ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿಯಿಂದ ರಾಜ್ಯದಲ್ಲಿ ಏಪ್ರೀಲ್ 29 ರಿಂದ ಮೇ 3ರವರೆಗೆ ಮಳೆಯಾಗಲಿದೆ. (ಏಪ್ರೀಲ್ 29) ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಹಾಗೂ ಹಾಸನದಲ್ಲಿ ಭಾರಿ ಮಳೆಯಾಗಲಿರುವುದರಿಂದ ಈ ನಾಲ್ಕು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಬೆಳಗ್ಗಿನ ಸಮಯದಲ್ಲಿ ಬಿಸಿಲು ಕಾಣಿಸಿಕೊಂಡರೂ ಸಂಜೆ ಸಮಯದಲ್ಲಿ ಮಳೆಯಾಗಲಿದೆ. ಹಾಗಾಗಿ ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ವಿಜಯಪುರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಮೈಸೂರು, ಮಂಡ್ಯ, ಕೋಲಾರದಲ್ಲೂ ಮಳೆಯಾಗಲಿದೆ.
ಉಡುಪಿ, ದಕ್ಷಿಣಕನ್ನಡ, ಉತ್ತರ ಕನ್ನಡದಲ್ಲಿ ಮುಂದಿನ 5 ದಿನ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ಮೈಸೂರು, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳಲ್ಲಿ ಮುಂದಿನ 48 ತಾಸುಗಳಲ್ಲಿ ಸಾಧಾರಣ ಮಳೆಯಾಗಲಿದೆ.
ಏಪ್ರಿಲ್ 30ರಿಂದ ಮೇ 1ರವರೆಗೆ ಮಹಾರಾಷ್ಟ್ರ, ತಮಿಳುನಾಡು, ಜಮ್ಮು ಮತ್ತು ಕಾಶ್ಮೀರ, ಹಿಮಾಚಲಪ್ರದೇಶ, ಹರ್ಯಾಣ, ಲಡಾಖ್, ತೆಲಂಗಾಣ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಮಳೆಯಾಗಲಿದೆ.
ಕಲಬುರಗಿ ಜಿಲ್ಲೆಯಲ್ಲಿ ಬೆಳಗ್ಗೆಯಿಂದಲೇ ಮೋಡಕವಿದ ವಾತಾವರಣವಿತ್ತು. ಮಧ್ಯಾಹ್ನ ಮತ್ತು ಸಾಯಂಕಾಲ ಅಲ್ಲಲ್ಲಿ ಚದುರಿದ ಮಳೆಯಾಯಿಯಿತು.