News

ರಾಜ್ಯದ ಏಳು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ-.ಯೆಲ್ಲೋ ಅಲರ್ಟ್

23 September, 2020 9:16 AM IST By:

ರಾಜ್ಯದಲ್ಲಿ ಮುಂಗಾರು ಚುರುಕಾಗಿರುವುದರಿಂದ ಕರಾವಳಿ ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

 ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಸೆ. 23ರಂದು ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿ  ಭಾಗದಲ್ಲಿ 3.5 ಮೀಟರ್‌ಗಳಷ್ಟು ಎತ್ತರದ ಅಲೆಗಳು ಏಳುತ್ತಿದ್ದು, ಗಂಟೆಗೆ ಗರಿಷ್ಠ 55 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಇಲಾಖೆ ಎಚ್ಚರಿಸಿದೆ.

ಸೆ.24ರಿಂದ ರಾಜ್ಯದಾದ್ಯಂತ ಮಳೆ ತಗ್ಗಲಿದ್ದರೂ ಅಲ್ಲಲ್ಲಿ ಸಾಧಾರಣ ಚದುರಿದ ಮಳೆಯಾಗುವ ನಿರೀಕ್ಷೆ ಇದೆ ಎಂದು ತಿಳಿಸಿದೆ.

ಮಳೆ-ಎಲ್ಲಿ,ಎಷ್ಟು?: ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಗರಿಷ್ಠ 14 ಸೆಂ.ಮೀ ಮಳೆಯಾಗಿದೆ. ಭಾಗಮಂಡಲ 12, ಅಂಕೋಲಾ 11, ಕಾರವಾರ 9, ಭಟ್ಕಳ, ವಿರಾಜಪೇಟೆ, ಹೊಸನಗರ 8, ತೀರ್ಥಹಳ್ಳಿ 6, ಮೂಡುಬಿದರೆ, ಸುಳ್ಯ, ಪುತ್ತೂರು, ಉಪ್ಪಿನಂಗಡಿ, ಉಡುಪಿ, ಸಾಗರ ,ಮೂಡಿಗೆರೆ 5, ಕುಂದಾಪುರ, ಮಡಿಕೇರಿ 4, ಹಾಸನ, ಕೊಪ್ಪ 2, ನಿಪ್ಪಾಣಿ, ಬೆಳಗಾವಿ, ಜಮಖಂಡಿ, ಧಾರವಾಡ, ಶಿಕಾರಿಪುರದಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.