1. ಸುದ್ದಿಗಳು

ಇಂದಿನಿಂದ ರಾಜ್ಯದ ಒಂಬತ್ತು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಮಳೆಯ ಮುನ್ಸೂಚನೆ

Ramlinganna
Ramlinganna
rain alert

ಹವಾಮಾನ ವೈಪರೀತ್ಯದಿಂದಾಗಿ ಮೇ 5 ರಿದ 7 ರವರೆಗೆ  ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಂಗಳವಾರ ಹಗುರದಿಂದ ಸಾಧಾರಣ ಮಳೆಯಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಎರಡು ದಿನಗಳವರೆಗೆ ಹೆಚ್ಚು ಮಳೆಯಾಗುವ ಮುನ್ಸೂಚನೆ ಇರುವುದರಿಂದ  ‘ಯೆಲ್ಲೊ ಅಲರ್ಟ್‌’ ಘೋಷಿಸಲಾಗಿದೆ’.

‘ಉಳಿದ ಜಿಲ್ಲೆಗಳಲ್ಲಿ ಗುಡುಗು ಮತ್ತು ಸಿಡಿಲು ಹೆಚ್ಚಾಗಿ ಇರಲಿದೆ. ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿಯಲಿದ್ದು, ಕೆಲವೆಡೆ ಸಾಧಾರಣ ಮಳೆಯಾಗಬಹುದು’ ಎಂದು ಮಾಹಿತಿ ನೀಡಿದೆ.

ನಿನ್ನೆ ರಾಜ್ಯದ‌ ಹಲವೆಡೆ ವರುಣನ ಆರ್ಭಟ

ಯಾದಗಿರಿ, ದಾವಣಗೆರೆ ವಿಜಯನಗರ‌ ಜಿಲ್ಲೆಗಳಲ್ಲಿ ಮಂಗಳವರ ಗುಡುಗು ಸಹಿತ‌ ಮಳೆ ಸುರಿದಿದ್ದು ಸಿಡುಲು ಬಡಿದು ಏಳು ಮಂದಿ ಮೃತಪಟ್ಟಿದ್ದಾರೆ.

ಯಾದಗಿರಿಯಲ್ಲಿ ಜಮೀನಿಗೆ ಕೂಲಿ ಕೆಲಸಕ್ಕೆಂದು ತೆರಳಿದ ಸಿದ್ದಮ್ಮ (40) ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ. ವಿಜಯನಗರ ಜಿಲ್ಲೆಯಲ್ಲಿ ಸಿಡಿಲು ಹೊಡೆತಕ್ಕೆ ಸಿಲುಕಿ ರಾಜಶೇಖರ (33), ಚಿನ್ನಾಪುರಿ (40), ವೀರಣ್ಣ (50), ಪತ್ರೆಪ್ಪ (43) ಸಾವನ್ನಪ್ಪಿದ್ದಾರೆ. ದಾವಣಗೆರೆಯಲ್ಲಿ ಸಂಜೆಯಿಂದ ಗುಡುಗು ಸಿಡಿಲು ಸಹಿತ ಭಾರಿ ಮಳೆಯಾಗಿದೆ. ರವಿಕುಮಾರ್(32), ರಮೇಶ್ (30) ಸಿಡಿಲು ಬಡಿದು ಇಬ್ಬರು ಸಾವಿಗೀಡಾಗಿದ್ದಾರೆ..
ಈ ಮಧ್ಯೆ ರಾಜಧಾನಿ ಬೆಂಗೂರಿನ ಹಲವೆಡೆ ಧಾರಾಕಾರ ಮಳೆ ಸುರಿದಿದೆ. ಮಧ್ಯಾನ್ಹದ ವೇಳೆಗೆ ನೆತ್ತಿ ಸುಡುವ ಬಿಸಿಲಿತ್ತು. ಸಂಜೆಯ ವೇಳೆಗೆ ಗುಡುಗು ಸಹಿತ ಮಳೆ ಸುರಿದಿದೆ.

Share your comments

Latest feeds

More News
Krishi Jagran Kannada Magazine Subscription Online Subscription
Krishi Jagran Kannada Subscription

CopyRight - 2021 Krishi Jagran Media Group. All Rights Reserved.