ಬಂಗಾಳ ಕೊಲ್ಲಿ ಹಾಗೂ ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವುದರಿಂದ ಕರ್ನಾಟಕ, ತಮಿಳುನಾಡು, ಕೇರಳ ರಾಜ್ಯದಲ್ಲಿ ಜನವರಿ ತಿಂಗಳ ಮೊದಲ ವಾರದಲ್ಲಿ ಈಗಾಗಲೇ ಮಳೆಯಾಗಿದೆ. ಮತ್ತೇ ಈಗ ಮೂರು ದಿನಗಳ ಕಾಲ ತಮಿಳುನಾಡು, ಕೇರಳ ಮತ್ತು ಪುದಚರಿಯಲ್ಲಿ ಮಳೆಯಾಗುವ ಮುನ್ನೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಹೌದು ಜನವರಿ 13 ರಿಂದ 15 ರವರೆಗೆ ಮೂರು ದಿನಗಳ ಕಾಲ ತಮಿಳುನಾಡು, ಕೇರಳ ಮತ್ತು ಪುದುಚೇರಿಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ
ಮುಂದಿನ 2-3 ದಿನಗಳಲ್ಲಿ ತಮಿಳುನಾಡು, ಪುದುಚೇರಿ, ಕರೈಕಲ್, ಮಾಹೇ, ಕೇರಳ, ಮತ್ತು ಲಕ್ಷದ್ವೀಪಗಳಲ್ಲಿ ಪ್ರತ್ಯೇಕವಾದ ಭಾರಿ ಗುಡುಗು ಮತ್ತು ಮಿಂಚಿನೊಂದಿಗೆ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ.
ಜನವರಿ 15 ರ ನಂತರ 5 ದಿನಗಳಲ್ಲಿ ವಾಯುವ್ಯ ಭಾರತದಲ್ಲಿ ಪ್ರತ್ಯೇಕವಾಗಿರುವ ಸ್ಥಳಗಳಲ್ಲಿ ದಟ್ಟವಾದ ಮಂಜಿನವಾತಾವರಣ ಇರಲಿದೆ. ಇದರಿಂದಾಗಿ ಶೀತಗಾಳಿ ಬೀಸುವ ಸಾಧ್ಯತೆಯಿದೆ.