News

ರಾಜ್ಯದ 17 ಜಿಲ್ಲೆಗಳಲ್ಲಿ ಭಾರಿ ಮಳೆ (Heavy rain)ಸಾಧ್ಯತೆ- ಯೆಲ್ಲೋ ಅಲರ್ಟ್

21 July, 2020 7:28 PM IST By:

ರಾಜ್ಯದ ಒಳನಾಡಿನಲ್ಲಿ ಮುಂಗಾರು ಚುರುಕುಗೊಂಡಿರುವುದರಿಂದ ಜುಲೈ 21 ರಂದು ರಾಜ್ಯದ 17 ಜಿಲ್ಲೆಗಳಲ್ಲಿ ಗುಡುಗು ಸಿಡಿಲು ಸಹಿತ ಧಾರಾಕಾರ ಮಳೆಯಾಗುವ (Heavy rain)ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು, ಚಾಮರಾಜನಗರ, ಬೆಳಗಾವಿ, ಬೀದರ್, ಧಾರವಾಡ, ಕಲಬುರಗಿ, ಹಾವೇರಿ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಮೈಸುರು, ಮಂಡ್ಯ, ಹಾಸನ, ಕೊಡಗು, ಕೋಲಾರ, ಶಿವಮೊಗ್ಗ, ರಾಮನಗರ ಜಿಲ್ಲೆಗಳಲ್ಲಿ  ಜುಲೈ 21 ರಂದು ಭಾರಿ ಮಳೆಯಾಗುವ ಸಾಧ್ಯತೆಯಿರುವುದರಿಂದ ಯೆಲ್ಲೋ ಅಲರ್ಟ್ (yellow alert) ಘೋಷಿಸಲಾಗಿದೆ. ಕರಾವಳಿ ಪ್ರದೇಶಗಳಲ್ಲಿ ಮೀನುಗಾರರು (fishers) ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ಜುಲೈ 22 ರಿಂದ ಮಳೆಪ್ರಮಾಣ ಕಡಿಮೆಯಾಗಲಿದೆ. ಕರಾವಳಿಯಲ್ಲಿ ಜುಲೈ 24 ರಿಂದ ಮತ್ತೆ ಮಳೆ ಹೆಚ್ಚಾಗುವ ಸಾಧ್ಯತೆಯಿದೆ. ಇನ್ನು ರಾಜ್ಯದ ಕೆಲವೆಡೆ ಅಲ್ಲಲ್ಲಿ ಸಾಧಾರಣ ಚದುರಿದ ಮಳೆಯಾಗಬಹುದು ಎಂದು ಇಲಾಖೆ ತಿಳಿಸಿದೆ.