1. ಸುದ್ದಿಗಳು

Monsoon: ಜೂನ್‌ 19ರ ಒಳಗೆ ರಾಜ್ಯದಲ್ಲಿ ಮುಂಗಾರು ಮಳೆ ನಿರೀಕ್ಷೆ! ಹವಾಮಾನ ಇಲಾಖೆ ಸೂಚನೆಯಲ್ಲಿ ಯಾವ ಯಾವ ಜಿಲ್ಲೆಗಳಿವೆ ಗೊತ್ತೆ?

Kalmesh T
Kalmesh T
Rain Alert: Monsoon set for June 19

ಈ ಸಲ ರಾಜ್ಯದಲ್ಲಿ ನಿರೀಕ್ಷಿತ ಮಟ್ಟಕ್ಕಿಂತ ಕಡಿಮೆ ಮಳೆಯಾಗಿದ್ದು, ಇನ್ನೂ ನೈಋತ್ಯ ಮುಂಗಾರು ಮಳೆ ನಿರೀಕ್ಷಿತ ಪ್ರಮಾಣದಲ್ಲಿ ಆರಂಭವಾಗಿಲ್ಲ. ಹಾಗಿದ್ದರೆ ಹವಾಮಾನ ಇಲಾಖೆ ಹೇಳುವುದೇನು? ಇಲ್ಲಿದೆ ಮಾಹಿತಿ

ಇದನ್ನೂ ಓದಿರಿ: ಗುಡ್‌ನ್ಯೂಸ್‌: 40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದ ಪ್ರತಿ ತಿಂಗಳು ದೊರೆಯಲಿದೆ ₹1000 ..! ಅರ್ಜಿ ಸಲ್ಲಿಕೆ ಹೇಗೆ?

PM Kisan: ಕೋಟಿಗಟ್ಟಲೇ ರೈತರಿಗೆ ಶಾಕಿಂಗ್ ಸುದ್ದಿ; ಸರ್ಕಾರಿ ವೆಬ್ಸೈಟ್‌ನಿಂದಲೇ ರೈತರ ಆಧಾರ ಮಾಹಿತಿ ಲೀಕ್! ನಿಮ್ಮ ಖಾತೆ ಎಷ್ಟು ಸೇಫ್‌?

ನೈಋತ್ಯ ಮುಂಗಾರು ಕರ್ನಾಟಕದಲ್ಲಿ ಅಬ್ಬರಿಸಲಿದೆ ಎಂಬ ನಿರೀಕ್ಷೆ ಹುಸಿಯಾಗಿದೆ. 15 ದಿನಗಳ ಕಾಲ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗಿಲ್ಲ. ಆದರೆ ಜೂನ್‌ 19ರ ಒಳಗೆ ಬಹುತೇಕ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಅಲ್ಲಲ್ಲಿ ಜೋರು ಮಳೆಯಾಗುವ ಸಾಧ್ಯತೆ ಇದೆ. ಕೆಲವು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೊ ಅಲರ್ಟ್‌ ಘೋಷಿಸಲಾಗಿದೆ. ಮಂಗಳವಾರ ಸಂಜೆಯಿಂದಲೇ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯಾಗಿದೆ.

ರೈತರಿಗೆ ಗುಡ್ ನ್ಯೂಸ್: ಸರ್ಕಾರಿ ಭೂಮಿಯಲ್ಲಿ ಕೃಷಿ: ಕೃಷಿ ಆಕಾಂಕ್ಷಿಗಳಿಗೆ ವರದಾನ ಈ ಯೋಜನೆ

PM ಉಚಿತ ಹೊಲಿಗೆ ಯಂತ್ರ ಯೋಜನೆ; ಒಂದು ಅರ್ಜಿ ಸಲ್ಲಿಸಿ ಉಚಿತ ಹೊಲಿಗೆ ಯಂತ್ರ ಪಡೆಯಿರಿ..! ಈಗಲೇ ಅರ್ಜಿ ಸಲ್ಲಿಸಿ

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಮೈಸೂರು, ರಾಮನಗರ, ಮಂಡ್ಯ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ ಹಾಗೂ ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್‌ ನೀಡಿದೆ.

ಉತ್ತರ ಒಳನಾಡಿಗೂ ಸಾಧಾರಣ ಮಳೆ; ಮಳೆಯ ಜೊತೆಗೆ ಗಾಳಿಯು ಸುಮಾರು 30 ರಿಂದ 40 ಕಿ. ಮೀ. ವೇಗದಲ್ಲಿ ಬೀಸಲಿದೆ ಎಂದು ಅಂದಾಜಿಸಲಾಗಿದೆ. ತಾಪಮಾನದಲ್ಲಿ ಒಂದಷ್ಟು ಬದಲಾವಣೆಗಳು ಆಗಲಿದ್ದು, ಮೋಡ ಕವಿದ ವಾತಾವರಣ ಇರಲಿದೆ.

7th Pay : ಸಂಬಳದ ಹೊರತಾಗಿಯೂ ನೌಕರರಿಗೆ ದೊರೆಯಲಿದೆ ಲಾಭ! ಏನಿದು ಗೊತ್ತೆ!

EPFO: 6 ಕೋಟಿಗೂ ಹೆಚ್ಚು ಸರ್ಕಾರಿ ನೌಕರರಿಗೆ ಭರ್ಜರಿ ಸುದ್ದಿ; ಈ ದಿನದಂದು ನಿಮ್ಮ ಖಾತೆಗೆ ಬರಲಿದೆ ₹80,000!

ಈ ನಾಲ್ಕು ದಿನದ ಅವಧಿಯಲ್ಲಿ ಬೆಳಗಾವಿ, ಧಾರವಾಡ, ವಿಜಯಪುರ, ಹಾವೇರಿ, ಗದಗ, ದಾವಣಗೆರೆ, ರಾಯಚೂರು, ಕಲಬುರಗಿ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಇಲ್ಲವೇ ಹಗುರ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಎರಡು ವಾರದ ಹಿಂದೆ ಮಳೆ ಅಬ್ಬರಿಸಿದ್ದನ್ನು ಕಂಡ ರೈತರು ಭೂಮಿಯಲ್ಲಿನ ತೇವಾಂಶ ಇರುವಾಗಲೇ ಉಳುಮೆ ಮಾಡಿದ್ದರು. ನಂತರ ಎಲ್ಲಿಯೂ ಮಳೆ ಬಾರದ ಹಿನ್ನೆಲೆ ರೈತರು ಕಂಗಾಲಾಗಿದ್ದರು. ಇದೀಗ ಪುನಃ ಮಳೆಯ ಸೂಚನೆ ಕಂಡು ರೈತರು ಸಂತಸಗೊಂಡಿದ್ದಾರೆ.

Published On: 17 June 2022, 11:59 AM English Summary: Rain Alert: Monsoon set for June 19

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.