1. ಸುದ್ದಿಗಳು

ರಾಜ್ಯದಲ್ಲಿ ಮತ್ತಷ್ಟು ಬಿರುಸುಗೊಂಡ ಮಾನ್ಸೂನ್‌..ಹಲವು ಜಿಲ್ಲೆಗಳಲ್ಲಿ ಮತ್ತೆ ಎಚ್ಚರಿಕೆ!

Maltesh
Maltesh
Rain Alert in karnataka

ಮುಂದಿನ 48 ಗಂಟೆ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿವೆ. ಜೂನ್ 20 ರಿಂದ 23 ರವರೆಗೆ ಕೊಡಗು, ಹಾಸನ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಹೆಚ್ಚು ಮಳೆ ಬೀಳುವ ಸಾಧ್ಯತೆಗಳಿವೆ.ಈ ಹಿನ್ನೆಲೆ ಮೇಲಿನ ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.

ಕರ್ನಾಟಕದಲ್ಲಿ ಮುಂದಿನ 4 ದಿನ  ಮಳೆ ಸಾಧ್ಯತೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಸುರಿಯುತ್ತಿರುವ ಮಳೆ ಮುಂದಿನ 4 ದಿನ ಮುಂದುವರಿಯಲಿದೆ. ಶನಿವಾರ ರಾಜಧಾನಿ ಬೆಂಗಳೂರು, ಚಾಮರಾಜನಗರ, ದಕ್ಷಿಣ ಕನ್ನಡ, ಯಾದಗಿರಿ ಮತ್ತು ಉಡುಪಿಯಲ್ಲಿ ವ್ಯಾಪಕವಾಗಿ ಮಳೆ ಸುರಿದಿದೆ. ಮಳೆ ಹಿನ್ನೆಲೆ 13 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಲ್ಲಿ ಮಳೆ ಮುಂದುವರಿಯಲಿದೆ. ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿಯೂ ಮೋಡ ಕವಿದ ವಾತಾವರಣ ನಿರ್ಮಾಣವಾಗಲಿದ್ದು, ಸಣ್ಣ ಮಳೆ  ಬೀಳಲಿದೆ.ಕರ್ನಾಟಕದಲ್ಲಿ ಕಳೆದ 48 ಗಂಟೆಗಳಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆಗೆ ಸಾಕಷ್ಟು ಅವಾಂತರಗಳು ಸೃಷ್ಟಿಯಾಗಿವೆ ..

ಸಿರಿಧಾನ್ಯ ಬೆಳೆಗಾರರಿಗೆ ಸರ್ಕಾರದಿಂದ ಸಿಗುತ್ತಿದೆ 10 ಸಾವಿರ ರೂ..ಅರ್ಜಿ ಸಲ್ಲಿಕೆ ಹೇಗೆ..?

ರಾಜ್ಯದ ಹಲವು ಭಾಗಗಳಲ್ಲಿ ಕಳೆದ 48 ಗಂಟೆಗಳಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆಗೆ ಕನಿಷ್ಠ ಮೂವರು ಸಾವನ್ನಪ್ಪಿದ್ದು, ಜೂನ್ 22 ರವರೆಗೆ ರಾಜ್ಯಾದ್ಯಂತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.

ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ ಕೊಡಗು, ತುಮಕೂರು, ಮಂಡ್ಯ, ಶಿವಮೊಗ್ಗ, ದಾವಣಗೆರೆ ಚಿತ್ರದುರ್ಗದಲ್ಲಿ ಭಾನುವಾರದಿಂದ ಜೂನ್ 22 ರವರೆಗೆ ಹಳದಿ ಅಲರ್ಟ್ ಘೋಷಿಸಲಾಗಿದೆ. ಈ ಮಧ್ಯೆ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗುಗೆ ಐಎಂಡಿ ಆರೆಂಜ್ ಅಲರ್ಟ್ ಘೋಷಿಸಿದ್ದು, ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದ ಕರಾವಳಿ ಜಿಲ್ಲೆಗಳಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ.

ಬ್ರೇಕಿಂಗ್‌: ಕೇಂದ್ರ ಸರ್ಕಾರಿ ನೌಕರರೇ ಗಮನಿಸಿ..ಇನ್ಮುಂದೆ ಹೀಗೆ ಮಾಡಿದರೆ ನಿಮ್ಮ ನೌಕರಿಗೆ ಎದುರಾಗಲಿದೆ ಕುತ್ತು! ಏನದು ಗೊತ್ತೆ?

ಬೆಂಗಳೂರು ನಗರದ ಬಹುತೇಕ ಭಾಗಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಿದ್ದು, ನಗರದ ಉತ್ತರ ಮತ್ತು ಈಶಾನ್ಯ ಭಾಗಗಳಲ್ಲಿ ಶನಿವಾರ ರಾತ್ರಿ ಭಾರಿ ಮಳೆಯಾಗಿದ್ದು, ನೂರಾರು ವಾಹನಗಳು ಜಖಂಗೊಂಡಿವೆ. ಅನೇಕ ವಸತಿ ಪ್ರದೇಶಗಳು ಪ್ರವಾಹದಿಂದ ಜಲಾವೃತವಾಗಿವೆ.

ಇಂದು ಈ ರಾಜ್ಯಗಳಲ್ಲಿ ಮಳೆಯ ಮುನ್ಸೂಚನೆ

ವರದಿಗಳ ಪ್ರಕಾರ ಇಂದು ದೆಹಲಿ, ಉತ್ತರಪ್ರದೇಶ, ಬಿಹಾರ, ಜಾರ್ಖಂಡ್, ಪಂಜಾಬ್, ಛತ್ತೀಸ್‌ಗಢ, ಒಡಿಶಾ, ಹರಿಯಾಣ, ರಾಜಸ್ಥಾನ, ದಕ್ಷಿಣ ಭಾರತದ ವಿವಿಧ ರಾಜ್ಯಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಬಹುದು. ಗುಜರಾತ್‌ನ ಕೆಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗಬಹುದು. ಇಂದು ಕೂಡ ಜಮ್ಮು ಮತ್ತು ಕಾಶ್ಮೀರದ ಕೆಲವು ಪ್ರದೇಶಗಳಲ್ಲಿ ಮಳೆಯಾಗುವ ನಿರೀಕ್ಷೆಯಿದೆ.

ಈ ಮೀನು ಸಿಕ್ಕರೆ ನೀವು ಕೋಟ್ಯಾಧಿಪತಿಯಾಗೋದು ಫಿಕ್ಸ್..‌! ಸಮುದ್ರ ಚಿನ್ನ Ghol Fish ಬಗ್ಗೆ ನಿಮಗೆ ಗೊತ್ತೆ..?

ಮೀನು ಸಾಕಾಣಿಕೆ ಮಾಡಿದ್ರೆ ಸರ್ಕಾರದಿಂದ ಸಿಗುತ್ತಿದೆ ಭಾರೀ ಸಹಾಯಧನ..ಅರ್ಜಿ ಸಲ್ಲಿಕೆ ಹೇಗೆ..?

Published On: 20 June 2022, 10:32 AM English Summary: Rain Alert in karnataka imd predicts

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.