News

Weather Report: ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮತ್ತೇ ಗುಡುಗು ಸಹಿತ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಎಚ್ಚರಿಕೆ

23 May, 2023 9:50 AM IST By: Maltesh
Again Rain in karnataka.. weather report karnataka

24 ನೇ ಮೇ 2023 ರ ಬೆಳಗ್ಗೆ ವರೆಗಿನ ರಾಜ್ಯದ ಮಳೆ ಮುನ್ಸೂಚನೆ ಹೀಗಿದೆ.

ಮುಂದಿನ 24 ಘಂಟೆಗಳು ಹವಾಮಾನ ವರದಿ: ದಕ್ಷಿಣ ಒಳನಾಡಿನ ಎಲ್ಲ ಜಿಲ್ಲೆಗಳ ಹಲವು ಕಡೆಗಳಲ್ಲಿ ಕರಾವಳಿ ಮತ್ತು ಉತ್ತರ ಒಳನಾಡಿನ ಎಲ್ಲ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಗುಡುಗುಸಹಿತ ಮಳೆಯಾಗುವ ಸಾಧ್ಯತೆ ಇದೆ.

ಮುಂದಿನ 48 ಘಂಟೆಗಳು

ದಕ್ಷಿಣ ಒಳನಾಡಿನ ಎಲ್ಲ ಜಿಲ್ಲೆಗಳ ಹಲವು ಕಡೆಗಳಲ್ಲಿ; ಕರಾವಳಿಯ ಎಲ್ಲ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ರಾಯಚೂರು, ಯಾದಗಿರಿ, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆಗುಡುಗುಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.

ಭಾರೀ ಮಳೆ ಮುನ್ನೆಚ್ಚರಿಕೆ:

ಮುಂದಿನ 24 ಘಂಟೆಗಳು: ರಾಜ್ಯದಾದ್ಯಂತ ಒಂದೆರಡು ಕಡೆಗಳಲ್ಲಿ ಬಿರುಗಾಳಿಸಹಿತ ಗುಡುಗು ಮಿಂಚಿನ ಸಾಧ್ಯತೆ ಇದ್ದು, ಗಾಳಿಯ ವೇಗವು ಘಂಟೆಗೆ 30 ರಿಂದ 40 ಕಿ.ಮೀ. ಇರುವ ಸಾಧ್ಯತೆ ಇದೆ.

ಮುಂದಿನ 48 ಘಂಟೆಗಳು: ರಾಜ್ಯದಾದ್ಯಂತ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚಿನ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶದ ಮುನ್ಸೂಚನೆಯು  ಮುಂದಿನ 48 ಘಂಟೆಗಳು  ಗರಿಷ್ಠ ಉಷ್ಣಾಂಶವು ರಾಜ್ಯದ ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ.

ಮೀನುಗಾರರಿಗೆ ಯಾವುದೇ ಎಚ್ಚರಿಕೆಯನ್ನು ನೀಡಲಾಗಿಲ್ಲ.

ಮುಂದಿನ 24 ಘಂಟೆಗಳ ಹೊರನೋಟ: ರಾಜ್ಯದ ಹವಾಮಾನದಲ್ಲಿ ಹೆಚ್ಚಿನ ಬದಲಾವಣೆ ಇಲ್ಲ.

24 ನೇ ಮೇ 2023 ರ ಬೆಳಗ್ಗೆವರೆಗಿನ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ:

ಮುಂದಿನ 24 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಸಂಜೆ ಅಥವಾ ರಾತ್ರಿಯ ವೇಳೆಗೆ ಹಗುರದಿಂದ ಸಾಧಾರಣ ಮಳೆ/ಗುಡುಗುಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 32 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿರುತ್ತದೆ.

ಮುಂದಿನ 48 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಸಂಜೆ ಅಥವಾ ರಾತ್ರಿಯ ವೇಳೆಗೆ ಹಗುರದಿಂದ ಸಾಧಾರಣ ಮಳೆ/ಗುಡುಗುಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 33 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿರುತ್ತದೆ.