ರಾಜ್ಯದ ವಿವಿಧ ಭಾಗದಲ್ಲಿ ಮಳೆ ಮುಂದುವರಿದಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ವಿವಿಧೆಡೆ ಮಳೆ ಮುಂದುವರಿದಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ದಕ್ಷಿಣ ಭಾರತದ ವಿವಿಧ ರಾಜ್ಯಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ.
ಅಲ್ಲದೇ ಹಿಂಗಾರು ಮಳೆಯ ಭಾಗವಾಗಿ ಕರ್ನಾಟಕದ 17ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಡಿಸೆಂಬರ್ 5ರ ವರೆಗೂ ಮಳೆ ಮುಂದುವರಿಯಲಿದೆ
ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಉತ್ತರ ಒಳನಾಡಿನ
ಬೆಳಗಾವಿ, ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ ಭಾಗದಲ್ಲಿ ದಕ್ಷಿಣ ಒಳನಾಡಿ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ
ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ತುಮಕೂರು ಹಾಗೂ ವಿಜಯನಗರದಲ್ಲಿ ಮಳೆಯಾಗಲಿದೆ
ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇನ್ನು ರಾಜ್ಯದಲ್ಲಿ ಗುರುವಾರ ಹಾಗೂ ಶುಕ್ರವಾರ ಮಳೆ ಮುಂದುವರಿಯಲಿದೆ. ಅಲ್ಲದೇ ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ;
ಕರಾವಳಿ ಮತ್ತು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಅಲ್ಲದೇ ಬೆಂಗಳೂರಿನಲ್ಲೂ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.
ತಮಿಳುನಾಡಿನಲ್ಲಿ ಧಾರಾಕಾರ ಮಳೆ
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ದಕ್ಷಿಣ ಭಾರತದ
ವಿವಿಧ ರಾಜ್ಯಗಳಲ್ಲಿ ಧಾರಾಕಾರ ಮಳೆ ಮುಂದುವರಿಯುತ್ತಿದೆ.
ಅಲ್ಲದೇ ತಮಿಳುನಾಡಿನ ವಿವಿಧ ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು,
ಹಲವೆಡೆ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.