಾಡಿನ ಚಿತ್ರದುರ್ಗ, ದಾವಣಗೆರೆ, ಮೈಸೂರು ಜಿಲ್ಲೆಗಳಿಗೆ ಜುಲೈ 19ರಂದು ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.

ಮಹಾಮಳೆಗೆ ಮುಂಬೈ ತತ್ತರ ಗೋಡೆ ಕುಸಿದು 22 ಮಂದಿ ಸಾವು

ಮಹಾ ಮಳೆಗೆ ಮುಂಬೈ ಮತ್ತು ಮುಂಬೈನ ಹೊರವಲಯ ಅಕ್ಷರಶಃ ತತ್ತರಿಸಿ ಹೋಗಿದೆ. ಮಳೆಯಿಂದ ಗೋಡೆ ಕುಸಿತ ಸೇರಿದಂತೆ ಇನ್ನಿತರ ಅನಾಹುತಗಳಿಂದ 22 ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ.
ನೆನ್ನೆ ತಡರಾತ್ರಿಯಿಂದ ಸುರಿದ ಧಾರಾಕಾರ ಮಳೆಯಿಂದಾಗಿ ಬೋರಿವಾಲಿ, ಕಂಡಿವಾಲಿ, ಮಲದ್, ಅಂಧೇರಿ, ಚೆಂಬರ್,ಕುರ್ಲಾ, ಗಾಂಧಿ ಮಾರುಕಟ್ಟೆ,ಹಿಂದುಮಾತಾ ,ವಿಕ್ರೋಲಿ ಸೇರಿದಂತೆ ಹಲವು ಪ್ರದೇಶಗಳು ಸಂಪೂರ್ಣವಾಗಿ ಜಲಾವೃತಗೊಂಡು ದುರ್ಘಟನೆ ಸಂಭವಿಸಿದೆ.

ಭಾರೀ ಮಳೆಯಿಂದ ಉಂಟಾದ ಭೂಕುಸಿತದಿಂದಾಗಿ ಈ ಅನಾಹುತ ಸಂಭವಿಸಿದೆ .ಮನೆ ಹಾಗೂ ಗೋಡೆಯ ಕೆಳಗೆ ಸಿಲುಕಿರುವ ಜನರ ರಕ್ಷಣಾ ಕಾರ್ಯ ಭರದಿಂದ ಸಾಗಿದೆ. ಮತ್ತೊಂದೆಡೆ ಭಾರಿ ಮಳೆಯಿಂದಾಗಿ ಮುಂಬೈನ ಹಲವು ಪ್ರದೇಶಗಳು ಸಂಪೂರ್ಣವಾಗಿ ಜಲಾವೃತವಾಗಿದ್ದು ಪರಿಹಾರ ಕಾರ್ಯಗಳಿಗೆ ಅಡ್ಡಿಯಾಗಿದೆ. ರೈಲು ಬಸ್ಸು ಸಂಚಾರಕ್ಕೆ ಅಡೆತಡೆಯಾಗಿದೆ.ರೈಲ್ವೆ ಹಳಿಗಳ ಮೇಲೆ ಸಂಪೂರ್ಣವಾಗಿ ನೀರು ತುಂಬಿರುವ ಹಿನ್ನೆಲೆಯಲ್ಲಿ ರೈಲುಗಳು ಸಂಚರಿಸದ ಪರಿಸ್ಥಿತಿ ನಿರ್ಮಾಣವಾಗಿದೆ . ಹೀಗಾಗಿ ರೈಲು ಸಂಚಾರ ಸ್ಥಗಿತಗೊಳಿಸಲಾಗಿದೆ.

Published On: 18 July 2021, 08:59 PM English Summary: rain alert coastal area

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.