News

ರಾಜ್ಯದ 19 ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ ಸಾಧ್ಯತೆ- ಯೆಲ್ಲೋ ಅಲರ್ಟ್ ಘೋಷಣೆ

01 June, 2021 5:14 PM IST By:
rain alert

ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ತೀವ್ರಗೊಂಡಿರುವುದರಿಂದ  ರಾಜ್ಯದ ಕರಾವಳಿ ಸೇರಿದಂತೆ  19 ಜಿಲ್ಲೆಗಳಲ್ಲಿ ಇಂದಿನಿಂದ (ಜೂನ್ 1) ಜೂನ್ 3 ರವರೆಗೆ ವ್ಯಾಪಕ ಮಳೆಯಾಗುವ  ಸಾಧ್ಯತೆಯಿರುವುದರಿಂದ ಯೆಲ್ಲೋ ಅಲರ್ಟ್ ಘೋಷಿಸಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉತ್ತರಕನ್ನಡ, ದಕ್ಷಿಣ ಕನ್ನಡ, ಕೊಪ್ಪಳ, ರಾಯಚೂರು, ವಿಜಯಪುರ, ಬಳ್ಳಾರಿ, ಉಡುಪಿ, ಬೀದರ್, ಗದಗ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಶಿವಮೊಗ್ಗ ಕೊಡಗು ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಈ ಜಿಲ್ಲೆಗಳಲ್ಲಿ ಜೂನ್ 3 ರವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಕಲಬುರಗಿ, ಗದಗ, ಕೊಪ್ಪಳ ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದ್ದು, ಜೂನ್ 1 ಮತ್ತು 2 ರಂದು ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಧರ್ಮಸ್ಥಳದಲ್ಲಿ 7 ಸೆಂ.ಮೀ, ಕಾರವಾರದಲ್ಲಿ 5, ಕುಂದಾಪುರದಲ್ಲಿ 4 ಸೆಂ.ಮೀ ಹಾಗೂ ಚಿಂತಾಮಣಿಯಲ್ಲಿ ಮೂರು 3 ಸೆಂ.ಮೀಟರ್ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.