News

Rain Fall ರಾಜ್ಯದಲ್ಲಿ ಇನ್ನೂ ಎರಡು ದಿನ ಮಳೆ!

24 March, 2023 9:42 AM IST By: Hitesh
Rain Fall two more days of rain in the state!

ರಾಜ್ಯದಲ್ಲಿ ಇನ್ನೂ ಎರಡು ದಿನಗಳ ಕಾಲ ಧಾರಾಕಾರ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.

ರಾಜ್ಯದ ದಕ್ಷಿಣ ಒಳನಾಡಿನ ವಿವಿಧೆಡೆ ಹಾಗೂ ಕರಾವಳಿ ಮತ್ತು ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆ ಆಗುವ ಸಾಧ್ಯತೆ ಇದೆ.

ದೇಶದ ರಾಜಧಾನಿ ದೆಹಲಿ, ಕರ್ನಾಟಕ ಹಾಗೂ ತಮಿಳುನಾಡು ಸೇರಿದಂತೆ ವಿವಿಧ ರಾಜ್ಯದಲ್ಲಿ ಮಳೆ ಆಗುತ್ತಿದ್ದು, ಇನ್ನೂ ಎರಡು ದಿನಗಳ ಕಾಲ ಮಳೆ

ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.  

ವಿದ್ಯಾರ್ಥಿಗಳಿಗೆ ಖುಷಿ ಸುದ್ದಿ: ನಿಮ್ಮ ಖಾತೆಗೆ ಇಂದು ಬೀಳಲಿದೆ ವಿದ್ಯಾನಿಧಿ ಹಣ

ಮುಂದಿನ 48 ಗಂಟೆಗಳ ಅವಧಿಯಲ್ಲಿ ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮೈಸೂರು ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.

ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣಹವೆ ಇರುವ ಬಹಳಷ್ಟು ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.

ಇದನ್ನೂ ಓದಿ -₹2800 ಕೋಟಿ ರೂಪಾಯಿಯ ನೀರಾವರಿ ಯೋಜನೆಗಳ ಪ್ರಾರಂಭ: ಸಿಎಂ ಬೊಮ್ಮಾಯಿ

ಇನ್ನು ರಾಜ್ಯದಲ್ಲಿ ಅತೀ ಗರಿಷ್ಠ ಉಷ್ಣಾಂಶವು 36 ಡಿಗ್ರಿ ಸೆಲ್ಸಿಯಸ್‌ ಕಲಬುರಗಿಯಲ್ಲಿ ಹಾಗೂ ಅತೀ ಕನಿಷ್ಠ ಉಷ್ಣಾಂಶವು 16 ಡಿಗ್ರಿ ಸೆಲ್ಸಿಯಸ್‌ ಬಾಗಲಕೋಟೆಯಲ್ಲಿ ದಾಖಲಾಗಿರುವುದು ವರದಿ ಆಗಿದೆ.

ಗರಿಷ್ಠ ಉಷ್ಣಾಂಶದ ಎಚ್ಚರಿಕೆ:

ಮುಂದಿನ 48 ಗಂಟೆಗಳಲ್ಲಿ ಗರಿಷ್ಠ ಉಷ್ಣಾಂಶವು ಕರಾವಳಿಯ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್‌ ಹೆಚ್ಚಾಗುವ ಸಾಧ್ಯತೆ ಇದೆ.

ಉತ್ತರ ಒಳನಾಡಿನ ಹಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2ರಿಂದ 3 ಡಿಗ್ರಿ ಸೆಲ್ಸಿಯಸ್‌ ಕಡಿಮೆಯಾಗುವ ಸಾಧ್ಯತೆ ಇದೆ.

ಕನಿಷ್ಠ ಉಷ್ಣಾಂಶದ ಎಚ್ಚರಿಕೆ

ಕನಿಷ್ಠ ಉಷ್ಣಾಂಶವು ಕರಾವಳಿ ಹಾಗೂ ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ 3ರಿಂದ 4 ಡಿಗ್ರಿ ಸೆಲ್ಸಿಯಸ್‌ ಕಮ್ಮಿಯಾಗುವ ಸಾಧ್ಯತೆ ಇದೆ.

MoU sign : ಎಚ್‌ಡಿಎಫ್‌ಸಿ ಬ್ಯಾಂಕ್‌ನೊಂದಿಗೆ MOU ಸಹಿ ಹಾಕಿದ ಕೃಷಿ ಜಾಗರಣ

ರಾಜ್ಯದಲ್ಲಿ ಇನ್ನೂ ಎರಡು ದಿನ ಮಳೆ

ಭಾರೀ ಪ್ರಮಾಣದಲ್ಲಿ ಕರಾವಳಿ ಪ್ರದೇಶದಲ್ಲಿ ಮಳೆ ಆಗುವ ಸಾಧ್ಯತೆ ಇಲ್ಲ. ಹೀಗಾಗಿ, ಮೀನುಗಾರರಿಗೆ ಯಾವುದೇ ಮುನ್ನೆಚ್ಚರಿಕೆಯನ್ನು ನೀಡಿಲ್ಲ.

ರಾಜ್ಯದಲ್ಲಿ ಅಲ್ಲಲ್ಲಿ ಮಳೆ ಆಗುವುದನ್ನು ಹೊರತುಪಡಿಸಿ, ಉಳಿದಂತೆ ಬಹುತೇಕ ಭಾಗದಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆ ಇದೆ.

ಬೆಂಗಳೂರು ಸುತ್ತಮುತ್ತಲಿನ ಪ್ರದೇಶದಲ್ಲಿ

ಮುಂದಿನ 24 ಗಂಟೆಗಳಲ್ಲಿ ಬೆಂಗಳೂರು ನಗರದಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ.

ಗರಿಷ್ಠ ಉಷ್ಣಾಂಶ 34 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್‌ ಇರುವ ಸಾಧ್ಯತೆ ಇದೆ.

ಮುಂದಿನ 48 ಗಂಟೆಗಳಲ್ಲಿ ಬೆಂಗಳೂರು ನಗರದಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ.

ಗರಿಷ್ಠ ಉಷ್ಣಾಂಶ 34 ಮತ್ತು ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್‌ ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.  

2 ಲಕ್ಷ ಹೊಸ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಸಾಲ ಸಂಘ ಸ್ಥಾಪಿಸಲು ಸರ್ಕಾರದ ಅನುಮೋದನೆ