News

ಇಂದಿನಿಂದ ರಾಜ್ಯದ ವಿವಿಧೆಡೆ ತುಂತುರು ಮಳೆ ಸಾಧ್ಯತೆ

31 October, 2020 10:23 AM IST By:

ಉತ್ತರ ತಮಿಳುನಾಡು ಹಾಗೂ ದಕ್ಷಿಣ ಆಂಧ್ರಪ್ರದೇಶದ ಕರಾವಳಿಯ ಭಾಗದಲ್ಲಿ ಮೈಲ್ಮೈ ಸುಳಿಗಾಳಿ ಇರುವ ಹಿನ್ನೆಲೆಯಲ್ಲಿ  ಅ. 31 ರಿಂದ ನವೆಂಬರ್ 4 ರವರೆಗೆ ತುಂತು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಒಳನಾಡಿನಲ್ಲಿ ಮೋಡ ಕವಿದ ವಾತಾವರಣ ಮುಂದುವರೆಯಲಿದ್ದು, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ ಮತ್ತು ತುಮಕೂರಿನಲ್ಲಿ ಸಣ್ಣಪ್ರಮಾಣದ ಮಳೆಯಾಗುವ ಸಂಭವವಿದೆ.

ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಂದು ವಾರ ಅಲ್ಲಲ್ಲಿ ತುಂತು ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿಯಲ್ಲಿ ನವೆಂಬರ್ 2 ರಿಂದ 4ರವರೆಗೆ ತುಂತುರು ಮಳೆಯಾಗಲಿದೆ. ಇದೇ ಅವಧಿಯಲ್ಲಿ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಕಳದ ವಾರ ಸುರಿದ ಭಾರಿ ಮಳೆಯಿಂದಾಗಿ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಜಲಾವೃತಗೊಂಡಿದ್ದ ಜನಜೀವನ ಅಸ್ತವ್ಯಸ್ತಗೊಂಡಿದ್ದ ಜನಜೀವನ ಇನ್ನೂ ಸಹಜ ಸ್ಥಿತಿಗೆ ಬಂದಿಲ್ಲ. ಆದರೆ ಮುಂದಿನ ಒಂದು ವಾರ ತುಂತೂರು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯಿಂದ ಬೆಳೆಗಳಿಗೆ ರೋಗಗಳು ತಗಲುವ ಸಾಧ್ಯತೆಯಿದೆ ಎಂದು ತಜ್ಞರ ಅಭಿಪ್ರಾಯವಾಗಿದೆ.

ಈಗಾಗಲೇ ಮಳೆ ಮತ್ತು ಪ್ರವಾಹದಿಂದಾಗಿ ರೈತರ ಬೆಳೆ ಅಪಾರ ಹಾನಿಯಾಗಿದೆ. ತೊಗರಿ, ಹೆಸರು, ಉದ್ದು, ಗೋವಿನಜೋಳ, ಈರುಳ್ಳಿ ಸೇರಿದಂತೆ ಇತರ ಬೆಳೆಗಳು ಹಾಳಾಗಿವೆ. ಇನ್ನೂ ಮುಂದೆ ಒಂದು ವಾರ ತುಂತುರು ಮಳೆ ಸುರಿದರೆ ಬೆಳೆಗಳು ರೋಗಗಳಿಗೆ ತುತ್ತಾಗುವ ಸಾಧ್ಯತೆಯಿದೆ.