 
            ರಾಜ್ಯದ ಉತ್ತರ ಕರ್ನಾಟಕದ ಭಾಗದಲ್ಲಿ ಬಿಸಿಲಿನ ಝಳ ಹೆಚ್ಚಳವಾಗಿದ್ದು, ಜನ ಹೈರಾಣಾಗಿದ್ದಾರೆ.
ರಾಜ್ಯದ ಯಾದಗಿರಿ, ಕಲುಬರಗಿ, ಬೀದರ, ಬಳ್ಳಾರಿ, ಹೊಸಪೇಟೆ ಹಾಗೂ ಬಾಗಲಕೋಟೆ ಸೇರಿದಂತೆ ವಿವಿಧ
ಭಾಗದಲ್ಲಿ ಗರಿಷ್ಠ ತಾಪಮಾನ ಗಣನೀಯ ಪ್ರಮಾಣದಲ್ಲಿ ಹೆಚ್ಚಳವಾಗಿದೆ.
ಬಳ್ಳಾರಿ ಜಿಲ್ಲೆಯಲ್ಲಿ ಗರಿಷ್ಠ ತಾಪಮಾನವು 42 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಕೆಲವು ಭಾಗದಲ್ಲಿ 43 ಡಿಗ್ರಿ ಸೆಲ್ಸಿಯಸ್‌ನ ವರೆಗೂ ತಾಪಮಾನ ಮುಟ್ಟಿದೆ.
ಇನ್ನು ಬೀದರನಲ್ಲೂ 43.3 ಡಿಗ್ರಿ ಸೆಲ್ಸಿಯಸ್‌ನವರೆಗೆ ಗರಿಷ್ಠ ತಾಪಮಾನ ಮುಟ್ಟಿದೆ.
ವಿಜಯಪುರ, ಕಲಬುರಗಿ, ಯಾದಗಿರಿಯಲ್ಲೂ 42 ಡಿಗ್ರಿ ಸೆಲ್ಸಿಯಸ್‌ಗೂ ಹೆಚ್ಚು ತಾಪಮಾನ ದಾಖಲಾಗಿದ್ದು,
ಬಿಸಿಲಿನ ಝಳ ಜನರನ್ನು ಹೈರಾಣಾಗಿಸಿದೆ. ರಾಯಚೂರಿನಲ್ಲೂ ಬಿಸಿಲಿನ ಝಳ ಹೆಚ್ಚಾಗಿದೆ
ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ವರದಿ ತಿಳಿಸಿದೆ.
ಇನ್ನು ದಕ್ಷಿಣ ಒಳನಾಡಿನಲ್ಲಿ ಮಳೆ ಮುಂದುವರಿದಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ದಕ್ಷಿಣ ಒಳನಾಡಿನ
ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿದಿತ್ತು.
ಸೆಂ.ಮೀ ಪ್ರಮಾಣದಲ್ಲಿ ಮಳೆಯಾಗಿರುವುದು ವರದಿ ಆಗಿಲ್ಲ.
ಇನ್ನು ರಾಜ್ಯದಲ್ಲಿ ಅತೀ ಗರಿಷ್ಠ ಉಷ್ಣಾಂಶವು (ಕಳೆದ 24 ಗಂಟೆಯ ಅವಧಿಯಲ್ಲಿ) ಅತೀ ಹೆಚ್ಚು ಕಲಬುರಗಿಯಲ್ಲಿ ದಾಖಲಾಗಿದೆ.
ಮುಂದಿನ 24 ಗಂಟೆ ಮಳೆ ಮುನ್ಸೂಚನೆ: ಇನ್ನು ಮುಂದಿನ 24 ಗಂಟೆಯ ಅವಧಿಯಲ್ಲಿ
ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಚಿತ್ರದುರ್ಗ, ಕೋಲಾರ, ಮೈಸೂರು, ಚಾಮರಾಜನಗರ,
ಕೊಡಗು, ಚಿಕ್ಕಮಗಳೂರು, ತುಮಕೂರು ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಮಿಂಚು ಗುಡುಗು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ.
ಅಲ್ಲದೇ ಉತ್ತರ ಒಳನಾಡು, ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ
ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮುಂದಿನ 48 ಗಂಟೆ: ಇನ್ನು ಮುಂದಿನ 48 ಗಂಟೆಯ ಅವಧಿಯಲ್ಲಿ ದಕ್ಷಿಣ ಒಳನಾಡಿನ ಎಲ್ಲ ಜಿಲ್ಲೆಗಳ ಕೆಲವು ಕಡೆಗಳಲ್ಲಿ
ಮಿಂಚು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಒಳನಾಡಿನ ಬೀದರ, ಕಲಬುರಗಿ, ಬಾಗಲಕೋಟೆ,
ಗದಗ ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಕರಾವಳಿ ಹಾಗೂ ಉತ್ತರ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
 
            ಮಿಂಚುಗುಡುಗು ಮುನ್ನೆಚ್ಚರಿಕೆ
ಮುಂದಿನ 24 ಗಂಟೆಯ ಅವಧಿಯಲ್ಲಿ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಿಂಚು ಗುಡುಗು ಸಾಧ್ಯತೆ ಇದೆ.
ಗರಿಷ್ಠ ಉಷ್ಣಾಂಶದ ಎಚ್ಚರಿಕೆ
ರಾಜ್ಯದಲ್ಲಿ ಗರಿಷ್ಠ ಉಷ್ಣಾಂಶವು ಉತ್ತರ ಒಳನಾಡಿನ ಹಲವು ಕಡೆಗಳಲ್ಲಿ ಹಾಗೂ ದಕ್ಷಿಣ ಒಳನಾಡು
ಮತ್ತು ಕರಾವಳಿಯ ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ.
ರಾಜ್ಯದಲ್ಲಿ ಸಾಮಾನ್ಯ ಮಳೆಯಾಗುವ ಸಾಧ್ಯತೆ ಇರುವುದರಿಂದ ಮೀನುಗಾರರಿಗೆ ಯಾವುದೇ ಮುನ್ಸೂಚನೆ ನೀಡಿಲ್ಲ.
ಇನ್ನು ಬೆಂಗಳೂರು ನಗರದಲ್ಲಿ ಮುಂದಿನ 24 ಗಂಟೆಯ ಅವಧಿಯಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು,
ಸಂಜೆ/ ರಾತ್ರಿಯ ಸಮಯದಲ್ಲಿ ಕೆಲವು ಕಡೆಗಳಲ್ಲಿ ಹಗುರ ಮಳೆ/ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಇನ್ನು ಗರಿಷ್ಠ ಉಷ್ಣಾಂಶವು 33 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶವು 22 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.
Pic Credits: pexels
 
                 
                 
                 
                                     
                                         
                                         
                         
                         
                         
                         
                         
        
Share your comments