News

ನಾಳೆಯಿಂದ ರಾಜ್ಯದ ಕೆಲವು ಕಡೆ ಮಳೆ ಸಾಧ್ಯತೆ? ಯೆಲ್ಲೋ ಅಲರ್ಟ್ ಘೋಷಣೆ

03 November, 2020 8:56 AM IST By:

ಅರಬ್ಬಿಸಮುದ್ರ ಹಾಗೂ ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಪರಿಣಾಮ ನವೆಂಬರ್ 4 ರಿಂದ ಮೂರು ದಿನಗಳ ಕಾಲ ರಾಜ್ಯದಲ್ಲಿ ಮತ್ತೆ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ನ. 5 ಮತ್ತು 6 ರಂದು ಗುಡುಗು ಸಹಿತ ಭಾರಿ ಮಳೆ ಸುರಿಯುವ ಸಂಭವವಿದ್ದು,  ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಹಾಗೂ ಸಾಹನ ಜಿಲ್ಲೆಗಳ ಕೆಲವು ಕಡೆಗಳಲ್ಲಿ ನ. 5 ಮತ್ತು 6 ರಂದು ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ.

ರಾಜ್ಯದಲ್ಲಿ ಈಗಾಗಲೇ ಹಿಂಗಾರು ಪ್ರವೇಶವಾಗಿದೆ. ಮುಂಗಾರು ಋತುವಿನಲ್ಲಿ ಸುರಿದ ಅತೀ ಮಳೆಯಿಂದಾಗಿ ನೆಮ್ಮದಿಯ ಉಸಿರು ಬಿಟ್ಟು ಈಗಾಗಲೇ ರೈತರು ಹಿಂಗಾರು ಬಿತ್ತನೆಯಲ್ಲಿ ತೊಡಗಿದ್ದಾರೆ. ಹಿಂಗಾರು ಬಿತ್ತನೆಯಲ್ಲಿ ತೊಡಗಿರುವ ರೈತರಿಗೆ ಮತ್ತೆ ನಾಲ್ಕರಿಂದ ಮಳೆಯಾಗುವ ಮುನ್ಸೂಚನೆ ನೀಡಿದ್ದರಿಂದ ಮತ್ತೆ ಆತಂಕ ಶುರವಾಗಿದೆ.

ವಾತಾವರಣದಲ್ಲಿ ದಿಢೀರ್ ಬದಲಾವಣೆಗಳಾಗುತ್ತಿದ್ದು, ನವೆಂಬರ್ 4 ರ ನಂತರ ರಾಜ್ಯದಲ್ಲಿ ಮತ್ತೊಂದು ಸುತ್ತಿನ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬಂಗಾಳಕೊಲ್ಲಿಯಲ್ಲಿ ಎರಡ್ಮೂರು ಮೇಲ್ಮೈ ಸುಳಿಗಾಳಿಗಳು ಉಂಟಾಗಿವೆ.

ಅಲ್ಲದೆ ಅರಬ್ಬಿಸಮುದ್ರದಲ್ಲಿ ಕೇರಳ ಹಾಗೂ ಮಹಾರಾಷ್ಟ್ರ ತೀರ ಪ್ರದೇಶದಲ್ಲಿ  ಮೇಲ್ಮೈ ಸುಳಿಗಾಳಿ ಉಂಟಾಗಿದೆ. ಇದರಿಂದ ರಾಜ್ಯದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಭಾಗಶ ಮೋಡ ಕವಿದ ವಾತಾವರಣ ಕಂಡುಬರಲಿದ್ದು, ಇನ್ನೆರಡು ದಿನ ಒಣಹವೆ ಕಂಡಬಂದಿದೆ. ಚದುರಿದಂತೆ ಅಲ್ಲಲ್ಲಿ ಸಾದಾರಣ ಮಳೆಯಾಗಲಿದೆ. ನವೆಂಬರ್ 4 ರ ನಂತರ ಉತ್ತರ ಕರ್ನಾಟಕದ ಹೊರತುಪಡಿಸಿ ರಾಜ್ಯದ ಬಹುತೇಕ ಭಾಗಗಳಲ್ಲಿ ಚದುರಿದಂತೆ ಹಗುರದಿಂದ ಮಳೆಯಾಗುವ ಸಾದ್ಯತೆಯಿದೆ.