1. ಸುದ್ದಿಗಳು

Heavy Rain ರಾಜ್ಯದ ವಿವಿಧ ಭಾಗದಲ್ಲಿ ಮುಂದುವರಿದ ಮಳೆ!

Hitesh
Hitesh
Rain continues to rain in different parts of the state!

Rain ರಾಜ್ಯದ ವಿವಿಧ ಭಾಗದಲ್ಲಿ ಮಳೆ ಮುಂದುವರಿದಿದ್ದು, ಬುಧವಾರ ಹಾಗೂ ಗುರುವಾರ ಅಲ್ಲಲ್ಲಿ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕಳೆದ 24 ಗಂಟೆಗಳಲ್ಲಿ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ (Rain) ಮಳೆಯಾಗಿದೆ. ಇನ್ನು ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣಹವೆ ಇತ್ತು.

ಕುಣಿಗಲ್‌ನಲ್ಲಿ 6 ಸೆಂ.ಮೀ, ಸರಗೂರು 4 ಸೆಂ.ಮೀ,ಕೊಣನೂರು 2 ಸೆಂ.ಮೀ, ಮದ್ದೂರು, ಚಿಕ್ಕನಹಳ್ಳಿ ಎಡಬ್ಲ್ಯುಎಸ್‌, ಸಿರಾದಲ್ಲಿ ತಲಾ 1 ಸೆಂ.ಮೀ ಮಳೆಯಾಗಿರುವುದು (Rain) ವರದಿ ಆಗಿದೆ.

ರಾಜ್ಯದಲ್ಲಿ ಅತೀ ಗರಿಷ್ಠ ಉಷ್ಣಾಂಶ 39.5 ಡಿಗ್ರಿ ಸೆಲ್ಸಿಯಸ್‌ ಕಲಬುರಗಿಯಲ್ಲಿ ದಾಖಲಾಗಿದೆ.

ರಾಜ್ಯದಲ್ಲಿ ಮಳೆ ಮುನ್ಸೂಚನೆ Weather Updates

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ (Bengaluru), ಚಾಮರಾಜನಗರ, ಚಿಕ್ಕಬಳ್ಳಾಪುರ,

ಚಿತ್ರದುರ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ತುಮಕೂರು, ವಿಜಯನಗರ, ರಾಮನಗರ ಜಿಲ್ಲೆಯ ಕೆಲವು ಕಡೆಗಳಲ್ಲಿ

ಹಾಗೂ ಕರಾವಳಿಯ ಎಲ್ಲ ಜಿಲ್ಲೆಗಳ ಮತ್ತು ಉತ್ತರ ಒಳನಾಡಿನ ಬೀದರ್‌, ಬೆಳಗಾವಿ, ರಾಯಚೂರು, ಕಲಬುರಗಿ, ಯಾದಗಿರಿ ಜಿಲ್ಲೆಗಳ

ಒಂದೆರಡು ಕಡೆಗಳಲ್ಲಿ ಮಿಂಚು ಗುಡುಗು ಸಹಿತ ಧಾರಾಕಾರ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ. 

ಮುಂದಿನ 48 ಗಂಟೆಗಳಲ್ಲಿ  Weather Updates

ರಾಜ್ಯದಲ್ಲಿ ಮುಂದಿನ 48 ಗಂಟೆಗಳಲ್ಲಿ ದಕ್ಷಿಣ ಒಳನಾಡಿನ ಎಲ್ಲ ಜಿಲ್ಲಗಳ ಕೆಲವು ಕಡೆಗಳಲ್ಲಿ; ಕರಾವಳಿಯ ಎಲ್ಲ ಜಿಲ್ಲೆಗಳು

ಮತ್ತು ಉತ್ತರ ಒಳನಾಡಿನ ಬೀದರ್‌ ಬಾಗಲಕೋಟೆ, ಹಾವೇರಿ, ರಾಯಚೂರು, ಕೊಪ್ಪಳ, ಕಲಬುರಗಿ, ಯಾದಗಿರಿ,

ವಿಜಯಪುರ ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಮಿಂಚು ಗುಡುಗು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ.

ಇನ್ನು ಉತ್ತರ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.

ಮುಂದಿನ 24 ಗಂಟೆಗಳು

ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಅಲ್ಲದೇ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಬಿರುಗಾಳಿ ಸಹಿತ ಗುಡುಗು ಮಿಂಚಿನ ಸಾಧ್ಯತೆ ಇದ್ದು,

ಗಾಳಿಯ ವೇಗವು ಗಂಟೆಗೆ 40ರಿಂದ 50 ಕಿ.ಮೀ ಇರುವ ಸಾಧ್ಯತೆ ಇದೆ.

ಇನ್ನು ದಕ್ಷಿಣ ಒಳನಾಡಿನ ಎಲ್ಲ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚು ಸಾಧ್ಯತೆ ಇದೆ.

ಇನ್ನು (Weather Updates in Bengaluru) ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದ್ದು,

ಸಂಜೆ, ರಾತ್ರಿ ಸಮಯದಲ್ಲಿ ಹಗುರದಿಂದ ಸಾಧಾರಣ ಮಳೆ ಹಾಗೂ ಗುಡುಗು ಸಹಿತ

ಮಳೆಯಾಗುವ ಬಹಳಷ್ಟು ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.  

Pic Credits: pixabay

Published On: 26 April 2023, 10:09 AM English Summary: Rain continues to rain in different parts of the state!

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.