ರಾಜ್ಯದ ವಿವಿಧೆಡೆ ಮಳೆ ಮುಂದುವರಿದಿದ್ದು, ಏಪ್ರಿಲ್ 2ರ ವರೆಗೆ ಧಾರಾಕಾರ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಅಲ್ಲಲ್ಲಿ ಮಳೆ ಆಗುತ್ತಿದೆ. ದಕ್ಷಿಣ ಒಳನಾಡಿ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣಹವೆ ಇತ್ತು.
ಇನ್ನು ಚಾಮರಾಜನಗರದಲ್ಲಿ 1 ಸೆಂ. ಮೀ ಮಳೆ ಆಗಿರುವುದು ವರದಿ ಆಗಿದೆ.
ರಾಜ್ಯದಲ್ಲಿ ಅತಿ ಗರಿಷ್ಠ ಉಷ್ಣಾಂಶ 38.7 ಡಿಗ್ರಿ ಸೆಲ್ಸಿಯಸ್ ಕಲಬುರಗಿಯಲ್ಲಿ ದಾಖಲಾಗಿದೆ.
ಇನ್ನು ರಾಜ್ಯದಲ್ಲಿ ಕನಿಷ್ಠ ಉಷ್ಣಾಂಶ 14.2 ಡಿಗ್ರಿ ಸೆಲ್ಸಿಯಸ್ ಬಾಗಲಕೋಟೆಯಲ್ಲಿ ದಾಖಲಾಗಿದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.
ಏಪ್ರಿಲ್ 2ರ ವರೆಗೆ ಈ ಭಾಗದಲ್ಲಿ ಮಳೆ
ದಕ್ಷಿಣ ಒಳನಾಡಿನ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಚಿಕ್ಕಬಳ್ಳಾಪುರ, ಕೋಲಾರ, ಚಾಮರಾಜನಗರ, ರಾಮನಗರ,
ತುಮಕೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ.
ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಅಲ್ಲಲ್ಲಿ ಮಳೆ ಆಗುವ ಸಾಧ್ಯತೆ ಇದೆ.
ಉಳಿದಂತೆ ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮುಂದಿನ 24 ಗಂಟೆಗಳಲ್ಲಿ
ದಕ್ಷಿಣ ಒಳನಾಡಿನ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಚಿಕ್ಕಬಳ್ಳಾಪುರ, ಕೋಲಾರ, ಚಾಮರಾಜನಗರ, ರಾಮನಗರ, ತುಮಕೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಗರಿಷ್ಠ ಉಷ್ಣಾಂಶ ಇಲ್ಲ
ಕನಿಷ್ಠ ಉಷ್ಣಾಂಶದ ಎಚ್ಚರಿಕೆ
ಕನಿಷ್ಠ ಉಷ್ಣಾಂಶವು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್‌ನ ವರೆಗೆ ಕಡಿಮೆ ಆಗುವ ಸಾಧ್ಯತೆ ಇದೆ.
ಮುಂದಿನ 48 ಗಂಟೆಗಳಲ್ಲಿ ಕನಿಷ್ಠ ಉಷ್ಣಾಂಶವು ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ 3-4 ಡಿಗ್ರಿ ಸೆಲ್ಸಿಯಸ್
ಮತ್ತು ಕರಾವಳಿಯ ಒಂದೆರಡು ಕಡೆಗಳಲ್ಲಿ 2-3 ಡಿಗ್ರಿ ಸೆಲ್ಸಿಯಸ್ ಕಡಿಮೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.
ಉಳಿದಂತೆ ರಾಜ್ಯದ ಹವಾಮಾನದಲ್ಲಿ ಹೆಚ್ಚಿನ ಬದಲಾವಣೆ ಇಲ್ಲ.
ಬೆಂಗಳೂರು ಮತ್ತು ಬೆಂಗಳೂರು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ
ಮುಂದಿನ 24 ಗಂಟೆಗಳಲ್ಲಿ ಬೆಂಗಳೂರು ನಗರದಲ್ಲಿ ನಿರ್ಮಲ ಆಕಾಶವಿದ್ದು, ಸಂಜೆ ಮತ್ತು ರಾತ್ರಿ ವೇಳೆಗೆ ಮೋಡ ಕವಿದ ವಾತಾವರಣ ಇರಲಿದೆ.
ಹಗುರದಿಂದ ಮಳೆ ಆಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶವು 34 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶವು 22 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ.
ಇನ್ನು ಮುಂದಿನ 48 ಗಂಟೆಗಳಲ್ಲಿ ಬೆಂಗಳೂರು ನಗರದಲ್ಲಿ ನಿರ್ಮಲ ಆಕಾಶವಿದ್ದು, ಸಂಜೆ ಮತ್ತು ರಾತ್ರಿ ವೇಳೆಗೆ ಮೋಡ ಕವಿದ ವಾತಾವರಣ ಇರಲಿದೆ.
ಹಗುರದಿಂದ ಮಳೆ ಆಗುವ ಸಾಧ್ಯತೆ ಇದೆ.
ಗರಿಷ್ಠ ಉಷ್ಣಾಂಶವು 34 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶವು 23 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.